• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಪಾದಯಾತ್ರೆ ಪ್ರಹಸನಕ್ಕೆ ಆರಂಭಕ್ಕೂ ಮುನ್ನವೇ ತೆರೆ-ಪ್ರಿಯಾಂಕ್‌ ಖರ್ಗೆ ವ್ಯಂಗ್ಯ

ಪ್ರತಿಧ್ವನಿ by ಪ್ರತಿಧ್ವನಿ
January 15, 2026
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿ ಪಾದಯಾತ್ರೆ ಪ್ರಹಸನಕ್ಕೆ ಆರಂಭಕ್ಕೂ ಮುನ್ನವೇ ತೆರೆ-ಪ್ರಿಯಾಂಕ್‌ ಖರ್ಗೆ ವ್ಯಂಗ್ಯ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಳ್ಳಾರಿಯಿಂದ ಬೆಂಗಳೂರಿಗೆ ಹಮ್ಮಿಕೊಳ್ಳಲುದ್ದೇಶಿಸಿದ್ದ ಪಾದಯಾತ್ರೆಗೆ ಸಂಬಂಧಿಸಿದಂತೆ ಬಿಜೆಪಿಯಲ್ಲೇ ಗೊಂದಲ ಉಂಟಾಗಿದೆ. ಪಾದಯಾತ್ರೆ ಕುರಿತು ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿದ್ದರೆ, ವಿಜಯೇಂದ್ರ ಅನುಮತಿ ನೀಡಿದ ಬಳಿಕ ಪಾದಯಾತ್ರೆ ಕೈಗೊಳ್ಳಲಾಗುವುದು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.

ADVERTISEMENT
DK Shivakumar : ಕಾಂಗ್ರೆಸ್‌ ಗ್ಯಾರಂಟಿ ಬಗ್ಗೆಅಚ್ಚರಿ ಹೇಳಿಕೆ ಕೊಟ್ಟ ಡಿಕೆಶಿ..! #darshan #dboss #dkshivakumar

ಬಿಜೆಪಿಯಲ್ಲಿ ಉಂಟಾಗಿರುವ ಈ ಗೊಂದಲ ಕಾಂಗ್ರೆಸ್‌ ನಾಯಕರ ಬಾಯಿಗೆ ಆಹಾರವಾಗಿದ್ದು, ಸಚಿವ ಪ್ರಿಯಾಂಕ್‌ ಖರ್ಗೆ ಕಾಲೆಳೆದುಕೊಳ್ಳುವ ಆಟದಲ್ಲಿ ಬಳ್ಳಾರಿ ಪಾದಯಾತ್ರೆ ಪ್ರಹಸನದ ಪ್ರದರ್ಶನ ಆರಂಭಕ್ಕೂ ಮುನ್ನವೇ ತೆರೆ ಬಿದ್ದಿದೆ ಎಂದು ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ಪಾದಯಾತ್ರೆ ಮಾಡಬೇಕೆಂದರೆ ಒಟ್ಟಿಗೆ ಹೆಜ್ಜೆ ಹಾಕುವ ಕಾಲುಗಳು ಬೇಕು, ಆದರೆ ಬಿಜೆಪಿಯಲ್ಲಿ ಒಬ್ಬರಿಗೊಬ್ಬರು ಕಾಲೆಳೆಯುವವರೇ ಇರುವಾಗ ಪಾದಯಾತ್ರೆಗೆ ಪಾದಗಳು ಸೇರುವುದಾದರೂ ಹೇಗೆ. ಕಾಲೆಳೆದುಕೊಳ್ಳುವ ಆಟದಲ್ಲಿ “ಬಳ್ಳಾರಿ ಪಾದಯಾತ್ರೆ” ಪ್ರಹಸನದ ಪ್ರದರ್ಶನ ಆರಂಭಕ್ಕೂ ಮುನ್ನವೇ ತೆರೆ ಬಿದ್ದಿದೆ.

Sri Ramulu on Siddaramaiah : ಪಾದಯಾತ್ರೆಗೆ ಹೈಕಮಾಂಡ್‌ ಒಪ್ಪಿಗೆ ಕೊಟ್ಟಿಲ್ವ ಸರ್..? #siddaramaiah #bjp

ಪಾದಯಾತ್ರೆಯನ್ನು ಮುನ್ನಡೆಸುವ ನಾಯಕತ್ವವಿಲ್ಲ, ಯಾರಾದರೂ ನಾಯಕರಾಗಿಬಿಡುವ ಅಸೂಯೆ. ಬಣ ಜಗಳದಲ್ಲಿ ಒಟ್ಟಿಗೆ ಹೆಜ್ಜೆ ಹಾಕುವಲ್ಲಿ ಇಲ್ಲದ ಒಮ್ಮತ. ಇದೆಲ್ಲಕ್ಕೂ ಮಿಗಿಲಾಗಿ ಪಾದಯಾತ್ರೆಗೆ ವ್ಯಕ್ತವಾಗದ ಜನ ಬೆಂಬಲ, ಇದೆಲ್ಲವನ್ನೂ ಅರಿತ ಬಿಜೆಪಿಯವರ ಪಾದಗಳು ಜಗನ್ನಾಥ ಭವನದಿಂದ ಹೊರಗೆ ಹೊರಡದೆ ನಿಂತಿವೆ. ಬಿಜೆಪಿಯ ಪಾದಯಾತ್ರೆ ರಾಜಕೀಯ ಜಿದ್ದಿಗಾಗಿಯೇ ಹೊರತು ಜನ ಕೇಂದ್ರಿತ ವಿಷಯಗಳಿಗಾಗಿ ಅಲ್ಲ, ಹೀಗಿರುವಾಗ ಯಾತ್ರೆಗೆ ಜನ ಬೆಂಬಲ ಸಿಗುವುದು ಕನಸಿನ ಮಾತು ಎಂದು ಟೀಕೆ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷವು ಅಭೂತಪೂರ್ವ ಜನ ಬೆಂಬಲದೊಂದಿಗೆ ಮಾಡಿದ್ದ ಚಾರಿತ್ರಿಕ ಬಳ್ಳಾರಿ ಪಾದಯಾತ್ರೆಯು, ಜನ ಬಿಜೆಪಿಯನ್ನು ಕಿತ್ತೆಸೆಯುವಂತೆ ಮಾಡಿತ್ತು. ಮೇಕೆದಾಟು ಪಾದಯಾತ್ರೆಯನ್ನು ಜನ ಹಿತಕ್ಕಾಗಿ ಮಾಡಿದ್ದೆವು, ಸುಪ್ರೀಂ ಕೋರ್ಟಿನಲ್ಲಿ ಕರ್ನಾಟಕಕ್ಕೆ ಯಶಸ್ಸು ದೊರಕಿದೆ. ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಪಾದಯಾತ್ರೆ ನಡೆಸಿದ್ದೆವು, ಅದರ ಪರಿಣಾಮ, ಯಶಸ್ಸನ್ನು ನಾಡು ಕಂಡಿದೆ. ಕಾಂಗ್ರೆಸ್ ನಡೆಸಿದ ಎಲ್ಲಾ ಪಾದಯಾತ್ರೆಗಳಿಗೆ ಅಪಾರ ಜನಬೆಂಬಲ ವ್ಯಕ್ತವಾಗಿದೆ, ನಾವು ಎತ್ತಿಕೊಂಡ ವಿಷಯಗಳಿಗೆ ಯಶಸ್ಸೂ ದೊರಕಿದೆ. ಏಕೆಂದರೆ ನಾವು ಪಾದಯಾತ್ರೆಗಳನ್ನು ಜನರಿಗಾಗಿ ನಡೆಸಿದ್ದೇವೆ ಹೊರತು ರಾಜಕೀಯ ಮೇಲಾಟಕ್ಕಾಗಿ ಅಲ್ಲ. ಬಿಜೆಪಿ ಎಂದಿಗೂ ಕಾಂಗ್ರೆಸ್ಸಿನಂತೆ ಪಾದಯಾತ್ರೆ ಮಾಡಲು ಸಾಧ್ಯವಿಲ್ಲ, ಏಕೆಂದರೆ ಅವರಿಗೆ ಕಾಂಗ್ರೆಸ್ಸಿನಂತೆ ಜನಪರ ಚಿಂತನೆಗಳಿಲ್ಲ ಎಂದು ಪ್ರಿಯಾಂಕ್‌ ಖರ್ಗೆ ಬಿಜೆಪಿ ವಿರುದ್ಧ ಲೇವಡಿ ಮಾಡಿದ್ದಾರೆ.

Tags: ballariBallari ConfilctBJPBY VijayendracongressKarnataka PoliticsPadayathrePoliticsPriyank Kharge
Previous Post

ವಿಶ್ವಸಂಸ್ಥೆಯಲ್ಲಿ ಕನ್ನಡತಿಯ ಸಾಧನೆ : ಸೇನಾಧಿಕಾರಿ ಸ್ವಾತಿ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ..

Next Post

ತಿಂಗಳ ಒಳಗೆ OTTಗೆ ಸ್ಟಾರ್ ನಟರ ಸಿನಿಮಾ..!

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ತಿಂಗಳ ಒಳಗೆ OTTಗೆ ಸ್ಟಾರ್ ನಟರ ಸಿನಿಮಾ..!

ತಿಂಗಳ ಒಳಗೆ OTTಗೆ ಸ್ಟಾರ್ ನಟರ ಸಿನಿಮಾ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada