ಸುಳ್ಯ ( ದಕ್ಷಿಣ ಕನ್ನಡ) : ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ವಂಚಿತರಾಗಿರುವ ಮೀನುಗಾರಿಕಾ ಸಚಿವ ಎಸ್. ಅಂಗಾರ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಈ ವಿಚಾರವಾಗಿ ಇಂದು ಸುಳ್ಯದಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅಂಗಾರ, ಪ್ರಾಮಾಣಿಕ ರಾಜಕಾರಣಕ್ಕೆ ಈಗ ಬೆಲೆಯೇ ಇಲ್ಲ ಎಂಬಂತಾಗಿದೆ. ನನಗೆ ಪಕ್ಷ ಟಿಕೆಟ್ ನೀಡಿಲ್ಲ ಎಂದು ಬೇಸರ ಖಂಡಿತ ಇಲ್ಲ. ಆದರೆ ಇಷ್ಟು ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದ್ದಕ್ಕೆ ಕನಿಷ್ಟ ಗೌರವ ನೀಡಬಹುದಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನನಗೆ ಲಾಬಿ ಮಾಡಿ ಗೊತ್ತಿಲ್ಲ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಇನ್ನು ನಾನು ಪಕ್ಷದ ಯಾವುದೇ ಕಾರ್ಯದಲ್ಲಿ ಭಾಗಿಯಾಗುವುದಿಲ್ಲ. ಹೊಸ ಅಭ್ಯರ್ಥಿಯ ಪ್ರಚಾರ ಕಾರ್ಯಕ್ಕೂ ನಾನು ಇರುವುದಿಲ್ಲ. ಹೊಸ ಅಭ್ಯರ್ಥಿಯ ಗೆಲುವನ್ನು ಬಿಜೆಪಿಯೇ ನೋಡಿಕೊಳ್ಳಲಿ ಎಂದಿದ್ದಾರೆ.






