• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾರ್ಮಿಕ ಇಲಾಖೆ ಕಲಬುರಗಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಸಂತೋಷ್‌ ಲಾಡ್‌ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
January 20, 2025
in Top Story, ಕರ್ನಾಟಕ, ರಾಜಕೀಯ, ವಿಶೇಷ
0
ಕಾರ್ಮಿಕ ಇಲಾಖೆ ಕಲಬುರಗಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಸಂತೋಷ್‌ ಲಾಡ್‌ ಸೂಚನೆ
Share on WhatsAppShare on FacebookShare on Telegram


ಕಾರ್ಮಿಕ ಇಲಾಖೆಯ ಸೌಲಭ್ಯಗಳನ್ನು ಅರ್ಹರಿಗೆ ಒದಗಿಸಿ

ADVERTISEMENT

ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ಕಾರ್ಮಿಕ ಇಲಾಖೆಯ ಸೌಲಭ್ಯಗಳನ್ನು ಒದಗಿಸಬೇಕು. ಇಲಾಖೆ ಯೋಜನೆಗಳ ಕುರಿತು ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಕೈಗೊಳ್ಳಬೇಕೆಂದು ಕಾರ್ಮಿಕ ಇಲಾಖೆಯ ಸಚಿವ ಸಂತೋಷ ಎಸ್. ಲಾಡ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಕಲಬುರಗಿ ವಿಭಾಗದ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಲಬುರಗಿ ಭಾಗದ ಎಲ್ಲ ಜಿಲ್ಲೆಗಳಲ್ಲಿ ಇಲಾಖೆಯ ಯೋಜನೆಗಳು ಅಚ್ಚುಕಟ್ಟಾಗಿ ಅನುಷ್ಠಾನವಾಗಬೇಕು. ಏನಾದರೂ ಸಲಹೆ ಸೂಚನೆಗಳಿದ್ದಲ್ಲಿ ಅದನ್ನು ಲಿಖಿತ ರೂಪದಲ್ಲಿ ತೆಗೆದುಕೊಳ್ಳಬೇಕು. ಎಲ್ಲ ಕಚೇರಿಗಳಲ್ಲಿ ಸಹಾಯವಾಣಿ ಇರಬೇಕು. ಇಲಾಖೆಯ ಯೋಜನೆಗಳ ಕುರಿತು ಪ್ರತಿ ತಿಂಗಳು ಪ್ರಗತಿ ಪರಶೀಲನೆ ನಡೆಸಿ, ಕಚೇರಿಗೆ ವರದಿಯನ್ನು ಕಳಿಸಿಕೊಡಬೇಕು. ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ವಿಭಾಗದ ಎಲ್ಲ ಜಿಲ್ಲೆಯ ವಿಧಾನಸಭಾ ಕ್ಷೇತ್ರದ ಶಾಸಕರಿಗೆ ಇಲಾಖೆಯ ಯೋಜನೆಗಳ ಕುರಿತು ಮಾಹಿತಿ ನೀಡಬೇಕು. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಯೊಂದು ತಾಲೂಕಿನಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯಾಗಾರವನ್ನು ಕಾಲಕಾಲಕ್ಕೆ ಹಮ್ಮಿಕೊಳ್ಳಬೇಕು. ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯೊಗೆ ಇರುವ ಸಂಸ್ಥೆಗಳಲ್ಲಿ ಕನಿಷ್ಠ ವೇತನ ದರಗಳು, ವೇತನ ಪಾವತಿ ದಿನಾಂಕವನ್ನು ಕಡ್ಡಾಯ ಸಂಸ್ಥೆಯ ಸೂಚನಾ ಫಲಕದಲ್ಲಿ ಅಳವಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದರು.

ರಾಜ್ಯದಲ್ಲಿ ಈಗಾಗಲೇ ಕಾರ್ಮಿಕರಿಗೆ ಕಾರ್ಡುಗಳನ್ನು ವಿತರಿಸಲಾಗಿದೆ. ಮೂರ್ನಾಲ್ಕು ವರ್ಷಗಳಲ್ಲಿ ಕಾರ್ಮಿಕರ ನೋಂದಣಿ ಹೆಚ್ಚಳವಾಗಿದೆ. ಅನರ್ಹರೂ ಈ ಪಟ್ಟಿಯಲ್ಲಿ ಸೇರಿರಬಹುದಾದ ಆತಂಕವಿದೆ. ಅನರ್ಹರಿಗೆ ಕಾರ್ಡ್ ಕೊಟ್ಟಲ್ಲಿ ಅಧಿಕಾರಿ-ಸಿಬ್ಬಂದಿಯ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಏನಾದರು ಅಕ್ರಮಗಳು ನಡೆದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದರು.

ಎಸ್.ಸಿ ಮತ್ತು ಎಸ್.ಟಿ ಮಾಲೀಕತ್ವದ ಉದ್ಯಮಗಳಿಗೆ ನೆರವು: ಎಸ್.ಸಿ ಎಸ್.ಟಿ ಸಮುದಾಯದವರ ಮಾಲೀಕತ್ವದ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸಹಾಯಧನ ನೀಡಲಾಗುತ್ತಿದೆ. ಅಲ್ಲದೇ ಅದೇ ಕೈಗಾರಿಕೆಯಲ್ಲಿ ಕಾಯಂ ನೌಕರನಾಗಿ ನೇಮಕಗೊಂಡಿದ್ದಲ್ಲಿ ಅವರ ಕಾರ್ಯನಿರ್ವಹಣಾ ಅವಧಿಯ ಪಿ.ಎಫ್ ಸೇರಿದಂತೆ ಇತರೆ ಸೌಲಭ್ಯಗಳ ಶುಲ್ಕ ಇಲಾಖೆಯಿಂದಲೇ ಭರಿಸಲಾಗುವುದು ಎಂದರು.

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಾರ್ಮಿಕರಿಗೆ ಕಿಟ್‌ಗಳನ್ನು ಹಾಗೂ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಲ್ಲಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಸಮಯದಲ್ಲಿ ಸ್ಥಳೀಯ ಶಾಸಕರು ಹಾಗೂ ಸಂಸದರನ್ನು ಆಹ್ವಾನಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಕಲಬುರಗಿ ಭಾಗದ ಎಲ್ಲ ಜಿಲ್ಲೆಗಳಲ್ಲಿ ಕಾರ್ಮಿಕ ಇಲಾಖೆಯಿಂದ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯಡಿ ಸುಮಾರು 5,327 ತಪಾಸಣೆ ಕೈಗೊಳ್ಳಲಾಗಿದ್ದು, 226 ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆ ಪ್ರಕರಣಗಳು ಪತ್ತೆಯಾಗಿವೆ. ಈ ಸಂಬಂಧ ಮೊಕದ್ದಮೆಗಳನ್ನು ಹೂಡಲಾಗಿದೆ. 226 ಬಾಲ ಕಾರ್ಮಿಕ & ಕಿಶೋರ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಮಾನ್ವಿ ವಿಧಾನಸಭೆ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ್, ದೇವದುರ್ಗ ವಿಧಾನಸಭೆ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ.ನಾಯಕ, ಕಾರ್ಮಿಕ ಆಯುಕ್ತರಾದ ಡಾ.ಹೆಚ್.ಎನ್.ಗೋಪಾಲಕೃಷ್ಣ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಕಾರ್ಮಿಕ ಇಲಾಖೆಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕಾರ್ಯದರ್ಶಿಯಾದ ಭಾರತಿ ಡಿ., ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ಪುಟ್ಟಮಾದಯ್ಯ ಸೇರಿದಂತೆ ವಿಭಾಗದ ಎಲ್ಲ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಹಾಗೂ ಕಾರ್ಮಿಕ ನಿರೀಕ್ಷಕರು ಸೇರಿದಂತೆ ಇತರರು ಇದ್ದರು.

Pralhad Joshi: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ.! #siddaramaiah #dkshivakumar

ಸೌಲಭ್ಯ ವಿತರಣೆ:
ಈ ವೇಳೆ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳಿಗೆ ಸಚಿವರಿಂದ ಸೌಲಭ್ಯದ ಕಿಟ್ ಮತ್ತು ಚೆಕ್ ಗಳನ್ನು ವಿತರಿಸಲಾಯಿತು.

Tags: Minister Santhosh Ladminister santosh ladsanthosh ladSantosh Ladsantosh lad biographysantosh lad dharwadsantosh lad foundationsantosh lad in suvarna newssantosh lad interviewsantosh lad interview in suvarna newssantosh lad mlasantosh lad newssantosh lad speechsantosh lad statussantosh lad videosantosh lad with ajitsantosh lad with ajit hanamakkanavarsuvarna news hour special with santosh lad
Previous Post

ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸಮಾರಂಭ ನೇರಪ್ರಸಾರ

Next Post

ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post
ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada