• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಸಂತೋಷ್‌ ಲಾಡ್‌ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
February 10, 2025
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಸಂತೋಷ್‌ ಲಾಡ್‌ ಸೂಚನೆ
Share on WhatsAppShare on FacebookShare on Telegram

ಹಾಸನ : ಕಾರ್ಮಿಕ ಇಲಾಖೆ ಅಧಿಕಾರಿಗಳು ಕ್ರಿಯಾಶೀಲರಾಗಿ ಸಮನ್ವಯತೆಯಿಂದ ಕೆಲಸ ಮಾಡುವಂತೆ ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ (Santosh S Lad)ಅವರು ಸೂಚಿಸಿದರು.ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸುವ ಮುನ್ನ ಎಚ್ಚರವಹಿಸಿ ಪರಿಶೀಲನೆ ಮಾಡುವಂತೆ ಸೂಚಿಸಿದರು.

ADVERTISEMENT

ಹಾಸನ ಜಿಲ್ಲೆಗೆ ಇದುವರೆಗೆ 1,10,000 ಕಟ್ಟಡ ಕಾರ್ಮಿಕರಿಗೆ 38 ಕೋಟಿ ರೂಗಳ ಆರ್ಥಿಕ ಸೌಲಭ್ಯ ನೀಡಲಾಗಿದೆ. ಸ್ಥಳೀಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಭೇಟಿ ಮಾಡಿ ಅವರ ಸಲಹೆಗಳನ್ನು ಪಡೆದು ಕೆಲಸ ನಿರ್ವಹಿಸಬೇಕು ಎಂದರು.

ಕಾರ್ಮಿಕರಿಗೆ ನಿಗದಿತ ಕನಿಷ್ಠ ವೇತನ ಪಾವತಿ ಮಾಡದೆ ಇರುವ ಗುತ್ತಿಗೆದಾರರ ಪರವಾನಗಿ ಹಿಂಪಡೆಯಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಿದರು.ಹಾಸನ ಜಿಲ್ಲೆಯಲ್ಲಿ ಹೊರಗುತ್ತಿಗೆ ನೌಕರರ ಸೊಸೈಟಿ ರಚಿಸಿ ನೋಂದಣಿ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸೊಸೈಟಿಗೆ 4ಜಿ ವಿನಾಯಿತಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಪ್ಲಾಂಟೇಶನ್ ಮಾಲಿಕರೊಂದಿಗೆ ಚರ್ಚಿಸಿ ನಡೆಸಿ ಆಸಕ್ತಿ ಇರುವ ನರೇಗಾ ಕಾರ್ಮಿಕರನ್ನು ಪ್ಲಾಂಟೇಶನ್ ಕೆಲಸ ಮಾಡಲು ಬಳಸಿಕೊಳ್ಳ ಬಹುದಾಗಿದೆ ಈ ನಿಟ್ಟಿನಲ್ಲಿ ಗಮನಹರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಹೊರ ರಾಜ್ಯದ ಕಾರ್ಮಿಕರ ಅಗತ್ಯವಿರುವುದಿಲ್ಲ ಜೊತೆಗೆ ಸ್ಥಳೀಯ ಕಾರ್ಮಿಕರಿಗೆ ಕೆಲಸ ದೊರಕುತ್ತದೆ ಎಂದು ತಿಳಿಸಿದರು‌.

Suraj Revanna: ರಾಮಾಯಣ  ಬಗ್ಗೆ ಜನರಿಗೆ ವಿವರಿಸಿದ ಸೂರಜ್‌ ರೇವಣ್ಣ..! #prajwalrevanna #surajrevanna

ಸ್ಥಳೀಯ ಶಾಸಕರನ್ನು ಭೇಟಿ ಮಾಡಿ ಕಾರ್ಮಿಕ ಇಲಾಖೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲು ಈಗಾಗಲೇ ನಿರ್ದೇಶನ ನೀಡಲಾಗಿದೆ ಆದರೂ ಸ್ಥಳೀಯ ಶಾಸಕರನ್ನು
ಭೇಟಿ ಮಾಡಿಲ್ಲ ಬೇಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೀರಿ ಎಂದು ಕಾರ್ಮಿಕ ನಿರೀಕ್ಷಕರಿಗೆ ಎಚ್ಚರಿಸಿದರು.ಬಾಲ ಕಾರ್ಮಿಕರ ಹಾಗೂ ಕಿಶೋರ(Kiśōra)ಕಾರ್ಮಿಕರ ಪತ್ತೆಗಾಗಿ ಅನಿರೀಕ್ಷಿತ ಭೇಟಿ ನೀಡಿ. ಕಟ್ಟಡ ಕಾರ್ಮಿಕರಾಗಿ ನೋಂದಣಿ ಮಾಡಿಕೊಂಡಿರು ವವರು ಸವಲತ್ತು ಪಡೆಯುತ್ತಿದ್ದರೆ ಸರಿ, ಕೆಲವು ಕಟ್ಟಡ ಕಾರ್ಮಿಕರಲ್ಲದವರು ಸವಲತ್ತು ಪಡೆಯುತ್ತಿದ್ದರೆ ಅಂತಹ ಕಾರ್ಡ್ ವಜಾ ಮಾಡುವಂತೆ ಸೂಚಿಸಿದರು.

ಆಶಾದೀಪ ಕಾರ್ಯಕ್ರಮದಡಿ ಸಣ್ಣ ಕೈಗಾರಿಕೆಗಳಲ್ಲಿ ಪರಿಶಿಷ್ಟ ಮತ್ತು ಪರಿಶಿಷ್ಟ ಪಂಗಡದ ಮಕ್ಕಳಿಗೆ ಕೆಲಸ ನೀಡಿದರೆ ಪ್ರತಿ ತಿಂಗಳಿಗೆ 6000 ರೂ ಶಿಷ್ಯ ವೇತನವನ್ನು 2 ವರ್ಷದವರೆಗೆ ನೀಡಲಾಗುವುದು. ಇದರಿಂದ ಸ್ಥಳೀಯರಿಗೆ ಉದ್ಯೋಗ ದೊರೆಯುತ್ತದೆ ಜೊತೆಗೆ ಸಣ್ಣ ಕೈಗಾರಿಕೆ ಬೆಳವಣಿಗೆಗೆ ಸಹಾಯ ಮಾಡಿದಂತಾಗುತ್ತದೆ ಎಂದರು.

ಎರಡು ಅಥವಾ ಮೂರು ಜಿಲ್ಲೆಗಳನ್ನು ಸೇರಿಸಿ ಇ.ಎಸ್.ಐ(E.S.I)ವಿಶೇಷ ಆಸ್ಪತ್ರೆ ನಿರ್ಮಾಣಕ್ಕೆ ಅವಕಾಶವಿದೆ. ಈ ನಿಟ್ಟಿನಲ್ಲಿ ಸ್ಥಳ ಕೋರಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ಸ್ವರೂಪ್ ಪ್ರಕಾಶ್, ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ್,(Dr. N.V. Prasad,)ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಡಿ, ಕಾರ್ಮಿಕ ಆಯುಕ್ತರಾದ ಡಾ.ಹೆಚ್.ಎನ್. ಗೋಪಾಲಕೃಷ್ಣ,(Dr. H.N. Gopalakrishna)ಜಿಲ್ಲಾಧಿಕಾರಿ ಸತ್ಯಭಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ ಉಪಸ್ಥಿತರಿದ್ದರು.

Tags: minister santosh ladsanthosh ladsanthosh lad latest newssanthosh lad newssanthosh lad today newsSantosh Ladsantosh lad dharwadsantosh lad in suvarna newssantosh lad interviewsantosh lad interview in suvarna newssantosh lad livesantosh lad newssantosh lad speechsantosh lad statussantosh lad videosantosh lad with ajitsantosh lad with ajit hanamakkanavarsuvarna news hour special with santosh lad
Previous Post

‘ನಿಮಿತ್ತ ಮಾತ್ರ’ – ಪ್ರೇಕ್ಷಕರನ್ನು ಕಾಡಲು ಸಿದ್ಧವಾಗಿರುವ ಒಂದು ವಿಶಿಷ್ಟವಾದ ಪ್ಯಾರಸೈಕಲಾಜಿಕಲ್ ಥ್ರಿಲ್ಲರ್

Next Post

‘ಭುವನಂ ಗಗನಂ’ಗೆ ಸ್ಯಾಂಡಲ್ ವುಡ್ ಸಾಥ್…ಫೆ.15ಕ್ಕೆ ಪ್ರಮೋದ್-ಪೃಥ್ವಿ ಸಿನಿಮಾ ರಿಲೀಸ್

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
‘ಭುವನಂ ಗಗನಂ’ಗೆ ಸ್ಯಾಂಡಲ್ ವುಡ್ ಸಾಥ್…ಫೆ.15ಕ್ಕೆ ಪ್ರಮೋದ್-ಪೃಥ್ವಿ ಸಿನಿಮಾ ರಿಲೀಸ್

'ಭುವನಂ ಗಗನಂ'ಗೆ ಸ್ಯಾಂಡಲ್ ವುಡ್ ಸಾಥ್…ಫೆ.15ಕ್ಕೆ ಪ್ರಮೋದ್-ಪೃಥ್ವಿ ಸಿನಿಮಾ ರಿಲೀಸ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada