ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರು ಇಂದು ಮಡಿಕೇರಿಯ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೊಡಗು ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ, ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಶ್ರೀ ಎಂ.ಎಸ್. ಪೊನ್ನಣ್ಣ, ಕಾರ್ಮಿಕ ಇಲಾಖೆ ಆಯುಕ್ತರಾದ ಡಾ.ಎಚ್.ಎನ್. ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಐಶ್ವರ್ಯ, ಜಂಟಿ ಕಾರ್ಮಿಕ ಆಯುಕ್ತರಾದ ಡಾ. ಎಸ್.ಬಿ. ರವಿಕುಮಾರ್,

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಆನಂದ್ ಪ್ರಕಾಶ್ ಮೀನಾ, ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಕೆ.ರಾಮರಾಜನ್, ಉಪ ಕಾರ್ಮಿಕ ಆಯುಕ್ತರಾದ ಶ್ರೀ ಗುರುಪ್ರಸಾದ್, ಸಹಾಯಕ ಕಾರ್ಮಿಕ ಆಯುಕ್ತರಾದ ನಾಜಿಯಾ ಸುಲ್ತಾನ್, ಲಿಡ್ಕರ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮುಂಡರಗಿ ನಾಗರಾಜ್, ಕಾರ್ಮಿಕ ಅಧಿಕಾರಿಗಳಾದ ಶ್ರೀಮತಿ ಕಾವೇರಿ, ಹಿರಿಯ ಕಾರ್ಮಿಕ ನಿರೀಕ್ಷಕರಾದ ,

ಶ್ರೀ ಎಂ.ಎಂ.ಯತ್ನಟ್ಟಿ, ಗ್ಯಾರಂಟಿ ಅನುಷ್ಠಾನ ಸಮೀತಿಯ ರಾಜ್ಯ ಉಪಾಧ್ಯಕ್ಷ ರಾದ ಶ್ರೀ ಮೆಹರೋಜ್ ಖಾನ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಟಿ.ಎಂ ಧರ್ಮಜ ಉತ್ತಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.