• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕನ್ನಡಿಗರ ಸುಧೀರ್ಘ ಕಾಲದ ಬೇಡಿಕೆ ಈಡೇರಿಸಿದ ಶ್ರೇಯ ಪಡೆದ ಸಚಿವ ಸಂತೋಷ್ ಲಾಡ್ ! 

ಪ್ರತಿಧ್ವನಿ by ಪ್ರತಿಧ್ವನಿ
July 16, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕನ್ನಡಿಗರ ಸುಧೀರ್ಘ ಕಾಲದ ಬೇಡಿಕೆ ಈಡೇರಿಸಿದ ಶ್ರೇಯ ಪಡೆದ ಸಚಿವ ಸಂತೋಷ್ ಲಾಡ್ ! 
Share on WhatsAppShare on FacebookShare on Telegram

ಖಾಸಗಿ ಕ್ಷೇತ್ರಗಳಲ್ಲಿ (Private sector) ದುಡಿಯುವ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸೋಮವಾರ ನಡೆದ ಸಂಪುಟ ಸಭೆ (Cabinet meeting) ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Cm siddaramaiah) ಅವರ ನೇತೃತ್ವದಲ್ಲಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. 

ADVERTISEMENT

ಇದೇ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವುದಾಗಿ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ (Minister Santosh lad) ಅವರು ತಿಳಿಸಿದ್ದಾರೆ. 

‘ದಿ ಕರ್ನಾಟಕ ಸ್ಟೇಟ್ ಎಂಪ್ಲಾಯ್​​ಮೆಂಟ್ ಆಫ್ ಲೋಕಲ್ ಕ್ಯಾಡಿಡೇಟ್ಸ್ ಇನ್ ದಿ ಇಂಡಸ್ಟ್ರೀಸ್, ಫ್ಯಾಕ್ಟರೀಸ್ ಆ್ಯಂಡ್ ಲೋಕಲ್ ಎಷ್ಟಾಬ್ಲಿಷ್‌ಮೆಂಟ್ ಬಿಲ್-2024 ವಿಧೇಯಕದಂತೆ ಮ್ಯಾನೇಜ್‌ಮೆಂಟ್ ಹುದ್ದೆಗಳು ಶೇ.50 ಹಾಗೂ ನಾನ್ ಮ್ಯಾನೇಜ್‌ಮೆಂಟ್ ಶೇ.75ರಷ್ಟು ಹುದ್ದೆಗಳು ಸ್ಥಳೀಯರಿಗೆ ಮೀಸಲಿಡಲಾಗುತ್ತದೆ.

ಕರ್ನಾಟಕದಲ್ಲಿಯೇ (Karnataka) ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷದಿಂದ ವಾಸಿಸುತ್ತಿರುವವರು, ಕನ್ನಡ ಓದಲು, ಬರೆಯಲು ಮತ್ತು ಮಾತನಾಡಲು ಬರುವವರು, ನೋಡಲ್ ಏಜೆನ್ಸಿ ನಡೆಸುವ ಕನ್ನಡ ಪರೀಕ್ಷೆಯಲ್ಲಿ ಪಾಸಾದವರನ್ನು ಸ್ಥಳೀಯರು ಎಂದು ಪರಿಗಣಿಸಲಾಗುವುದು. ಮ್ಯಾನೇಜ್‌ಮೆಂಟ್​​ನಲ್ಲಿ ಸೂಪರ್‌ವೈಸ‌ರ್, ಮ್ಯಾನೇಜಿರಿಯಲ್, ಟೆಕ್ನಿಕಲ್, ಆಪರೇಷನಲ್, ಆಡಳಿತ ಸೇರಿ ಉನ್ನತ ಹುದ್ದೆಗಳಲ್ಲಿ ಶೇ.50 ಉದ್ಯೋಗ ಸ್ಥಳೀಯರಿಗೆ ಮೀಸಲಿಡಲಾಗುವುದು. ಇನ್ನು ನಾನ್-ಮ್ಯಾನೇಜ್‌ಮೆಂಟ್​​ನಲ್ಲಿ ಕ್ಲರ್ಕ್‌ಗಳು, ಕೌಶಲ, ಕೌಶಲ ರಹಿತ ಹಾಗೂ ಅರೆಕೌಶಲ, ಗುತ್ತಿಗೆ ನೌಕರ ಹಾಗೂ ಐಟಿ ಹುದ್ದೆಗಳಲ್ಲಿ ಶೇ.75 ಮೀಸಲು ಸ್ಥಳೀಯರಿಗೆ ನೀಡುವ ವಿಧೇಯಕ ಇದಾಗಿದೆ.

ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ದಂಡ ವಿಧಿಸುವ ಅಂಶವನ್ನೂ ವಿಧೇಯಕದಲ್ಲಿ ಸೇರಿಸಲಾಗಿದೆ. ಕನಿಷ್ಠ 10 ಸಾವಿರ ರೂ. ಹಾಗೂ 25 ಸಾವಿರ ರೂ.ಗಳ ವರೆಗೆ ದಂಡ ವಿಸ್ತರಣೆ ಮಾಡಲು ಅವಕಾಶ ನೀಡಲಾಗುತ್ತದೆ. ಆ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ ವಿಧಿಸಲಾಗುತ್ತದೆ.

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ಈ ನಿಟ್ಟಿನಲ್ಲಿ ವಿಧೇಯಕವು ಮಹತ್ವದ ಪಾತ್ರ ವಹಿಸಲಿದೆ. ಕನ್ನಡಿಗ ನೌಕರರ ಜೀವನ ಭದ್ರತೆಗೆ ಇದು ಸಹಾಯವಾಲಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್‌ ಲಾಡ್‌ ಅವರು ತಿಳಿಸಿದ್ದಾರೆ.

Tags: ಕನ್ನಡಿಗರಿಗೆ ಉದ್ಯೋಗಕನ್ನಡಿಗರಿಗೆ ಉದ್ಯೋಗ ಮೀಸಲುಕಾರ್ಮಿಕ ಸಚಿವಸಚಿವ ಸಂತೋಷ್ ಲಾಡ್ಸಂಪುಟ ಸಭೆ
Previous Post

ಕುಮಾರಸ್ವಾಮಿಗೆ ಹಿಟ್ ಅಂಡ್ ರನ್ ಮಾಡುವುದು ಬಿಟ್ಟರೆ, ರಾಜ್ಯದ ಹಿತದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ: ಡಿ.ಕೆ. ಶಿವಕುಮಾರ್

Next Post

ಸಂತೋಷ್‌ ಲಾಡ್ ಚಾಟಿಗೆ ಸಿ ಟಿ ರವಿ, ಬಿಜೆಪಿ ತಬ್ಬಿಬ್ಬು..

Related Posts

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?
ರಾಜಕೀಯ

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

by ಪ್ರತಿಧ್ವನಿ
May 20, 2026
0

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾರ್ಡಿಕ್ ಶೃಂಗಸಭೆಯಲ್ಲಿ ಮಾತನಾಡಿ, “ಪ್ರಜಾಪ್ರಭುತ್ವ, ಕಾನೂನಿನ ಆಡಳಿತ ಹಾಗೂ ಜನಪರ ಮೌಲ್ಯಗಳೇ ಭಾರತ ಮತ್ತು ನಾರ್ಡಿಕ್ ರಾಷ್ಟ್ರಗಳನ್ನು ಸಹಜ ಪಾಲುದಾರರನ್ನಾಗಿಸಿವೆ” ಎಂದು...

Read moreDetails
ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

May 20, 2026
ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಬಿಜೆಪಿ ಮೆಗಾ ಪ್ಲಾನ್: ರಾಜ್ಯದ ನಾಲ್ಕು ಭಾಗಗಳಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

May 19, 2026
Next Post
ಸಂತೋಷ್‌ ಲಾಡ್ ಚಾಟಿಗೆ ಸಿ ಟಿ ರವಿ, ಬಿಜೆಪಿ ತಬ್ಬಿಬ್ಬು..

ಸಂತೋಷ್‌ ಲಾಡ್ ಚಾಟಿಗೆ ಸಿ ಟಿ ರವಿ, ಬಿಜೆಪಿ ತಬ್ಬಿಬ್ಬು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada