• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸಂತೋಷ್‌ ಲಾಡ್‌ ಸೂಚನೆ.

ಪ್ರತಿಧ್ವನಿ by ಪ್ರತಿಧ್ವನಿ
January 6, 2025
in Top Story, ಇತರೆ / Others, ಕರ್ನಾಟಕ
0
ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸಂತೋಷ್‌ ಲಾಡ್‌ ಸೂಚನೆ.
Share on WhatsAppShare on FacebookShare on Telegram

ಶಿವಮೊಗ್ಗ : ಜನವರಿ 06: ರಾಜ್ಯದಲ್ಲಿ ಈಗಾಗಲೇ 58 ಲಕ್ಷ ಕಾರ್ಮಿಕರಿಗೆ ಕಾರ್ಮಿಕ ನೋಂದಣಿ ಕಾರ್ಡುಗಳನ್ನು ವಿತರಿಸಲಾಗಿದೆ. ಕಳೆದ 3- 4ವರ್ಷಗಳಲ್ಲಿ ನೋಂದಾಣಿಯಾಗಿರುವ ಕಾರ್ಮಿಕರ ಸಂಖ್ಯೆಯ ಹೆಚ್ಚಳವಾಗಿರುವುದನ್ನು ಗಮನಿಸಿದಾಗ ಅನರ್ಹರೂ ಈ ಪಟ್ಟಿಯಲ್ಲಿ ಸೇರಿರಬಹುದಾದ ಆತಂಕವಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಿ, ಕಾರ್ಮಿಕ ಕಾರ್ಡನ್ನು ವಿತರಿಸುವಲ್ಲಿ ಅಧಿಕಾರಿಗಳು ಅನರ್ಹರಿಗೂ ಕಾರ್ಡ್‌ನ್ನು ನೀಡಲು ಮುಂದಾದಲ್ಲಿ ಅಂತಹ ಅಧಿಕಾರಿ-ಸಿಬ್ಬಂಧಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಮುಂದಿನ ಎಲ್ಲಾ ಅಕ್ರಮಗಳಿಗೆ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಮಿಕ ಇಲಾಖೆಯ ವತಿಯಿಂದ ಅನುಷ್ಠಾನದಲ್ಲಿರುವ ಯೋಜನೆಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಕೈಗಾರಿಕಾ ಘಟಕಗಳಲ್ಲಿ ಖಾಯಂ ಹಾಗೂ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಕುರಿತಾದ ವಿಸ್ತ್ರತ ಮಾಹಿತಿಯನ್ನು ಆಯಾ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಹೊಂದಿರಬೇಕು. ಕೈಗಾರಿಕಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಈಗಾಗಲೇ ಸರ್ಕಾರ ನಿಗಧಿಪಡಿಸಿರುವ ಮೊತ್ತ ಹಾಗೂ ಇತರೆ ಸೌಲಭ್ಯಗಳನ್ನು ಸಂಸ್ಥೆಯ ಮುಖ್ಯಸ್ಥರು ಪಾವತಿಸಬೇಕು. ನಿಯಮಾನುಸಾರ ನಿಗದಿಪಡಿಸಿದ ವೇತನ-ಭತ್ಯೆಗಳನ್ನು ಪಾವತಿಸದಿರುವ ಸಂಸ್ಥೆಗಳಿಗೆ ನೋಟೀಸ್ ನೀಡಿ ನೀಡಿರುವ ಪರವಾನಗೆಯನ್ನು ರದ್ದುಪಡಿಸುವಂತೆ ಅವರು ಕಾರ್ಮಿಕಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜೀಲೆಯಲ್ಲಿ ಅನುಷ್ಠಾನಗೊಂಡಿರುವ ಬಾಲಕಾರ್ಮಿಕ ಕಾರ್ಯಕ್ರಮಗಳು ಮತ್ತು ಕಾರ್ಮಿಕರಿಗೆ ದೊರಕಿಸಿಕೊಡಲಾಗಿರುವ ಗ್ರಾಚ್ಯುವಿಟಿ ಮತ್ತಿತರ ಸೌಲಭ್ಯಗಳ ಕುರಿತು ಪ್ರತಿ ಮಾಹೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ | ಪರಿಶೀಲಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ನೋಂದಾಯಿತ ಕಾರ್ಮಿಕರ 38,190ಮಕ್ಕಳಿಗೆ 8.93ಕೋಟಿ ಮೊತ್ತದ ಸ್ಥಾಲರ್‌ಶಿಫ್ ವಿತರಿಸಿ, ಕಾರ್ಮಿಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಅನೇಕ ಮಹತ್ತ್ವದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಎಸ್.ಸಿ./ಎಸ್.ಟಿ. ಅಭ್ಯರ್ಥಿಗಳ ಮಾಲೀಕತ್ವದ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಪ್ರತಿ ಮಾಹೆ 7,000/-ರೂ.ಗಳ ಸಹಾಯಧನವನ್ನು ನೀಡಲಾಗುತ್ತಿದೆ. ಅಲ್ಲದೇ ಅದೇ ಕೈಗಾರಿಕೆಯಲ್ಲಿ ಖಾಯಂ ನೌಕರನಾಗಿ ನೇಮಕಗೊಂಡಿದ್ದಲ್ಲಿ ಅವರ ಕಾರ್ಯನಿರ್ವಹಣಾ ಅವಧಿಯ ಪಿ.ಎಫ್ ಸೇರಿದಂತೆ ಇತರೆ ಸೌಲಭ್ಯಗಳ ಶುಲ್ಕಗಳನ್ನು ಇಲಾಖೆಯಿಂದಲೇ ಭರಿಸಲಾಗುವುದು ಎಂದರು.

ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಶ್ರೀಮತಿ ಶಾರದಾ ಪೂರ್ಯಾನಾಯ್ಸ್, ಎಸ್.ಎನ್.ಚನ್ನಬಸಪ್ಪ, ಶ್ರೀಮತಿ ಬಲ್ಕಿಶ್‌ ಬಾನು, ಡಾ|| ಧನಂಜಯ ಸರ್ಜಿ, ಬೋವಿ ಸಮಾಜದ ಅಧ್ಯಕ್ಷ ರವಿಕುಮಾರ್, ಜಿಲ್ಲಾಧಿಕಾರಿ ಗುರುದತ್ತಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್, ಕಾರ್ಮಿಕ ಆಯುಕ್ತ ಗೋಪಾಲಕೃಷ್ಣ, ಕಟ್ಟಡ ಕಾರ್ಮಿಕ ಮತ್ತು ಇತರೆ ಕಾರ್ಮಿಕ ನಿರ್ಮಾಣ ಮಂಡಳಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಭಾರತಿ ಸೇರಿದಂತೆ ಇಲಾಖೆಯ ಜಂಟಿ ಕಾರ್ಮಿಕ ಆಯುಕ್ತ, ಉಪ ಕಾರ್ಮಿಕ ಆಯುಕ್ತರು, ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕ ನಿರೀಕ್ಷಕರುಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳಲ್ಲಿ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಸೌಲಭ್ಯದ ಕಿಟ್‌ ಹಾಗೂ ವಿವಿಧ ಸೌಲಭ್ಯಗಳ ಚೆಕ್‌ ಅನ್ನು ಸಚಿವರು ಹಾಗೂ ಗಣ್ಯರು ವಿತರಿಸಿದರು.

Tags: 58 lakh workersBovi Samaj President RavikumarCongress PartyDistrict Collector GurudattahegadeDistrict Superintendent of Police G.K.Mithun KumarLabor Commissioner Gopalakrishna.Labor Construction Board Chief Executive Officer Mrs. Bharti.minister santosh ladmonthly progress review meeting.MP B. Y. Raghavendra MLA Belur GopalakrishnaMrs. Balkish BanuMrs. Sharada PooryanaisS. N. ChannabasappaShimoga.Zilla Panchayat Abdul Nazir Saab Hall.Zilla Panchayat Chief Executive Officer N. Hemanth
Previous Post

HMPV ವೈರಸ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡ Almeida Gladson..

Next Post

ಎಲ್ಲಾ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಸಚಿವ ಕೆ.ಜೆ.ಜಾರ್ಜ್

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post

ಎಲ್ಲಾ ಎಸ್ಕಾಂ ಸಿಬ್ಬಂದಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ: ಸಚಿವ ಕೆ.ಜೆ.ಜಾರ್ಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada