• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Santhosh Lad: ಅಸಂಘಟಿತ ಕಾರ್ಮಿಕರ ಸೌಲಭ್ಯ ಸದುಪಯೋಗಕ್ಕೆ ಸಚಿವ ಸಂತೋಷ್‌ ಎಸ್‌ ಲಾಡ್ ಕರೆ

ಪ್ರತಿಧ್ವನಿ by ಪ್ರತಿಧ್ವನಿ
September 23, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಚಿಕ್ಕಮಗಳೂರಿನಲ್ಲಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮ

ADVERTISEMENT

ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಪ್ರತಿಯೊಬ್ಬ ಅಸಂಘಟಿತ ಕಾರ್ಮಿಕರು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಎಂದು ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಎಸ್.ಲಾಡ್ ತಿಳಿಸಿದರು.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಇಂದು ನಗರದ ವಿಜಯಪುರದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಅಸಂಘಟಿತ ಕಾರ್ಮಿಕರಿಗೆ ಸೂಕ್ತ ಭದ್ರತೆ ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ. ಜೊತೆಗೆ ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳು, ಜನಪದ ಕಲೆ, ಹೀಗೆ ವಿವಿಧ ರೀತಿಯಲ್ಲಿ ತೊಡಗಿಸಿಕೊಂಡಿರುವ ಅಸಂಘಟಿತ ಕಾರ್ಮಿಕರಿಗೂ ಸೌಲಭ್ಯ ಜಾರಿಗೊಳಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಆಟೋ ರಿಕ್ಷಾ ಚಾಲಕರು, ಪೇಯಿಂಟಿಂಗ್ ಮಾಡುವವರು ಸೇರಿದಂತೆ ಹಲವರಿಗೆ ಕಾರ್ಮಿಕ ಕಾಯ್ದೆ ಜಾರಿಗೊಳಿಸಲಾಗಿದ್ದು, ಅಸಂಘಟಿತ ಕಾರ್ಮಿಕರು ಅಪಘಾತದಲ್ಲಿ ಮೃತರಾದಲ್ಲಿ ೫ ಲಕ್ಷ ರೂ.ವರೆಗೂ ಪರಿಹಾರ ವಿತರಿಸಲಾಗುತ್ತದೆ ಎಂದ ಅವರು, ಸ್ವಿಗ್ಗಿ, ಜೊಮೆಟೋಗಳಂತಹ ಸಂಸ್ಥೆಯಲ್ಲಿ ಆಹಾರ ಸರಬರಾಜು ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್‌ಕಾರ್ಟ್, ಪೋರ್ಟಲ್, ಫಾರ್ಮಸಿ, ಬ್ಲಿಂಕಿಟ್, ಬಿಗ್ ಬಾಸ್ಕೆಟ್, ಡೊಮಿನಾಜ್ ಮತ್ತಿತರ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡವರೆಲ್ಲರೂ ಅಸಂಘಟಿತ ಕಾರ್ಮಿಕರಾಗಿದ್ದಾರೆ ಎಂದು ತಿಳಿಸಿದರು.

ದೇಶದಲ್ಲಿ ತಲಾ ಆದಾಯದಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ. ಜಿಎಸ್‌ಟಿ ಸಂಗ್ರಹದಲ್ಲೂ ಮುಂಚೂಣಿಯಲ್ಲಿದ್ದೇವೆ. ಇದಕ್ಕೆ ಗ್ಯಾರಂಟಿ ಯೋಜನೆಗಳ ಯಶಸ್ಸು ಕಾರಣ. ಆಶಾ ದೀಪ ಕಾರ್ಯಕ್ರಮದಲ್ಲಿ ಎಸ್‌ಸಿ, ಎಸ್‌ಟಿ ವರ್ಗದವರಿಗೆ ಕೆಲಸ ನೀಡುವವರಿಗೆ ರೂ. ೭೫೦೦ ರವರೆಗೆ ನೆರವು ನೀಡಲಾಗುತ್ತಿದೆ. ಹೊರಗುತ್ತಿಗೆ ನೌಕರರು ಸೊಸೈಟಿ ಮೂಲಕ ಕಾರ್ಯ ನಿರ್ವಹಿಸಲಿದ್ದು, ಸಂಬಳ ಸಮಸ್ಯೆ ತಪ್ಪಲಿದೆ. ಮುಂದಿನ ದಿನಗಳಲ್ಲಿ ಮನೆ ಕೆಲಸ ಕಾರ್ಮಿಕರಿಗೆ ಕನಿಷ್ಠ ವೇತನ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದರು.
ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಕರ್ನಾಟಕ ರಾಜ್ಯ ಸರ್ಕಾರವು ಅಸಂಘಟಿತ ವರ್ಗಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ “ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ”ಯನ್ನು ಅನು?ನಗೊಳಿಸಲಾಗುತ್ತಿದೆ ಎಂದರು.

ಪ್ರಾರಂಭಿಕವಾಗಿ ೨೬ ವರ್ಗಗಳ ಅಸಂಘಟತ ಕಾರ್ಮಿಕರನ್ನು ನೋಂದಾಯಿಸಲಾಗುತ್ತಿತ್ತು. ಪ್ರಸ್ತುತ ಹೊಸದಾಗಿ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದ ಪಾರಂಪರಿಕ ವೃತ್ತಿಯಲ್ಲಿ ತೊಡಗಿರುವ ೩೮ ವರ್ಗಗಳು ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಹಾಗೂ ಅರೆಅಲೆಮಾರಿ ಪಂಗಡದ ಕುಲಕಸುಬಿನಲ್ಲಿ ತೊಡಗಿರುವ ೨೭ ವರ್ಗಗಳ ಕಾರ್ಮಿಕರು ಸೇರಿದಂತೆ ಒಟ್ಟಾರೆ ೯೧ ವರ್ಗಗಳ ಕಾರ್ಮಿಕರನ್ನು ಉಚಿತವಾಗಿ ನೋಂದಾಯಿಸಿ ಸೌಲಭ್ಯಗಳನ್ನೊಳಗೊಂಡ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದ್ದು, ರಾಜ್ಯದಲ್ಲಿ ಸುಮಾರು ೩೫ ಲಕ್ಷ ಕಾರ್ಮಿಕರು ಇರುವುದಾಗಿ ಅಂದಾಜಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದ್ದು, ದೇಶದಲ್ಲಿಯೇ ಮೊದಲು ಜಾರಿಗೆ ರಾಜ್ಯ ನಮ್ಮದು. ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ. ೨ ಲಕ್ಷ ಹಾಗೂ ಜೀವ ವಿಮಾ ರೂ. ೨ ಲಕ್ಷ ಸೇರಿ ಒಟ್ಟು ರೂ. ೪ ಲಕ್ಷಗಳು, ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ. ೨ ಲಕ್ಷಗಳವರೆಗೆ ಜೊತೆಗೆ ಆಸ್ಪತ್ರೆ ವೆಚ್ಚ ಮರುಪಾವತಿ ರೂ. ೧ ಲಕ್ಷಗಳವರೆಗೆ ಹಾಗೂ ಜೀವ ವಿಮಾ ರೂ. ೨ ಲಕ್ಷಗಳು ನೀಡಲಾಗುತ್ತದೆ ಎಂದು ಹೇಳಿದರು.
ಶಾಸಕರಾದ ಹೆಚ್.ಡಿ.ತಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ೧೦೯ ಅಸಂಘಟಿತ ಕಾರ್ಮಿಕರಿಗೆ ಅಪಘಾತ, ಸಹಜ ಮರಣವಾದವರಿಗೆ ಪರಿಹಾರ ಈ ರೀತಿಯ ಯೋಜನೆಗಳನ್ನು ನೀಡುವ ಮುಖಾಂತರ ಅವರ ಕುಟುಂಬದ ಭದ್ರತೆಯನ್ನು ಕಾಪಾಡಲಾಗಿದೆ ಎಂದ ಅವರು ೨೬ ಅಸಂಘಟಿತ ಕಾರ್ಮಿಕರ ವರ್ಗಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಕಾರ್ಮಿಕ ಇಲಾಖೆ ವತಿಯಿಂದ ಈ ಅಸಂಘಟಿತ ಕಾರ್ಮಿಕರಿಗೆ ಖಾಸಗಿ ಅಥವಾ ಸ್ವಂತ ವಾಹನ ಮಾಲೀಕರು ಸೇರಿದಂತೆ ಎಲ್ಲಾ ರೀತಿಯ ಕೆಲಸಗಾರರಿಗೆ ಆಕಸ್ಮಿಕ ಮರಣ ಸಂಭಾವ್ಯ ಪ್ರಕರಣಗಳಲ್ಲಿ ರೂ. ೫ ಲಕ್ಷ ಪರಿಹಾರವನ್ನು ನೀಡಲಾಗುತ್ತದೆ ಎಂದು ಹೇಳಿದರು. ನಮ್ಮ ಜಿಲ್ಲೆಯಲ್ಲಿ ಈಗಾಗಲೇ ೭೮,೧೩೨ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ. ಕಾರ್ಮಿಕ ಮಂಡಳಿಯಿಂದ ೩೧,೪೭೨ ಜನರಿಗೆ ಒಟ್ಟು ರೂ. ೫೬.೯೮ ಕೋಟಿಯನ್ನು ಕಾರ್ಮಿಕ ಇಲಾಖೆಯಿಂದ ನೇರವಾಗಿ ಕಾರ್ಮಿಕರ ಖಾತೆಗಳಿಗೆ ವರ್ಗಾಯಿಸಲಾಗಿದೆ. ಜೊತೆಗೆ ೨೧,೨೬೨ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ರೂ.೧೯.೯೫ ಕೋಟಿಯನ್ನು ನೀಡಲಾಗಿದೆ. ವೈದ್ಯಕೀಯ ಸೇವೆಗಾಗಿ ೩೮೧ ಫಲಾಭವಿಗಳಿಗೆ ರೂ.೧.೪೯ ಕೋಟಿಯ ನೆರವು ನೀಡಲಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ತರೀಕೆರೆ ಶಾಸಕ ಜಿ.ಹೆಚ್.ಶ್ರೀನಿವಾಸ್ ಮಾತನಾಡಿದರು. ಕಾರ್ಮಿಕ ಇಲಾಖೆಯ ಆಯುಕ್ತ ಹೆಚ್.ಎನ್.ಗೋಪಾಲಕೃಷ್ಣ ಸಂವಿಧಾನ ಪೀಠಿಕೆ ಬೋಧಿಸಿದರು. ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್, ಭದ್ರಾ ಕಾಡಾ ಅಧ್ಯಕ್ಷರಾದ ಡಾ.ಕೆ.ಪಿ.ಅಂಶುಮಂತ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಹೆಚ್.ಹರೀಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮ್ಮದ್, ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಂಟಿ ಕಾರ್ಮಿಕ ಆಯುಕ್ತ ರವಿಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಚಿಕ್ಕಮಗಳೂರಿನ ವಿಜಯಪುರದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮವನ್ನು ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಎಸ್.ಲಾಡ್ ಉದ್ಘಾಟಿಸಿದರು. ಶಾಸಕರುಗಳಾದ ಹೆಚ್.ಡಿ.ತಮ್ಮಯ್ಯ, ಜಿ.ಹೆಚ್.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್, ಭದ್ರಾ ಕಾಡಾ ಅಧ್ಯಕ್ಷರಾದ ಡಾ.ಕೆ.ಪಿ.ಅಂಶುಮಂತ್, ಜಿಲ್ಲಾಧಿಕಾರಿ ಶ್ರೀಮತಿ ಮೀನಾ ನಾಗರಾಜ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಎಚ್‌ ಎಸ್‌ ಕೀರ್ತನಾ, ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮೊಹಮ್ಮದ್‌ ಮೊಹಸಿನ್‌, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲಕೃಷ್ಣ, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಹೆಚ್.ಹರೀಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮ್ಮದ್ ಮುಂತಾದವರು ಇದ್ದರು.

Tags: labor minister santhosh ladMinister Santhosh Ladsanthosh ladsanthosh lad about modisanthosh lad about pm modisanthosh lad angry onsanthosh lad latest newssanthosh lad latest statementsanthosh lad newssanthosh lad news todaysanthosh lad on bjpsanthosh lad questioned modisanthosh lad speechsanthosh lad statementsanthosh lad today newssanthosh lad vs narendra modiSantosh Ladsantosh lad agesantosh lad mlasantosh lad news
Previous Post

ಗಯಾದ ವಿಷ್ಣು ದೇವಾಲಯದಲ್ಲಿ DCM ಡಿಕೆ ಶಿವಕುಮಾರ್ ವಿಶೇಷ ಪೂಜೆ..!

Next Post

ಜಾತಿ ಗಣತಿ ಕಡ್ಡಾಯವಲ್ಲ – ಸ್ವಯಂ ಪ್ರೇರಿತರಾಗಿ ಭಾಗವಹಿಸಿ ಅಥವಾ ಮಾಹಿತಿ ನೀಡಲು ನಿರಾಕರಿಸಿ

Related Posts

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ
ರಾಜಕೀಯ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

by ಪ್ರತಿಧ್ವನಿ
March 3, 2026
0

ಫೋನ್ ಕದ್ದಾಲಿಕೆ ಆರೋಪದ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ...

Read moreDetails
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
Next Post
ಜಾತಿ ಗಣತಿ ಕಡ್ಡಾಯವಲ್ಲ – ಸ್ವಯಂ ಪ್ರೇರಿತರಾಗಿ ಭಾಗವಹಿಸಿ ಅಥವಾ ಮಾಹಿತಿ ನೀಡಲು ನಿರಾಕರಿಸಿ

ಜಾತಿ ಗಣತಿ ಕಡ್ಡಾಯವಲ್ಲ - ಸ್ವಯಂ ಪ್ರೇರಿತರಾಗಿ ಭಾಗವಹಿಸಿ ಅಥವಾ ಮಾಹಿತಿ ನೀಡಲು ನಿರಾಕರಿಸಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada