ದಕ್ಷಿಣ ಕನ್ನಡದ ಕಾಲೇಜು ಒಂದರಲ್ಲಿ ನಡೆದ ಹಿಜಾಬ್ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ 2018ರಲ್ಲಿ ಹೊರಡಿಸಿದ ಆದೇಶವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.
2018ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಎಲ್ಲ ಕಾಲೇಜುಗಳಿಗೆ ಕಡ್ಡಾಯವಾಗಿ ಸಮವಸ್ತ್ರ ಜಾರಿಗೊಳಿಸುವಂತೆ ಆದೇಶಿಸಿತ್ತು. ಕಾಲೇಜುಗಳಲ್ಲಿ ಸಮವಸ್ತ್ರ ಪರಿಚಯಿಸಿದ್ದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಹೊತರು ಬಿಜೆಪಿ ಸರ್ಕಾರವಲ್ಲ ರಾಜಕೀಯ ಮಾಡುವುದಕ್ಕು ಒಂದು ಮಿತಿ ಇದೇ ಮಾಜಿ ಸಿಎಂ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇತ್ತ ಇಂಧನ ಸಚಿವ ವಿ.ಸುನೀಲ್ ಕುಮಾರ್ ಶಾಲಾ ಕಾಲೇಜುಗಳಲ್ಲಿ ಸಮಾನತೆ ಸಾರುವ ಸಲುವಾಗಿ ಎಲ್ಲರು ಸಮವಸ್ತ್ರ ಧರಿಸಬೇಕು ಎಂಬುದು ಜನರ ಅಭಿಪ್ರಾಯ. ಆದರೆ, ಧಾರ್ಮಿಕ ಬಟ್ಟೆಗಳನ್ನು ಧರಿಸುವುದನ್ನು ಯಾವೂಧೆ ಕಾರಣಕ್ಕೂ ಸಹಿಸಲಾಗುವುದಿಲ್ಲ. ಉಡುಪಿ ಮತ್ತು ಮಂಗಳೂರನ್ನು ತಾಲಿಬಾನ್ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಮುಂದುವರೆದು, ಸಮವಸ್ತ್ರವು ನೀತಿ ಸಂಹಿತೆಯ ವಿಷಯವಾಗಿದೆ ಹಿಜಾಬ್ ವಿವಾದವಾಗಿ ಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿಗಳ ವಿಚಾರವನ್ನು ಪ್ರಸ್ತಾಪಿಸಿದ ಸುನೀಲ್ ಕೆಲವರು ಶುಲ್ಕ ಪಾವತಿಸಲು ಸಾಧ್ಯವಿಲ್ಲದೆ ಸರ್ಕಾರಿ ಕಾಲೇಜುಗಳಿಗೆ ಸೇರುತ್ತಾರೆ. ಆದರೆ, ಈ ವಿಚಾರ ಕೋರ್ಟ್ ಮೆಟ್ಟಿಲೇರಿರುವುದನ್ನು ಗಮನಿಸಿದರೆ ಇದರ ಹಿಂದೆ ಯಾರಿದ್ದಾರೆ ಎಂದು ನಮ್ಮಗೂ ಸಹ ತಿಳಿದಿದೆ. ಕೆಲವು ವಿದ್ಯಾರ್ಥಿಗಳು ಕಾಲೇಜುಗಳನ್ನು ಧಾರ್ಮಿಕ ಕೇಂದ್ರಗಳನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಪ್ರವಾಸ ಭಾಗ್ಯ ಮತ್ತು ಶಾದಿ ಭಾಗ್ಯ ಜಾತಿ ಹಾಗೂ ಧರ್ಮಗಳನ್ನು ಎತ್ತಿಕಟ್ಟುವ ಮೂಲಕ ಸಿದ್ದರಾಮಯ್ಯನವರು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ವಿರುದ್ದ ಹರಿಹಾಯ್ದಿದ್ದಾರೆ.