
ಯತ್ನಾಳ್ ರಾಜೀನಾಮೆ ನೀಡಿದರೆ ಮಾತ್ರ ನನ್ನ ರಾಜೀನಾಮೆ ಅಂಗೀಕರಿಸುವಂತೆ ಸ್ಪೀಕರ್ಗೆ ಪತ್ರ ಬರೆದಿದ್ದಾರೆ. ಆದರೆ, ಸ್ಪೀಕರ್ ರಾಜೀನಾಮೆಯನ್ನು ಇನ್ನೂ ಅಂಗೀಕರಿಸಿಲ್ಲ.
ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ ಯತ್ನಾಳ್ ರವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ.

ನಾನು ಅವರ ಸವಾಲನ್ನು ಸ್ವೀಕರಿಸಿ. ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ.
ಬಸನಗೌಡ ಆರ್. ಪಾಟೀಲ್ ಯತ್ನಾಳ್ ರವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ. ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ ಎಂದಿದ್ದಾರೆ.