ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಸೋಷಿಯಲ್ ಮೀಡಿಯಾದಲ್ಲಿ (Social Media) ಹಿಂದಿ ಪೇಜ್ ಪ್ರಾರಂಭಿಸಿರುವುದಕ್ಕೆ ಅಭಿಮಾನಿಗಳು ಮತ್ತು ಕನ್ನಡ ಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.
ಈ ನಡುವೆ ಇದೀಗ ರಾಜ್ಯ ಸರ್ಕಾರವೇ ಈ ಬಗ್ಗೆ ಮಧ್ಯಪ್ರವೇಶಿಸಿದ್ದು ಕೂಡಲೇ ತಪ್ಪನ್ನು ಸರಿಪಡಿಸಿಕೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ. ಕನ್ನಡಿಗರಿಗೆ ಯಾವುದೇ ಕಾರಣಕ್ಕೂ ನೋವು ಮಾಡಬೇಡಿ ಎಂದು ಸರ್ಕಾರ ಹೇಳಿದೆ .
ಈ ಬಗ್ಗೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ (Shivaraj tangadagi) ಅವರು ಬದಲಾವಣೆ ಮಾಡಿಕೊಳ್ಳಬಹುದು ಎಂದು ಅಂದುಕೊಂಡಿದ್ದೇನೆ. ಇಲ್ಲವಾದರೆ ನಾವು ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.