ಅಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಿಲುಕಿರುವ ವಸತಿ ಸಚಿವ ವಿ ಸೋಮಣ್ಣ ಅವರ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ಧ ಅರ್ಜಿಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿ.ಸೋಮಣ್ಣಗೆ ಏಪ್ರಿಲ್ 16 ರಂದು ಖುದ್ಧು ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಲ್ಲಿದ್ಧ ಸಚಿವ ವಿ.ಸೋಮಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಸಚಿವ ಸೋಮಣ್ಣ ಅವರ ನಿರೀಕ್ಷಣಾ ಜಾಮೀನು ಮನವಿಯ ವಿಚಾರಣೆಯನ್ನು ಬುಧವಾರ ನಡೆಸಿದ 110ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಹಾಗೂ ಹಾಲಿ ಮತ್ತು ಮಾಜಿ ಶಾಸಕ ಹಾಗೂ ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವುದಕ್ಕಾಗಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಬಿ ಜಯಂತ್ ಕುಮಾರ್ ಅವರು ಪಕ್ಷಕಾರರ ವಾದ ಆಲಿಸಿ ಆದೇಶವನ್ನು ಏಪ್ರಿಲ್ ಒಂದಕ್ಕೆ ಕಾಯ್ದಿರಿಸಿದರು. ಆದರೆ ಬಂಧನ ಭೀತಿ ಇಲ್ಲದಿರುವುದರಿಂದ ನಿರೀಕ್ಷಣಾ ಜಾಮೀನು ಕೋರಿರುವ ಮನವಿಯು ನಿರ್ವಹಣೆಗೆ ಅರ್ಹವಾಗಿಲ್ಲ” ಎಂದು ಆಕ್ಷೇಪಿಸಿದರು ಎಂದು ಅರ್ಜಿದಾದರ ವಕೀಲರು ವಾದಿಸಿದ್ದರು.
ಸೋಮಣ್ಣ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಸಂಸ್ಥೆ (ಎಸಿಬಿ) ಸಲ್ಲಿಸಿರುವ ಬಿ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈಚೆಗೆ ತಿರಸ್ಕರಿಸಿದ್ದು, ಅವರ ವಿರುದ್ಧ ವಿಶೇಷ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಮಹತ್ವದ ಆದೇಶ ಮಾಡಿತ್ತು. ಅಲ್ಲದೇ, ಏಪ್ರಿಲ್ 16ರಂದು ಖುದ್ದು ಹಾಜರಾಗುವಂತೆ ಸಚಿವ ಸೋಮಣ್ಣ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಸೋಮಣ್ಣ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ 1988ರ ಸೆಕ್ಷನ್ 13(1)(ಬಿ) (ಡಿ) ಮತ್ತು (ಇ) ಜೊತೆಗೆ ಸೆಕ್ಷನ್ 13(2)ರ ಅಡಿ ಪ್ರಕರಣ ದಾಖಲಿಸಲು ನ್ಯಾಯಾಲಯವು ಆದೇಶ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸೋಮಣ್ಣ ನಿರೀಕ್ಷಣಾ ಜಾಮೀನು ಕೋರಿದ್ದಾರೆ.

ಇತ್ತ ಬಿಎಸ್ ಯಡಿಯೂರಪ್ಪ ಅವರಿಗೂ ಸಂಕಷ್ಟ : ವಿಚಾರಣೆಗೆ ಖುದ್ದು ಹಾಜರಾಗಲು ಕೋರ್ಟ್ ಸಮನ್ಸ್
ಅಕ್ರಮ ಭೂ ನೋಟಿಫಿಕೇಶನ್ ಆರೋಪದ ಪ್ರಕರಣದಲ್ಲಿ ಏ.19 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದು, ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ. ನ್ಯಾಯಾಧೀಶ ಬಿ. ಜಯಂತ್ ಕುಮಾರ್, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 13 (1) (ಡಿ) ಮತ್ತು 13 (2) ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ, ಸಮನ್ಸ್ ಜಾರಿ ಮಾಡಲು ಆದೇಶಿಸಿದ್ದಾರೆ.
ವಾಸುದೇವ ರೆಡ್ಡಿ 2013ರಲ್ಲಿ ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಿರುವ ವಿಶೇಷ ನ್ಯಾಯಾಲಯ, ದೂರುದಾರರ ಪ್ರಮಾಣೀಕೃತ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಪೂರ್ಣಗೊಳಿಸಿದೆ. 15 ಎಕರೆ 30 ಗುಂಟೆ ಭೂ ಸ್ವಾಧೀನ ಸಂಬಂಧ ನಗರದ ಬೆಳ್ಳಂದೂರು ಮತ್ತು ದೇವರ ಬೀಸನಹಳ್ಳಿ ಗ್ರಾಮಗಳಲ್ಲಿ ಸ್ವಾಧೀನ ಪಡಿಸಿಕೊಂಡಿದ್ದ 15 ಎಕರೆ 30 ಗುಂಟೆ ಜಮೀನು ಅಕ್ರಮ ಡಿನೋಟಿಫೈ ಮಾಡಿದ ಆರೋಪವನ್ನು ಯಡಿಯೂರಪ್ಪ ಅವರ ಮೇಲೆ ಹೊರಿಸಲಾಗಿದೆ. ಈ ಪ್ರಕರಣದಲ್ಲಿ ದೂರುದಾರ ವಾಸುದೇವ ರೆಡ್ಡಿ, ಕಾಂಗ್ರೆಸ್ ಶಾಸಕ ಆರ್ ವಿ ದೇಶಪಾಂಡೆ, ಯಡಿಯೂರಪ್ಪ ಸೇರಿ ಹತ್ತು ಜನರ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು.


