
ಮಂಗಳೂರು: ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಇಂದು ಭೇಟಿ ನೀಡಿದ್ದಾರೆ. ಭೇಟಿ ನೀಡಿ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣವನ್ನ ಪರಿಶೀಲಿಸಿದ ಸೋಮಣ್ಣ ಅವರು ಸ್ವಚ್ಛತೆ ಬಗ್ಗೆ ವಿಶೇಷ ಮುತುವರ್ಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ವೇಳೆ ವಿ ಸೊಮ್ಮಣ್ಣಗೆ ದ. ಕ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್, ಹರೀಶ್ ಪೂಂಜ ಸಾಥ್ ನೀಡಿದರು. ರೈಲ್ವೆ ನಿಲ್ದಾಣ ಭೇಟಿ ಬಳಿಕ ದ. ಕ ಜಿಲ್ಲಾ ಪಂಚಾಯತ್ ನಲ್ಲಿ ವಿ. ಸೋಮಣ್ಣ ಅವರು ವಿಶೇಷ ಸಭೆ ನಡೆಸಲಿದ್ದಾರೆ.ಇನ್ನು ಉತ್ತರಕನ್ನಡದ ಶಿರೂರು ಬಳಿ ಹೆದ್ದಾರಿ ಮೇಲೆ ಗುಡ್ಡ ಕುಸಿತ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರೈಲ್ವೆ ಇಲಾಖೆಯಿಂದ ನಮ್ಮದೆ ಆದ ವ್ಯವಸ್ಥೆಯಲ್ಲಿ ಪಾಕೃತಿಕ ವಿಕೋಪ ನಿರ್ವಹಣೆ ಮಾಡ್ತೇವೆ. NDRF, SDRF ಯಾವ ರೀತಿ ಇದೆಯೋ ಅದಕ್ಕಿಂತ ವಿಭಿನ್ನವಾಗಿ ನಮ್ಮ ಇಲಾಖೆಯಲ್ಲಿ ವ್ಯವಸ್ಥೆಗಳಿವೆ. ಇದಕ್ಕಾಗಿ ವಾರ್ ರೂಂ ಮಾಡಿದ್ದೇವೆ.ಪ್ರತಿಯೊಂದು ಕಡೆಗಳಲ್ಲೂ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ. ಈ ಸಾರಿ ಮಳೆ ತುಂಬಾ ಜಾಸ್ತಿ ಆಗ್ತಿದೆ. ಜಿಲ್ಲಾಧಿಕಾರಿಗಳ ಜೊತೆ ನಮ್ಮವರು ಸಹ ಕೈಜೋಡಿಸಿ ತಕ್ಷಣ ಸಮರೋಪಾದಿ ಕೆಲಸ ನಡೆಯುತ್ತೆ.ಇದಕ್ಕೆ ಶಾಶ್ವತ ಪರಿಹಾರ ಕೈಗೊಳ್ಳಬೇಕಾಗಿದೆ. ಈ ಬಗ್ಗೆ ಕೇಂದ್ರ ರೈಲ್ವೆ ಮಂತ್ರಿಗಳ ಜೊತೆ ಚರ್ಚೆ ಮಾಡ್ತೇನೆ. ಎಂತಹ ಮಳೆ ಬಂದರು ನಮ್ಮ ರೈಲು ನಿಲ್ಲಬಾರದು. ಗೂಡ್ಸ್, ಪ್ಯಾಸೆಂಜರ್ ರೈಲು ನಿಲ್ಲಬಾರದು. ಮಂಗಳೂರು ಅಷ್ಟೊಂದು ಸಮಧಾನವಿಲ್ಲ. ಆದ್ರೆ ಇಡೀ ದೇಶದಲ್ಲಿ ಸಮಾರೋಪಾದಿಯಲ್ಲಿ ಕೆಲಸ ಆಗ್ತಿದೆ. ಇಲ್ಲಿಯು ಸಹ ಆ ಕೆಲಸ ಮಾಡಲು ಸಭೆ ಮಾಡುತ್ತೇವೆ. ನಾಲ್ಕೈದು ತಿಂಗಳಲ್ಲಿ ಸಾಕಷ್ಟು ಬದಲಾವಣೆ ಮಾಡುತ್ತೇವೆ ಎಂದು ತಿಳಿಸಿದರು.









