ಮೈಸೂರು : ಸಿದ್ದರಾಮಯ್ಯ ವಿರುದ್ಧ ವರುಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಚಿವ ವಿ.ಸೋಮಣ್ಣ ಇಂದು ವರುಣ ಕ್ಷೇತ್ರಕ್ಕೆ ಅಧಿಕೃತವಾಗಿ ಎಂಟ್ರಿ ನೀಡಿದ್ದಾರೆ. ಚುನಾವಣಾ ಸಭೆಗೂ ಮುನ್ನ ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಚಿವ ವಿ. ಸೋಮಣ್ಣ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದರು.

ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ವಸತಿ ಸಚಿವ ವಿ.ಸೋಮಣ್ಣ, ನಾನು ಕ್ಷೇತ್ರದಲ್ಲಿ ಕೇವಲ ನೆಪ ಮಾತ್ರ. ನನ್ನ ಕಾರ್ಯಕರ್ತರು, ಮುಖಂಡರು ಹಾಗೂ ಪಕ್ಷದ ಶಕ್ತಿಯೇ ದೊಡ್ಡದು. ಇಲ್ಲಿ ಯಾವ ಮುಖಂಡರು, ಚಿಕ್ಕವರು ದೊಡ್ಡವರು ಇಲ್ಲ. ಇಲ್ಲಿ ಎಲ್ಲರೂ ಸೇರಿ ನನ್ನನ್ನು ಗೆಲ್ಲಿಸುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಸೋಮಣ್ಣ ಹೇಳಿದ್ದಾರೆ .
ಗೋವಿಂದರಾಜನಗರದಲ್ಲಿ ಟಿಕೆಟ್ ಸಿಗುವ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು, ಗೋವಿಂದರಾಜನಗರ ಟಿಕೆಟ್ ವಿಚಾರ ಸಂಜೆಯೊಳಗೆ ಬಗೆಹರಿಯುತ್ತದೆ. ಅಲ್ಲಿಯ ಸಮಸ್ಯೆಗಳನ್ನು ಬಗೆಹರಿಸುತ್ತವೆ, ವರುಣದಲ್ಲಿ ನಾಳೆಯಿಂದಲೇ ಪ್ರಚಾರ ಆರಂಭಿಸುತ್ತೇನೆ ಎಂದು ಸೋಮಣ್ಣ ಹೇಳಿದರು.











