ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದ್ದು, ಹೋಂ ಐಸೋಲೇಷನ್ ಆಗಿರೋದಾಗಿ ತಿಳಿಸಿದ್ದಾರೆ.
ಹೌದು, ಸಚಿವ ಸೋಮಣ್ಣ ಅವರಿಗೆ ಕರೋನ ಪಾಸಿಟಿವ್ ದೃಢವಾಗಿರುವ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಕೋವಿಡ್- 19 ಸೋಂಕು ದೃಢಪಟ್ಟಿದೆ. ಸದ್ಯ ಹೋಮ್ ಕ್ವಾರಂಟೈನ್ ನಲ್ಲಿದ್ದು ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲಿಸುವುದರ ಮೂಲಕ ಸುರಕ್ಷತೆಯಿಂದಿರಿ ಎಂದು ಹೇಳಿದ್ದಾರೆ.

