• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬ್ರಿಟನ್‌ ಜತೆಗಿನ ಮುಕ್ತ ವ್ಯಾಪಾರ ಒಪ್ಪಂದದ ಸಂತೋಷಕೂಟದಲ್ಲಿ ಸಚಿವರು ಭಾಗಿ

ಪ್ರತಿಧ್ವನಿ by ಪ್ರತಿಧ್ವನಿ
August 14, 2025
in Top Story, ಕರ್ನಾಟಕ, ರಾಜಕೀಯ, ವಾಣಿಜ್ಯ
0
ಬ್ರಿಟನ್‌ ಜತೆಗಿನ ಮುಕ್ತ ವ್ಯಾಪಾರ ಒಪ್ಪಂದದ ಸಂತೋಷಕೂಟದಲ್ಲಿ ಸಚಿವರು ಭಾಗಿ
Share on WhatsAppShare on FacebookShare on Telegram

ಟೆಸ್ಕೋದಿಂದ 15 ಸಾವಿರ ಉದ್ಯೋಗ ಸೃಷ್ಟಿ: ಎಂ ಬಿ ಪಾಟೀಲ

ADVERTISEMENT

ಬೆಂಗಳೂರು: ಬ್ರಿಟನ್‌ ಮೂಲದ ಟೆಸ್ಕೋ ಕಂಪನಿಯು ರಾಜ್ಯದಲ್ಲಿ ತನ್ನ ನೂತನ ವಿತರಣಾ ಕೇಂದ್ರ ಸ್ಥಾಪಿಸಲು ಮುಂದಾಗಿದ್ದು, ಇದರಿಂದ 15 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇದರ ಜತೆಗೆ ರೋಲ್ಸ್‌-ರಾಯ್ಸ್‌ ಕಂಪನಿ ಕೂಡ ರಾಜ್ಯದಲ್ಲಿ ಬಂಡವಾಳ ಹೂಡಿಕೆಯ ಹೊಸ ಅವಕಾಶಗಳನ್ನು ಅರಸುತ್ತಿದೆ. ಇದಕ್ಕೆ ಪೂರಕವಾಗಿ ಸರಕಾರವು ಅಗತ್ಯ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರೈಸಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಭಾರತ ಮತ್ತು ಬ್ರಿಟನ್‌ ಮಧ್ಯೆ ಇತ್ತೀಚೆಗೆ ಮುಕ್ತ ವ್ಯಾಪಾರ ಒಪ್ಪಂದ ಏರ್ಪಟ್ಟ ಹಿನ್ನೆಲೆಯಲ್ಲಿ ಇಲ್ಲಿನ ಬ್ರಿಟಿಷ್‌ ಡೆಪ್ಯುಟಿ ಹೈಕಮಿಷನರ್‌ ಏರ್ಪಡಿಸಿದ್ದ ಸಂತೋಷಕೂಟ ಸಮಾರಂಭದಲ್ಲಿ ಅವರು ಮಂಗಳವಾರ ಮಾತನಾಡಿದರು.

Assembly session: ಸ್ಫೀಕರ್‌ ಮಾತಿಗೆ ಬಿದ್ದುಬಿದ್ದು ನಕ್ಕ ಬಿಜೆಪಿ ಕಾಂಗ್ರೆಸ್‌ ನಾಯಕರು..! #utkhader #congress

ಎರಡೂ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದದಿಂದ ಸದ್ಯಕ್ಕೆ ವಾರ್ಷಿಕ 25 ಬಿಲಿಯನ್‌ ಪೌಂಡ್‌ ಮೊತ್ತದ ವಹಿವಾಟು ನಡೆಯಲಿದೆ. ಇದು ಮುಂದಿನ ಐದು ವರ್ಷಗಳಲ್ಲಿ 90 ಬಿಲಿಯನ್‌ ಪೌಂಡ್‌ಗೆ ಹೆಚ್ಚಲಿದೆ. ಮುಖ್ಯವಾಗಿ ಭಾರತದಿಂದ ಬ್ರಿಟನ್‌ಗೆ ರಫ್ತಾಗುವ ಸರಕುಗಳ ಪೈಕಿ ಶೇಕಡ 99ರಷ್ಟು ಉತ್ಪನ್ನಗಳಿಗೆ ಮತ್ತು ಅಲ್ಲಿಂದ ಇಲ್ಲಿಗೆ ಬರುವ ಶೇಕಡ 90ರಷ್ಟು ಉತ್ಪನ್ನಗಳಿಗೆ ಸುಂಕ ಇರುವುದಿಲ್ಲ. ಈ ಒಪ್ಪಂದವು ದ್ವಿಪಕ್ಷೀಯ ವಾಣಿಜ್ಯ ವಹಿವಾಟನ್ನು ವೃದ್ಧಿಸಲಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಬ್ರಿಟಿಷ್‌ ಮೂಲದ ಬಿಎಇ ಸಿಸ್ಟಮ್ಸ್‌, ಎಆರ್‌ಎಂ, ಎಚ್‌ಎಸ್‌ಬಿಸಿ, ಅವಿವಾ ಮುಂತಾದ ಕಂಪನಿಗಳಿದ್ದು, 30 ಸಾವಿರ ಉದ್ಯೋಗಿಗಳು ಇಲ್ಲಿ ಕಾರ್ಯನಿರತರಾಗಿದ್ದಾರೆ. ಮುಕ್ತ ವ್ಯಾಪಾರ ಒಪ್ಪಂದದಿಂದ ಬ್ರಿಟನ್ನಿನ ಕಂಪನಿಗಳು ರಾಜ್ಯದಲ್ಲಿ ಇನ್ನೂ ಹೆಚ್ಚು ಪ್ರಮಾಣದಲ್ಲಿ ಬಂಡವಾಳ ತೊಡಗಿಸಲು ಸಾಧ್ಯವಾಗಲಿದೆ. ನಮ್ಮಲ್ಲಿರುವ ತಂತ್ರಜ್ಞಾನ, ಮೂಲಸೌಕರ್ಯ, ಕೈಗಾರಿಕಾಸ್ನೇಹಿ ವಾತಾವರಣ ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ರಾಜ್ಯ ಸರಕಾರ ಕೂಡ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

Roopesh Rajanna: ರಸ್ತೆಯಲ್ಲಿ ಮಾರ್ವಾಡಿಗಳ  ದಬ್ಬಾಳಿಕೆಗೆ ಎಚ್ಚರಿಕೆ ಕೊಟ್ಟ ಕನ್ನಡಿಗ ರೂಪೇಶ್ ರಾಜಣ್ಣ .! #viral

ಕಾರ್ಯಕ್ರಮದಲ್ಲಿ ಟ್ರೇಡ್ ಕಮಿಷನರ್ ಹರಿಜಿಂದರ್ ಕಂಗ್, ಬ್ರಿಟಿಷ್‌ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಸೇರಿದಂತೆ ಇತರರು ಭಾಗವಹಿಸಿದ್ದರು.

Tags: BJPCongress Partymb patil​ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪಾಯಿಂಟ್ ನಂ.1 ರಿಂದ 16 ರಲ್ಲಿ ಏನೇನೂ ಸಿಕ್ಕಿಲ್ಲ..? ಬರೀ ಬುರುಡೆ ಬಿಟ್ನಾ ಮುಸುಕುಧಾರಿ ಅನಾಮಿಕ ..?! 

Next Post

ನಟ ದರ್ಶನ್ ಎದೆಯಲ್ಲಿ ಢವಢವ – ಇಂದು ಹೊರಬೀಳಲಿದೆ ಸುಪ್ರೀಂ ಕೋರ್ಟ್ ತೀರ್ಪು ! 

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ..! 

ನಟ ದರ್ಶನ್ ಎದೆಯಲ್ಲಿ ಢವಢವ - ಇಂದು ಹೊರಬೀಳಲಿದೆ ಸುಪ್ರೀಂ ಕೋರ್ಟ್ ತೀರ್ಪು ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada