ಮೈಸೂರು : ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ತರುವುದನ್ನು ತಡೆಯಲು, ಕೇಂದ್ರ ಸರ್ಕಾರ ಕಂಪ್ಯೂಟರ್ ಹ್ಯಾಕ್ ಮಾಡಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿರುವ ವಿಚಾರದ ಬಗ್ಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮಾತನಾಡಿದ್ದು, ಸಚಿವರಿಗೆ ಓರಿಯಂಟಿಯೇಶನ್ ಅಗತ್ಯವಿದೆ. ಸಿದ್ದರಾಮಯ್ಯ ಸಾಹೇಬರ ಸರ್ಕಾರದಲ್ಲಿ ಎಂತೆಂತಹ ಸಚಿವರು ಇದ್ದಾರೆ. ಅವರಿಗೆ ಯಾವುದರ ಬಗ್ಗೆಯೂ ಅರಿವಿಲ್ಲದೇ ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಇದೊಂದು ರೀತಿಯಲ್ಲಿ ಕರ್ನಾಟಕಕ್ಕೇ ಅವಮಾನ.
ಸಾರ್ವಜನಿಕವಾಗಿ ಏನು ಮಾತನಾಡಬೇಕು ಅಂತಾ ಗೊತ್ತಿಲ್ಲ, ಈ ರೀತಿ ಅಸಂಬದ್ಧವಾದ ಹೇಳಿಕೆ ಕೊಟ್ರೆ ಕರ್ನಾಟಕದ ಮರ್ಯಾದೆ ಹೋಗುತ್ತದೆ. ಕಂಪ್ಯೂಟರ್ ಸರ್ವರನ್ನು ಯಾರು ಹ್ಯಾಕ್ ಮಾಡಲು ಸಾಧ್ಯವಿಲ್ಲ. ಸತೀಶ್ ಜಾರಕಿಹೊಳಿ ನಮ್ಮ ರಾಜ್ಯ ಸರ್ಕಾರದ ಪ್ರತಿನಿಧಿ.
ಈ ರೀತಿ ಹೇಳಿಕೆ ಕೊಟ್ಟು ಮುಜುಗರಕ್ಕೆ ಒಳಗಾಗುವುದು ಬೇಡ ಎಂದು ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಗೆ ಅತ್ಯಂತ ತೀಕ್ಷ್ಣವಾಗಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ.

ಸಚಿವ ಎಂ ಬಿ ಪಾಟೀಲ್ ಅವರು ನನ್ನ ಬಗ್ಗೆ ಮಾತನಾಡವುದಿಲ್ಲ ಅಂದ್ರೇ, ನಾನು ಸಹ ಅವರ ಬಗ್ಗೆ ಮಾತನಾಡುವುದಿಲ್ಲ.
ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿಕೆ. ಎಂ ಬಿ ಪಾಟೀಲ್ ಅವರ ಬಗ್ಗೆ ನನಗೆ ಅಪಾರವಾದ ಗೌರವ ಇದೆ.
ಅವರು ನಮ್ಮ ರಾಜ್ಯದ ನೀರಾವರಿ ಸಚಿವರು, ನಾನು ಸಹ ಅವರ ಕ್ಷೇತ್ರಕ್ಕೆ ಹೋಗಿದ್ದೇನೆ. ಅವರ ಬಗ್ಗೆ ಜನರು ಅಪಾರವಾದ ಪ್ರೀತಿ ವಿಶ್ವಾಸ ಇಟ್ಟುಕೊಂಡಿದ್ದಾರೆ. ನಮ್ಮ ಕೆಲಸಗಳು ಮಾತನಾಡಬೇಕು, ಮಾತನಾಡುವುದೇ ಸಾಧನೆಯಾಗಬಾರದು. ಸಚಿವ ಎಂ ಬಿ ಪಾಟೀಲ್ ನೀಡಿರುವ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ತಣ್ಣನೆಯ ಪ್ರತಿಕ್ರಿಯೆ ನೀಡಿದರು.


ಸಚಿವ ಡಾ ಹೆಚ್ ಸಿ ಮಹದೇವಪ್ಪ ಟ್ವೀಟ್ ವಿಚಾರ : ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ.
ವೀರೆಂದ್ರ ಪಾಟೀಲ್, ವೀರಪ್ಪಮೊಯ್ಲಿ ಹಾಗೂ ಬಂಗರಾಪ್ಪ ಮೂರು ಜನರನ್ನು 5 ವರ್ಷದಲ್ಲಿ ಬದಲಾಯಿಸಿದ್ದು ಯಾರು?.
ಈ ಬಗ್ಗೆ ರಾಜ್ಯದ ಜನತೆಗೆ ಗೊತ್ತಿದೆ, ಇದರ ಬಗ್ಗೆ ತಿಳಿದುಕೊಂಡು ಮಾತನಾಡಿದರೆ ಒಳ್ಳೆಯದು. ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ಹೇಳಿಕೆ. ರಾಜ್ಯಕ್ಕೆ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ನೀಡದ ವಿಚಾರಕ್ಕೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದ ವಿಚಾರ. ದೇಶದಲ್ಲಿ ಅಕ್ಕಿ ಕೊಡುತ್ತಿಲ್ಲ ಎಂದು ಯಾರಾದರೂ ಬೊಬ್ಬೆ ಹಾಕುವುದನ್ನು ಕೇಳಿದ್ದೀರಾ?. ಓಪನ್ ಮಾರ್ಕಟ್ ನಲ್ಲಿ ತೆಗೆದುಕೊಳ್ಳಿ. ಮಂಡಿ ತೆರೆದು ರಾಜ್ಯದಲ್ಲಿ ಭತ್ತ ಬೆಳೆಯುವ ರೈತರ ಬಳಿ ಭತ್ತ ಖರೀದಿ ಮಾಡಿ. ನಮ್ಮ ರೈತರು ರಾಜ್ಯದ ಜನತೆಗೆ ಕೊಡುವಷ್ಟು ಬೆಳೆದಿದ್ದಾರೆ. ಮಂಡಿ ತೆರೆದು ಕನಿಷ್ಠ ಬೆಲೆ ನಿಗದಿ ಮಾಡಿ ಖರೀದಿ ಮಾಡಿ. ವಿನಾಕರಣ ಮೋದಿ ಅವರನ್ನು ಬೈದುಕೊಂಡು ಓಡಾಡಬೇಡಿ. ಉಚಿತ ಅಕ್ಕಿ ನೀಡುವ ಭರವಸೆ ಕೊಡುವಾಗ ಮೋದಿ ಅವರನ್ನು ಕೇಳಿಕೊಂಡು ಕೊಟ್ಟಿದ್ದೀರಾ. ಕ್ರಿಶ್ಚಿಯನ್ ನವರು ಕೇಳಿದಾಗ ಮತಾಂದರ ನಿಷೇಧ ಕಾಯ್ದೆ ಹಿಂಪಡೆಯುತ್ತೀರಾ.
ಮುಸ್ಲಿಮರು ಕೇಳಿದ ಕೂಡಲೇ ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುತ್ತೀರಾ. ಸಾಮಾನ್ಯ ಜನರು ವಿದ್ಯುತ್ ಬೆಲೆ ಕಡಿಮೆ ಮಾಡಿ ಅಂದ್ರೇ ಆಗೋದಿಲ್ಲ ಅಂತೀರಾ. ನಿಮ್ಮದು ಜನ ವಿರೋಧಿ ಧೋರಣೆ. ಬಿಜೆಪಿಯನ್ನ ಬೈಯುವುದನ್ನು ಬಿಡಿ ಎಂದು ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ಹೇಳಿದ್ದಾರೆ.






