• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ತುಪ್ಪರಿಹಳ್ಳ, ಬೆಣ್ಣೆಹಳ್ಳ ಪ್ರವಾಹ ಹಾನಿ ಪ್ರದೇಶ ವೀಕ್ಷಿಸಿದ ಸಚಿವ ಸಂತೋಷ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in ಕರ್ನಾಟಕ, ರಾಜಕೀಯ
0
ತುಪ್ಪರಿಹಳ್ಳ, ಬೆಣ್ಣೆಹಳ್ಳ ಪ್ರವಾಹ ಹಾನಿ ಪ್ರದೇಶ ವೀಕ್ಷಿಸಿದ ಸಚಿವ ಸಂತೋಷ ಲಾಡ್
Share on WhatsAppShare on FacebookShare on Telegram

ವೈಜ್ಞಾನಿಕ, ಗುಣಮಟ್ಟದ ಕಾಮಗಾರಿಗೆ ಸಚಿವರ ತಾಕೀತು

ಧಾರವಾಡ, ಜೂನ್.10: ಕಳೆದ ನಾಲ್ಕೈದು ದಿನಗಳಿಂದ ಸುರಿದ ನಿರಂತರ ಮಳೆಯಿಂದಾಗಿ ನವಲಗುಂದ ತಾಲೂಕಿನಲ್ಲಿ ತುಪ್ಪರಿಹಳ್ಳ ಹಾಗೂ ಬೆಣ್ಣಿಹಳ್ಳದ ಪ್ರವಾಹದಿಂದ ಹಾನಿಗೊಳಗಾದ ಹನಸಿ, ಶಿರಕೋಳ, ಬಳ್ಳೂರ ಗ್ರಾಮಗಳಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ಹನಸಿ ಗ್ರಾಮದಲ್ಲಿ ಲಲಿತಾ ಗಂಗಪ್ಪ ಹೆಬ್ಬಳ್ಳಿ, ಗುರಪಾದಪ್ಪ ರುದ್ರಪ್ಪ ಆಯೆಟ್ಟಿ ಹಾಗೂ ಬಸವರಾಜ ಚಂದ್ರಶೇಖರ ಇಂಡಿ ಅವರ ಮನೆಗಳನ್ನು ಪರಿಶೀಲಿಸಿ ಶೀಘ್ರವೇ ಪರಿಹಾರ ಒದಗಿಸಲಾಗುವುದೆಂದು ತಿಳಿಸಿದರು.

ಹನಸಿ ಹಾಗೂ ಶಿರಕೋಳ ಮಧ್ಯದಲ್ಲಿ ತುಪ್ಪರಿ ಹಳ್ಳ ಹರಿವಿನ ತೀವ್ರತೆ ಹಾಗೂ ಹಾನಿಗೀಡಾದ ಪ್ರದೇಶವನ್ನು ಸಚಿವರು ವೀಕ್ಷಿಸಿದರು. ಬಳ್ಳೂರ ಗ್ರಾಮದಲ್ಲಿ ಮಳೆಹಾನಿಗೊಳಗಾದ ವಾಸುದೇವ ಬೆಳ್ಳಿಕಟ್ಟಿ ಹಾಗೂ ರೇಣ್ಣಪ್ಪ ಕುಂಬಾರ ಅವರ ಮನೆಗಳಿಗೆ ಭೇಟಿ ನೀಡಿದರು. ತಿರ್ಲಾಪುರ ಗ್ರಾಮದಿಂದ ಅಳಗವಾಡಿ ಗ್ರಾಮದ ಮದ್ಯ ತುಪ್ಪರಿಹಳ್ಳವು ಬೆಣ್ಣೆಹಳ್ಳಕ್ಕೆ ಕೂಡುವ ಸ್ಥಳವನ್ನು ವೀಕ್ಷಿಸಿದರು.

ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 2019 ರಲ್ಲಿ ಸರಕಾರ ನೀಡಿದ ಅನುದಾನದಲ್ಲಿ ಹೂಳು ತೆಗೆಯುವುದು, ಬದು ಎತ್ತರಿಸುವುದು ಹಾಗೂ ತಡೆಗೋಡೆ ಕಾಮಗಾರಿಗಳನ್ನು ಇಲಾಖೆ ಅಧಿಕಾರಿಗಳು ಕೈಗೊಂಡಿದ್ದಾರೆ. ಆದರೂ ನೀರು ಗ್ರಾಮಗಳಿಗೆ ಹಾಗೂ ರೈತರ ಜಮೀನುಗಳಿಗೆ ನುಗ್ಗಿ ಸಾಕಷ್ಟು ಹಾನಿಯಾಗುತ್ತಿದೆ. ವೈಜ್ಞಾನಿಕವಾಗಿ ಮೇಲ್ಸೇತುವೆ ಎತ್ತರಿಸುವುದು ಹಾಗೂ ಹಲವೆಡೆ ಬ್ಯಾರೇಜಗಳನ್ನು ನಿರ್ಮಿಸಿ ಮುಂದಿನ ದಿನಗಳಲ್ಲಿ ಜನರಿಗೆ ರೈತರಿಗೆ ತೊಂದರೆ ಆಗದಂತೆ ಕ್ರಮಕೈಗೊಳ್ಳಲಾಗುವುದು. ಮಳೆಗಾಲದ ನಂತರ ದುರಸ್ತಿ ಕಾರ್ಯ ಕೈಗೊಳ್ಳುವುದಾಗಿ ತಿಳಿಸಿದರು. ಈ ಸಂಬಂಧ ಶಾಸಕರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.

ವೈಜ್ಞಾನಿಕ ಹಾಗೂ ಗುಣಮಟ್ಟದ ಕಾಮಗಾರಿ ನಿರ್ಮಾಣಕ್ಕೆ ಗುತ್ತಿಗೆದಾರರಿಗೆ, ಅಧಿಕಾರಿಗಳಿಗೆ ತಾಕೀತು ಮಾಡಲಾಗುವುದು. ತಾಂತ್ರಿಕತೆ ಅರಿತು ಟೆಂಡರ್ ಕರೆಯುವುದು ಸೂಕ್ತ. ತುಪ್ಪರಿಹಳ್ಳ ಹಾಗೂ ಬೆಣ್ಣಿಹಳ್ಳಗಳಲ್ಲಿ ವ್ಯರ್ಥವಾಗಿ ಹರಿಯುವ ನೀರನ್ನು ಸಂಗ್ರಹಿಸಿ ಸದ್ಬಳಕೆಗೆ ಯೋಜನೆ ರೂಪಿಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಎನ್.ಎಚ್.ಕೋನರಡ್ಡಿ, ಜಿಲ್ಲಾದಿಕಾರಿ ದಿವ್ಯಪ್ರಭು ಜಿಆರ್‌ಜೆ, ಪೊಲೀಸ್‌ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

25 ಸಾವಿರ ಧನಸಹಾಯ ಮಾಡಿದ ಸಚಿವರು
ಧಾರವಾಡ ಜಿಲ್ಲೆ ನವಲಗುಂದ ತಾಲ್ಲೂಕಿನ ಹಣಸಿ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಲಲಿತಾ ಗಂಗಪ್ಪ ಹೆಬ್ಬಳ್ಳಿ ಅವರ ಮನೆ ಹಾನಿಗೊಳಗಾಗಿದ್ದು, ಇಂದು ಅವರ ಮನೆಗೆ ಸಚಿವ ಸಂತೋಷ್‌ ಲಾಡ್‌ ಅವರು ಭೇಟಿ ನೀಡಿ ವೀಕ್ಷಣೆ ಮಾಡಿದರು. ಇದೇ ವೇಳೆ ವೈಯುಕ್ತಿಕವಾಗಿ ₹25 ಸಾವಿರ ಧನಸಹಾಯ ಮಾಡಿದರು. ಅಲ್ಲದೆ ಮನೆ ಕುಸಿತದಿಂದ ತೊಂದರೆಗೊಳಗಾಗಿರುವ ಇತರ ಮೂವರಿಗೆ ಆರ್ಥಿಕ ಸಹಾಯ ಮಾಡಿದರು.

ನವಲಗುಂದ ತಾಲ್ಲೂಕಿನ ಹಲವು ಭಾಗದಲ್ಲಿ ಮಳೆಯಿಂದಾಗಿ ಮನೆ ಕುಸಿತ ಸೇರಿದಂತೆ ಸಾಕಷ್ಟು ಹಾನಿಯಾಗಿದೆ. ಭೇಟಿ ವೇಳೆ ಕುಸಿತಗೊಂಡ ಮನೆಗಳನ್ನು ವೀಕ್ಷಣೆ ಮಾಡಲಾಯಿತು. ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Tags: Santosh Lad
Previous Post

ವಿಡಿಯೋ ತೋರಿಸಿ ಚಂದನ್ ನಿವೇದಿತಾ ಬಗ್ಗೆ ಹೇಳಿದೆನು ಹೇಳಿದ್ದೇನು?

Next Post

ಬರದ ನಡುವೆ ತಡೆರಹಿತ ವಿದ್ಯುತ್‌ ಪೂರೈಕೆ ಸಾಧ್ಯವಾಗಿಸಿದ್ದು ಹೇಗೆ? ವಿವರ ನೀಡಿದ ಜಾರ್ಜ್‌!

Related Posts

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

by ಪ್ರತಿಧ್ವನಿ
May 17, 2026
0

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ...

Read moreDetails
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
Next Post
ಬರದ ನಡುವೆ ತಡೆರಹಿತ ವಿದ್ಯುತ್‌ ಪೂರೈಕೆ ಸಾಧ್ಯವಾಗಿಸಿದ್ದು ಹೇಗೆ? ವಿವರ ನೀಡಿದ ಜಾರ್ಜ್‌!

ಬರದ ನಡುವೆ ತಡೆರಹಿತ ವಿದ್ಯುತ್‌ ಪೂರೈಕೆ ಸಾಧ್ಯವಾಗಿಸಿದ್ದು ಹೇಗೆ? ವಿವರ ನೀಡಿದ ಜಾರ್ಜ್‌!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada