• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು: ವಿಧೇಯಕ ಮಂಡನೆಗೆ ಸಂಪುಟ ಒಪ್ಪಿಗೆ

ಪ್ರತಿಧ್ವನಿ by ಪ್ರತಿಧ್ವನಿ
July 16, 2024
in Top Story, ಅಂಕಣ, ಇದೀಗ, ರಾಜಕೀಯ, ವಿಶೇಷ
0
ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು: ವಿಧೇಯಕ ಮಂಡನೆಗೆ ಸಂಪುಟ ಒಪ್ಪಿಗೆ
Share on WhatsAppShare on FacebookShare on Telegram

ಕನ್ನಡಿಗರ ಸುಧೀರ್ಘ ಕಾಲದ ಬೇಡಿಕೆ ಈಡೇರಿಸಿದ ಶ್ರೇಯ ಪಡೆದ ಸಚಿವ ಸಂತೋಷ್ ಲಾಡ್.. ಖಾಸಗಿ ಕ್ಷೇತ್ರಗಳಲ್ಲಿ ದುಡಿಯುವ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸೋಮವಾರ ನಡೆದ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ADVERTISEMENT

ಇದೇ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವುದಾಗಿ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ತಿಳಿಸಿದ್ದಾರೆ.

‘ದಿ ಕರ್ನಾಟಕ ಸ್ಟೇಟ್ ಎಂಪ್ಲಾಯ್​​ಮೆಂಟ್ ಆಫ್ ಲೋಕಲ್ ಕ್ಯಾಡಿಡೇಟ್ಸ್ ಇನ್ ದಿ ಇಂಡಸ್ಟ್ರೀಸ್, ಫ್ಯಾಕ್ಟರೀಸ್ ಆ್ಯಂಡ್ ಲೋಕಲ್ ಎಷ್ಟಾಬ್ಲಿಷ್‌ಮೆಂಟ್ ಬಿಲ್-2024 ವಿಧೇಯಕದಂತೆ ಮ್ಯಾನೇಜ್‌ಮೆಂಟ್ ಹುದ್ದೆಗಳು ಶೇ.50 ಹಾಗೂ ನಾನ್ ಮ್ಯಾನೇಜ್‌ಮೆಂಟ್ ಶೇ.75ರಷ್ಟು ಹುದ್ದೆಗಳು ಸ್ಥಳೀಯರಿಗೆ ಮೀಸಲಿಡಲಾಗುತ್ತದೆ.

ಕರ್ನಾಟಕದಲ್ಲಿಯೇ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷದಿಂದ ವಾಸಿಸುತ್ತಿರುವವರು, ಕನ್ನಡ ಓದಲು, ಬರೆಯಲು ಮತ್ತು ಮಾತನಾಡಲು ಬರುವವರು, ನೋಡಲ್ ಏಜೆನ್ಸಿ ನಡೆಸುವ ಕನ್ನಡ ಪರೀಕ್ಷೆಯಲ್ಲಿ ಪಾಸಾದವರನ್ನು ಸ್ಥಳೀಯರು ಎಂದು ಪರಿಗಣಿಸಲಾಗುವುದು. ಮ್ಯಾನೇಜ್‌ಮೆಂಟ್​​ನಲ್ಲಿ ಸೂಪರ್‌ವೈಸ‌ರ್, ಮ್ಯಾನೇಜಿರಿಯಲ್, ಟೆಕ್ನಿಕಲ್, ಆಪರೇಷನಲ್, ಆಡಳಿತ ಸೇರಿ ಉನ್ನತ ಹುದ್ದೆಗಳಲ್ಲಿ ಶೇ.50 ಉದ್ಯೋಗ ಸ್ಥಳೀಯರಿಗೆ ಮೀಸಲಿಡಲಾಗುವುದು. ಇನ್ನು ನಾನ್-ಮ್ಯಾನೇಜ್‌ಮೆಂಟ್​​ನಲ್ಲಿ ಕ್ಲರ್ಕ್‌ಗಳು, ಕೌಶಲ, ಕೌಶಲ ರಹಿತ ಹಾಗೂ ಅರೆಕೌಶಲ, ಗುತ್ತಿಗೆ ನೌಕರ ಹಾಗೂ ಐಟಿ ಹುದ್ದೆಗಳಲ್ಲಿ ಶೇ.75 ಮೀಸಲು ಸ್ಥಳೀಯರಿಗೆ ನೀಡುವ ವಿಧೇಯಕ ಇದಾಗಿದೆ.

ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ದಂಡ ವಿಧಿಸುವ ಅಂಶವನ್ನೂ ವಿಧೇಯಕದಲ್ಲಿ ಸೇರಿಸಲಾಗಿದೆ. ಕನಿಷ್ಠ 10 ಸಾವಿರ ರೂ. ಹಾಗೂ 25 ಸಾವಿರ ರೂ.ಗಳ ವರೆಗೆ ದಂಡ ವಿಸ್ತರಣೆ ಮಾಡಲು ಅವಕಾಶ ನೀಡಲಾಗುತ್ತದೆ. ಆ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ ವಿಧಿಸಲಾಗುತ್ತದೆ.

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ಈ ನಿಟ್ಟಿನಲ್ಲಿ ವಿಧೇಯಕವು ಮಹತ್ವದ ಪಾತ್ರ ವಹಿಸಲಿದೆ. ಕನ್ನಡಿಗ ನೌಕರರ ಜೀವನ ಭದ್ರತೆಗೆ ಇದು ಸಹಾಯವಾಲಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್‌ ಲಾಡ್‌ ಅವರು ತಿಳಿಸಿದ್ದಾರೆ.

Tags: BJPCongress Partysanthosh ladಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದಾಖಲೆ ಸಮೇತ ಸಿಎಂ ಸಿದ್ದರಾಮಯ್ಯ ನಿಂಗೆ ಬೆವರಿಳಿಸಿದ B Y ವಿಜಯೇಂದ್ರ

Next Post

ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ವಿಧೇಯಕ 2024

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ವಿಧೇಯಕ 2024

ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕಲ್ಯಾಣ) ವಿಧೇಯಕ 2024

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada