ಬೆಂಗಳೂರು(Bangalore): ವಾಲ್ಮೀಕಿ ನಿಗಮದಲ್ಲಿ ಕೋಟ್ಯಾಂತರ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಸರ್ಕಾರ(Government) ಆದೇಶ ಹೊರಡಿಸಿದೆ.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ್(JG Padmanaban), ಲೆಕ್ಕಾಧಿಕಾರಿ ಪರಶುರಾಮ್ ಜಿ.ದುರ್ಗಣ್ಣ(Parashuram G Durganna) ಅಮಾನತುಗೊಂಡಿರುವ ಅಧಿಕಾರಿಗಳು. ಇಬ್ಬರನ್ನೂ ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನಿಗಮದ ಮುಖ್ಯ ಖಾತೆಯಲ್ಲಿ ಮೀಸಲಿಟ್ಟಿದ್ದ 187 ಕೋಟಿ ರೂ. ಮೊತ್ತದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೆ 88 ಕೋಟಿ ರೂ. ಹಣವನ್ನು ಅನ್ಯ ಖಾತೆಗೆ ವರ್ಗಾಯಿಸಿ ದುರುಪಯೋಗ ಮಾಡಿಕೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧೀಕ್ಷಕ ಚಂದ್ರಶೇಖರ್(Chandrashekar) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್‌ನೋಟ್‌ನಲ್ಲಿ(Death Note) ಇಬ್ಬರು ಅಧಿಕಾರಿಗಳು ಮತ್ತು ಬ್ಯಾಂಕ್ ಉದ್ಯೋಗಿಯೊಬ್ಬರ ಹೆಸರು ಉಲ್ಲೇಖಿಸಲಾಗಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿಯೇ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇಲಾಖಾ ಸಚಿವರು(Minister), ನಿಗಮದ ಅಧ್ಯಕ್ಷರು, ಹಿರಿಯ ಅಧಿಕಾರಿಗಳ ಗಮನಕ್ಕೆ ತರದೇ ಯೂನಿಯನ್ ಆಫ್ ಇಂಡಿಯಾದ ಅಧಿಕೃತ ಖಾತೆಗೆ ವರ್ಗಾಯಿಸಲಾದ ಹಣ ಹಿಂಪಡೆಯುವ ಕಾರ್ಯವನ್ನೂ ಅಧಿಕಾರಿಗಳು ಮಾಡಿದ್ದಾರೆ.