
ನವದೆಹಲಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಕುರಿತು ಒಳಗೆ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದ ತೀರ್ಪಿನ ವಿರುದ್ಧ ಪ್ರತಿಭಟನೆಗೆ ಇಂದು ಕರೆ ನೀಡಲಾಗಿದ್ದು, ಇಂದಿನ ಭಾರತ್ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಅತ್ತ ಉತ್ತರ ಭಾರತದ ಬಿಹಾರದ ಪಾಟ್ನಾದಲ್ಲಿ ಪ್ರತಿಭಟನೆಯು ತೀವ್ರ ಸ್ವೂರೂಪ ಪಡೆದುಕೊಳ್ಳುತ್ತಿದ್ದಂತೆ, ಒತ್ತಾಯದಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಕೂಡ ಮಾಡಬೇಕಾಯಿತು. ಇನ್ನು ಝಾರ್ಖಂಡ್ನಲ್ಲಿ ಪ್ರತಿಭಟನೆಯು ಯಶಸ್ವಿಯಾಗಿದ್ದು, ಅಲ್ಲಲ್ಲಿ ಟೈಯರ್ಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾ ನಿರತರು ಮೀಸಲಾತಿ ಕುರಿತ ಸುಪ್ರೀಂ ಆದೇಶದ ಬಗ್ಗೆ ಆಕ್ರೋಶ ಹೊರಹಾಕಿದರು.
#WATCH | Bihar: Police lathi-charge people in Patna as they stage protest in support of a day-long Bharat Bandh against the Supreme Court's recent judgment on reservations. pic.twitter.com/5jEMQiagJJ
— ANI (@ANI) August 21, 2024
ಮೀಸಲಾತಿ ಬಚಾವೋ ಸಂಘರ್ಷ ಸಮಿತಿಯು ಇಂದು ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾರುಕಟ್ಟೆಗಳನ್ನು ಮುಚ್ಚುವಂತೆ ಎಲ್ಲಾ ವ್ಯಾಪಾರ ಸಂಸ್ಥೆಗಳಿಗೆ ಒತ್ತಾಯಿಸಿ ಭಾರತ್ ಬಂದ್ಗೆ ಕರೆ ನೀಡಿತ್ತು. ಅಗತ್ಯ ಸೇವೆಗಳಾದ ಆಯಂಬುಲೆನ್ಸ್ ಸೇವೆ, ಆಸ್ಪತ್ರೆಗಳು ಮತ್ತು ಅಗತ್ಯ ವೈದ್ಯಕೀಯ, ಔಷಧಿ ಅಂಗಡಿಗಳ ಸೇವೆಗಳು ಕಾರ್ಯನಿರ್ವಹಿಸಿವೆ. ಪೊಲೀಸ್ ಸೇವೆಗಳ ಕಾರ್ಯಾಚರಣೆ ಎಂದಿನಂತೆ ಕಂಡುಬಂದಿದ್ದು, ಬಂದ್‌ಗೆ ಕರೆ ನೀಡಿದರೂ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು, ಪೆಟ್ರೋಲ್ ಪಂಪ್‌ಗಳು ಕಾರ್ಯನಿರ್ವಹಿಸಿದ್ದು ವರದಿಯಾಗಿದೆ.
 
			 
                                 
                                