ರಾಜ್ಯಸಭೆಯ (Rajya sabha) ಉಪಸಭಾಪತಿ ಎಂ.ಕೆ.ಪ್ರಾಣೇಶ್ (MK Pranesh) ಸ್ಥಾನಕ್ಕೆ ಕಂಟಕ ಎದುರಾಗಿದೆ. ಇಂದು ಚಿಕ್ಕಮಗಳೂರಿನ ಐ.ಡಿ.ಎಸ್.ಜಿ. ಕಾಲೇಜಿನಲ್ಲಿ 3 ವರ್ಷ ಹಿಂದಿನ ಚುನಾವಣೆಯ ಮರು ಮತ ಎಣಿಕೆ ಕಾರ್ಯ ನಡೆಯಲಿದೆ.

ಈ ಹಿಂದೆ ಬಿಜೆಪಿ ಅಭ್ಯರ್ಥಿಯಾಗಿದ್ದ ಎಂ.ಕೆ. ಪ್ರಾಣೇಶ್ ಕೇವಲ ಮತಗಳ ಅಂತರದಿಂದ ಜಯಗಳಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ (Gayatri shanetegowda) 6 ಮತಗಳ ಅಂತರದಿಂದ ಪರಾಭವಗೊಂಡಿದ್ರು.ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿ ಸರ್ಕಾರದ ನಾಮನಿರ್ದೇಶಿತ ಸದಸ್ಯರ 12 ಮತಗಳನ್ನು ಪರಿಗಣಿಸದಂತೆ ಕೋರ್ಟ್ ಮೊರೆ ಹೋಗಿದ್ದರು.

ಈ ಬಗ್ಗೆ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ನಲ್ಲಿ ನಾಮಿನಿ ಸದಸ್ಯರ ಮತಗಳನ್ನು ಹೊರತುಪಡಿಸಿ ಮರು ಮತ ಎಣಿಕೆಗೆ ಆದೇಶ ಬಂದಿದೆ. ಹೀಗಾಗಿ 12 ಮತಗಳನ್ನು ಪರಿಗಣಿಸದೇ ಹೋದಲ್ಲಿ ಉಪ ಸಭಾಪತಿ ಪ್ರಾಣೇಶ್ ಅವರ ಗೆಲುವು ಕಷ್ಟ ಎನ್ನಲಾಗ್ತಿದೆ.