• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಮನಗರ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿರುದ್ಧ ಶಾಸಕಿ ಅನಿತಾ ಕುಮಾರಸ್ವಾಮಿ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
February 21, 2023
in Top Story, ಕರ್ನಾಟಕ, ರಾಜಕೀಯ
0
ರಾಮನಗರ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿರುದ್ಧ ಶಾಸಕಿ ಅನಿತಾ ಕುಮಾರಸ್ವಾಮಿ ಆಕ್ರೋಶ
Share on WhatsAppShare on FacebookShare on Telegram

ಹಾರೋಹಳ್ಳಿ ತಾಲೂಕು ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕರ ಹಕ್ಕುಚ್ಯುತಿ

ADVERTISEMENT

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಹಾಗೂ ರಾಮನಗರ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ವಿರುದ್ಧ ರಾಮನಗರ ವಿಧಾನಸಭೆ ಕ್ಷೇತ್ರದ ಶಾಸಕರಾದ ಅನಿತಾ ಕುಮಾರಸ್ವಾಮಿ ಅವರು, ಶಿಷ್ಟಾಚಾರ ಉಲ್ಲಂಘನೆ ಹಾಗೂ ಹಕ್ಕುಚ್ಯುತಿ ಆರೋಪ ಮಾಡಿದ್ದಾರೆ.

ಹಾರೋಹಳ್ಳಿ ತಾಲೂಕು ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಅಶ್ವತ್ಥನಾರಾಯಣ ನಾರಾಯಣ ಅವರು, ತಮ್ಮನ್ನು ಕಡೆಗಣಿಸಿ ಅಪಮಾನ ಮಾಡಿದ್ದಾರೆ. ಉನ್ನತ ಶಿಕ್ಷಣ ಸಚಿವರ ಉನ್ನತ ಮೌಲ್ಯ ಇದೇನಾ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ಕೊಡಬೇಕು ಹಾಗೂ ಈ ಬಗ್ಗೆ ವಿಧಾನಸಭೆ ಸಭಾಧ್ಯಕ್ಷರು, ಹಕ್ಕು ಭಾದ್ಯತಾ ಸಮಿತಿ ಅಧ್ಯಕ್ಷರಿಗೆ ದೂರು ಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಬಗ್ಗೆ ಅನಿತಾ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.

ಹಾರೋಹಳ್ಳಿ ತಾಲೂಕು ಕಚೇರಿ ಲೋಕಾರ್ಪಣೆಗೊಳಿಸುವ ವಿಷಯದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತೋರಿದ ಆತುರ ನನಗೆ ಅಚ್ಚರಿ ಉಂಟು ಮಾಡಿದೆ. ರಾಜಕೀಯಕ್ಕಾಗಿ ಶಿಷ್ಟಾಚಾರವನ್ನು ಹತ್ತಿಕ್ಕಿ, ಓರ್ವ ಮಹಿಳಾ ಶಾಸಕಿಯನ್ನು ಅಪಮಾನಿಸುವುದು ಎಷ್ಟು ಸರಿ ಎನ್ನುವುದು ನನ್ನ ಪ್ರಶ್ನೆ ಎಂದಿದ್ದಾರೆ.

ಹಾರೋಹಳ್ಳಿ ತಾಲೂಕು ಕೇಂದ್ರ ರಚನೆಗೆ ಕಾರಣಕರ್ತರು ಯಾರು? ಎನ್ನುವುದು ಜನತೆಗೆ ಗೊತ್ತಿದೆ. ಮಾಜಿ ಮುಖ್ಯಮಂತ್ರಿಗಳಾದ  ಹೆಚ್.ಡಿ.ಕುಮಾರಸ್ವಾಮಿ ಅವರ ಒತ್ತಾಸೆ ಹಾಗೂ ನನ್ನ ಬದ್ಧತೆಯ ಕುರುಹಾಗಿ ಹಾರೋಹಳ್ಳಿ ತಾಲೂಕು ಕೇಂದ್ರವಾಗಿ ಹೊರಹೊಮ್ಮಿದೆ. ಕುಮಾರಸ್ವಾಮಿ ಅವರೇ ಹಾರೋಹಳ್ಳಿ ತಾಲೂಕು ಕೇಂದ್ರ ಘೋಷಣೆ ಮಾಡಿದ್ದು. ಉಸ್ತುವಾರಿ ಸಚಿವರಿಗೆ ಇದೆಲ್ಲಾ ಗೊತ್ತಿಲ್ಲವೆ?  ಹಾರೋಹಳ್ಳಿ ತಾಲೂಕು ಕೇಂದ್ರದ ಅಭಿವೃದ್ಧಿಗೆ ನಾನು ಸಾಕಷ್ಟು ಅನುದಾನ ತಂದಿದ್ದೇನೆ. ನಾನು ಮತ್ತು  ಕುಮಾರಸ್ವಾಮಿ ಅವರು ರಾಜಕೀಯವನ್ನು ಬದಿಗಿಟ್ಟು ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ಆದರೆ, ಪ್ರತಿ ಸಣ್ಣ ವಿಷಯದಲ್ಲಿಯೂ ರಾಜಕೀಯ ಹುಡುಕುವ ಉಸ್ತುವಾರಿ ಸಚಿವರಿಗೆ, ಶಾಸಕರು ಕೂಡ ಉತ್ತರದಾಯಿ ಎನ್ನುವ ಸಾಮಾನ್ಯ ಜ್ಞಾನ ಇಲ್ಲದಾಯಿತಲ್ಲ ಎನ್ನುವುದು ನನಗೆ ಬೇಸರ ಉಂಟು ಮಾಡಿದೆ ಎಂದು ತಿಳಿಸಿದ್ದಾರೆ.

ಕ್ಷೇತ್ರದಲ್ಲಿ ಯಾವುದೇ ಸರಕಾರಿ ಕಾರ್ಯಕ್ರಮ ನಡೆದರೂ ಅದರ ಅಧ್ಯಕ್ಷತೆ ಆಯಾ ಕ್ಷೇತ್ರದ ಶಾಸಕರು ವಹಿಸಬೇಕು. ಇದು ಶಿಷ್ಟಾಚಾರ ಮಾತ್ರವಲ್ಲ, ಶಾಸಕರ ಹಕ್ಕು ಕೂಡ. ಆದರೆ, ಸಚಿವರು ನನ್ನ ಹಕ್ಕು ಕಸಿದುಕೊಂಡಿದ್ದಾರೆ. ಇದು ಅನ್ಯಾಯದ ಪರಮಾವಧಿ. ಬಿಜೆಪಿ ಸರಕಾರದಲ್ಲಿ ಮಹಿಳೆಯರಿಗೆ ಸಿಗುತ್ತಿರುವ ಗೌರವ ಈ ರೀತಿಯದ್ದು ಎಂದಿದ್ದಾರೆ.

ಸಚಿವರಿಗೆ ಹಾರೋಹಳ್ಳಿ ತಾಲೂಕು ಕೇಂದ್ರದ ಅಭಿವೃದ್ಧಿಗೆ ನಾನು ಮತ್ತು ಶ್ರೀ ಕುಮಾರಸ್ವಾಮಿ ಅವರು ನಡೆಸಿರುವ ಪ್ರಯತ್ನಗಳು, ತಂದ ಅನುದಾನದ ಬಗ್ಗೆ ಮಾಹಿತಿ ಇಲ್ಲದಿದ್ದರೆ ಮೊದಲು ದಾಖಲೆಗಳನ್ನು ಪರಿಶೀಲನೆ ಮಾಡಲಿ, ಅದಕ್ಕೂ ಸಮಯ ಇಲ್ಲ ಎಂದಾದರೆ ಅವರ ಸಂಪುಟ ಸಹೋದ್ಯೋಗಿ, ಕಂದಾಯ ಸಚಿವರಾದ ಆರ್.ಅಶೋಕ್ ಅವರನ್ನು ಸಂಪರ್ಕ ಮಾಡಲಿ ಎಂದು ಹೇಳಿದ್ದಾರೆ.

ಜನರ ಸಂಕಷ್ಟಗಳ ಪರಿಹಾರ, ಅಭಿವೃದ್ಧಿ ವಿಷಯದಲ್ಲಿ ನಾನಾಗಲಿ, ಶ್ರೀ ಕುಮಾರಸ್ವಾಮಿ ಅವರಾಗಲಿ ಅಥವಾ ನಮ್ಮ ಪಕ್ಷವಾಗಲಿ ಕ್ಷುಲ್ಲಕ ರಾಜಕೀಯ ಮಾಡಿಲ್ಲ, ಮಾಡುವುದೂ ಇಲ್ಲ. ಅಂತಹ ರಾಜಕೀಯದಲ್ಲಿ ನಿಪುಣರಾಗಿರುವ ಬಿಜೆಪಿಗರಿಗೆ ಶಿಷ್ಟಾಚಾರ ಎನ್ನುವುದು ಗೊತ್ತಿರಲು ಹೇಗೆ ಸಾಧ್ಯ? ಉನ್ನತ ಶಿಕ್ಷಣ ಸಚಿವರ ಉನ್ನತ ಮೌಲ್ಯ ಎಂದರೆ, ಮಹಿಳಾ ಶಾಸಕರನ್ನು ಅಪಮಾನಿಸುವುದಾ?  ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇದಕ್ಕೆ ಉತ್ತರ ನೀಡಬೇಕು ಹಾಗೂ ಶಾಸಕಿಗೆ ಅಪಮಾನಿಸಿದ ಸಚಿವರ ನಡೆಯನ್ನು ಖಂಡಿಸಬೇಕು. ಈ ಬಗ್ಗೆ ನನಗೆ ಬಹಳ ನೋವಾಗಿದೆ. ಮಾನ್ಯ ಸಭಾಧ್ಯಕ್ಷರು ಹಾಗೂ ಹಕ್ಕು ಭಾದ್ಯತಾ ಸಮಿತಿ ಅಧ್ಯಕ್ಷರಿಗೆ ದೂರು ಸಲ್ಲಿಸಲಾಗುವುದು ಎಂದು ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

Tags: anitha kumaraswamyashwath narayanಬಿಜೆಪಿ
Previous Post

ಮಾದೇಶ್ವರ ಮಾದಪ್ಪನಿಗೆ ಉಘೇ ಉಘೇ ಎಂದ ಭಕ್ತರು..!

Next Post

ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು.. ಮಹಿಳೆಯರ ಜಗಳದಲ್ಲಿ ಇವರಿಗ್ಯಾಕೆ ಶಿಕ್ಷೆ..!?

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

February 7, 2026
Next Post
ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು.. ಮಹಿಳೆಯರ ಜಗಳದಲ್ಲಿ ಇವರಿಗ್ಯಾಕೆ ಶಿಕ್ಷೆ..!?

ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು.. ಮಹಿಳೆಯರ ಜಗಳದಲ್ಲಿ ಇವರಿಗ್ಯಾಕೆ ಶಿಕ್ಷೆ..!?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada