ಮಂಡ್ಯ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ RSS ಕಚೇರಿ ಉದ್ಘಾಟನೆಗೊಂಡಿದ್ದು, ಈ ಸಮಾರಂಭದಲ್ಲಿ ಜೆಡಿಎಸ್ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಕಾಂಗ್ರೆಸ್ ಬೆಂಬಲಿತ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರುಗಳು ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ.

ಮಂಡ್ಯದ ಪಾಂಡವಪುರದಲ್ಲಿ ನೂತನವಾಗಿ RSS ಕಚೇರಿ ಆರಂಭಿಸಲಾಗಿದ್ದು, ನೂತನ ಕಚೇರಿ ಉದ್ಘಾಟನೆಗೆ ಬಿಜೆಪಿ, ಜೆಡಿಎಸ್, ರೈತಸಂಘದ ನಾಯಕರು ಪಕ್ಷಾತೀತವಾಗಿ ಪಾಲ್ಗೊಂಡಿದ್ದಾರೆ. ಕಚೇರಿ ಉದ್ಘಾಟನೆಯಲ್ಲಿ ಮಾಜಿ ಸಚಿವ ಪುಟ್ಟರಾಜು ಅವರು ದಂಪತಿ ಸಮೇತ ಭಾಗವಹಿಸಿದ್ದರು.

ಇವರೊಂದಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್ ಸೇರಿ ಹಲವರು ಭಾಗವಹಿಸಿದ್ದರು.

ನೂತನವಾಗಿ ಆರಂಭಿಸಲಾದ ಆರ್‌ಎಸ್‌ಎಸ್ ಕಚೇರಿಯಲ್ಲಿ ವಿಧಿ ವಿಧಾನದಂತೆ ಪೂಜೆ ನಡೆಸಲಾಯಿತು. ಈ ಸಮಾರಂಭದಲ್ಲಿ ಪಕ್ಷಾತೀತವಾಗಿ ಭಾಗವಹಿಸಿದ ರಾಜಕೀಯ ನಾಯಕರು ವಿಶೇಷ ಗಮನ ಸೆಳೆದರು.