ರಾಜ್ಯದಲ್ಲಿ ಉಪಚುನಾವಣೆ ಮುಗಿಯುತ್ತಿದ್ದಂತೆ ಆಡಳಿತ ಪಕ್ಷ ಕಾಂಗ್ರೆಸ್ (Congress) ಮತ್ತು ವಿರೋಧ ಪಕ್ಷದ ಬಿಜೆಪಿ (BJP)ನಡುವೆ ರಾಜಕೀಯ ಕೆಸರೆರಚಾಟ ಜೋರಾಗಿದೆ. ಈ ಮುನ್ನ ಸ್ವತಃ ಸಿಎಂ ಸಿದ್ದರಾಮಯ್ಯ (Cm siddaramaiah) ಬಿಜೆಪಿ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿದೆ. ನಮ್ಮ ಶಾಸಕರಿಗೆ ಬಿಜೆಪಿಯವರು 50 ಕೋಟಿ ಆಫರ್ ನೀಡಿದೆ ಎಂಬ ಆರೋಪ ಮಾಡಿದ್ದರು.
ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಕಾಂಗ್ರೆಸ್ ಶಾಸಕ ರವಿ ಗಣಿಗ (Ganiga ravi), ಬಿಜೆಪಿಯವರು ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಅಲ್ಲ,100 ಕೋಟಿ (100 crores) ರೂಪಾಯಿ ಆಫರ್ ಬಂದಿತ್ತು ಎಂದು ಶಾಸಕ ರವಿ ಗಣಿಗ ಹೊಸ ಆರೋಪ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಶಾಸಕ ರವಿ ಗಣಿಗ, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿರುವ ಮಾತು ಸತ್ಯ. ಹೀಗೆ ಬಿಜೆಪಿ ನಾಯಕರು ನಮ್ಮ ಶಾಸಕರನ್ನು ಭೇಟಿ ಮಾಡಿರುವ ದಾಖಲೆಗಳು ಕೂಡ ನಮ್ಮ ಬಳಿ ಇದೆ. ಸಮಯ ನೋಡಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.