ವಿಧಾನಸಭಾ ಚುನಾವಣಾಯಲ್ಲಿ ಒಬ್ಬ ಸಾಮಾನ್ಯ ವ್ಯಕ್ತಿಯೂ ಗೆಲ್ಲಬಹುದು ಎಂದು ತೋರಿಸಿಕೊಟ್ಟ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ Bigg Boss Kannada ಮನೆಯನ್ನು ಪ್ರವೇಶ ಮಾಡಿದ್ದಾರೆ.
ಹೌದು, ಅಧಿಕೃತವಾಗಿ ನಿನ್ನೆ ಬಿಗ್ ಬಾಸ್ ಕನ್ನಡ 10ನೇ ಸೀಸನ್ ಗೆ ಚಾಲನೆ ಸಿಕ್ಕಿದ್ದು, ಎಲ್ಲ ಸ್ಪರ್ಧಿಗಳನ್ನು ಸುದೀಪ್ ಶನಿವಾರವೇ ಬಿಗ್ ಬಾಸ್ ಮನೆಗೆ ಕಳುಹಿಸಿದ್ದರೆ, ಒಂದು ದಿನ ತಡವಾಗಿ ಪ್ರದೀಪ್ ದೊಡ್ಮನೆ ಪ್ರವೇಶ ಮಾಡಿದ್ದಾರೆ. ಡೊಳ್ಳು ಕುಣಿತ ಮೂಲಕ ಅವರನ್ನು ಬಿಗ್ ಬಾಸ್ ಮನೆಗೆ ಸ್ವಾಗತ ನೀಡಿದ್ದಾರೆ.
ಈ ಸಂದರ್ಭದಲ್ಲಿ ಪ್ರದೀಪ್ ಈಶ್ವರ್ ಕಂಡು ಸ್ಪರ್ಧಿಗಳು ಅಚ್ಚರಿ ವ್ಯಕ್ತ ಪಡಿಸಿದರು. ಕಾಮಿಡಿಯನ್ ಸಂತು, ‘ಅಯ್ಯೊ ನಾವು ಒಬ್ಬ ಎಂ.ಎಲ್.ಎ ಜೊತೆ ಸ್ಪರ್ಧೆ ಮಾಡ್ತುದಿವಿ’ ಎಂದು ಹಶಳಿದರೆ, ಅದಕ್ಕೆ ಪ್ರದೀಪ್, ‘ನಾವು ಸೋಲಬೇಕು ಅಂತಾನೆ ಬೆಂಗಳೂರಿಗೆ ಬಂದವನು’ ಎಂದು ಉತ್ತರಿಸಿದ್ದಾರೆ.
ಪ್ರದೀಪ್ ಈಶ್ವರ್ ಮನೆಗೆ
ಇವಾಗ ತಾನೆ ಬಂದಿದ್ದು. ಒಬ್ಬ ಜನಪ್ರತಿನಿಧಿ ಎಷ್ಟು ದಿನ ಆ ಮನೆಯಲ್ಲಿ ಉಳಿಯುತ್ತಾರೆ ಎನ್ನುವುದು ನೋಡಬೇಕು. ಅಥವಾ ಕ್ಷೇತ್ರದ ಕೆಲಸ ಇರುವುದರಿಂದ ಒಂದಷ್ಟು ದಿನ ಮಾತ್ರ ಅತಿಥಿಯಾಗಿ ಬಂದಿದ್ದಾರೆಯೇ ಕಾದು ನೋಡಬೇಕು.






