ಚಿಕ್ಕಬಳ್ಳಾಪುರದಲ್ಲಿ (Chikkaballapura) ಶಾಸಕ ಪ್ರದೀಪ್ ಈಶ್ವರ್ (Pradeep eshwar) ಮನೆ ಮೇಲೆ ತಡರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕರ ಮನೆ ಮೇಲೆ ಕಲ್ಲು ತೂರಿದ್ದು ದುರ್ಘಟನೆಯಲ್ಲಿ ಮನೆಯ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ.

ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ (Dr.k.sudhakar) ಗೆಲುವು ಹಿನ್ನೆಲೆ ಬೆನ್ನಲ್ಲೇ ಕಲ್ಲು ತೂರಾಟ ನಡೆದಿರೋದು ದ್ವೇಷದ ರಾಜಕಾರಣದ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಸುಧಾಕರ್‌ರನ್ನ ಸೋಲಿಸಿದ್ದ ಪ್ರದೀಪ್ ಈಶ್ವರ್ ನಿರಂತರವಾಗಿ ಅವರ ಮೇಲೆ ವಾಗ್ದಾಳಿ ನಡೆಸಿದ್ದರು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೂಡ ಸುಧಾಕರ್‌ರನ್ನ ಸೋಲಿವಂತೆ ಸವಾಲು ಹಾಕಿದ್ದರು.