ಬೆಂಗಳೂರು : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪತ್ನಿಯ ಕಾರಿನ ಮೇಲೆ ಕಲ್ಲು ತೂರಾಟ ನಡೆದ ಘಟನೆಯು ಹೊಸಕೋಟೆ ನಗರದ ಪಾರ್ವತಿಪುರದಲ್ಲಿ ಸಂಭವಿಸಿದೆ. ಇಂದು ಬೆಳಗ್ಗೆ ಪತಿಯ ಪರವಾಗಿ ಪ್ರತಿಭಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

ಪ್ರತಿಭಾ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿನ ಮೇಲೆ ಯುವಕ ಕಲ್ಲು ಎಸೆದಿದ್ದಾನೆ. ಪರಿಣಾಮ ಕಾರಿನ ಗಾಜು ಪುಡಿ ಪುಡಿಯಾಗಿದೆ. ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ ದೃಶ್ಯವು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಹೊಸಕೋಟೆ ಠಾಣಾ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.






