
ಚಿತ್ರದುರ್ಗದ (Chitradurga) ಶಾಸಕ ವೀರೇಂದ್ರ ಪಪ್ಪಿ (Veerendra pappi) ಗೆ ಜಾರಿ ನಿರ್ದೇಶನಾಲಯ (ED) ಶಾಕ್ ಕೊಟ್ಟಿದೆ. ಅಕ್ರಮ ಆನ್‌ಲೈನ್, ಆಫ್‌ಲೈನ್ ಬೆಟ್ಟಿಂಗ್ ಆ್ಯಪ್‌ಗೆ ಇನ್ಸವೆಸ್ಟ್ ಮಾಡಿದ್ದ ಆರೋಪದಡಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಇ.ಡಿ ಅಧಿಕಾರಿಗಳು ಈಗಾಗಲೇ ಬಂಧಿಸಿದ್ದಾರೆ. ಸಿಕ್ಕಿಂನಲ್ಲಿ ವಶಕ್ಕೆ ಪಡೆದಿದ್ದ ಅಧಿಕಾರಗಳು ವಾರೆಂಟ್ ಪಡೆದು ಕಳೆದ ರಾತ್ರಿ ಶಾಸಕ ವೀರೇಂದ್ರ ಪಪ್ಪಿಯನ್ನು ಬೆಂಗಳೂರಿಗೆ ಕರೆತಂದಿದ್ದಾರೆ.

ಆ ಬಳಿಕ ರಾತ್ರಿ ಮೆಡಿಕಲ್ ಟೆಸ್ಟ್ ಮಾಡಿಸಿ, ಶಾಂತಿನಗರದಲ್ಲಿರುವ ಕಚೇರಿಗೆ ಕರೆದೊಯ್ದಿದ್ದಾರೆ. ಇನ್ನು ಅಕ್ರಮ ಹಣ ವರ್ಗಾವಣೆ ಸಂಬಂಧ ಎರಡು ದಿನಗಳ ಹಿಂದೆ ಇ.ಡಿ ಶಾಸಕರ ನಿವಾಸ, ಕಚೇರಿ ಸೇರಿ 31 ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಈ ವೇಳೆ ಶಾಸಕರ ಮನೆಯಲ್ಲಿ ಬರೋಬ್ಬರಿ 12 ಕೋಟಿ ನಗದು, ಚಿನ್ನಾಭರಣ, 10 ಕೆ.ಜಿ. ಬೆಳ್ಳಿ ಸೇರಿದಂತೆ ಅಪಾರ ಪ್ರಮಾಣ ಅಸ್ತಿ ಪತ್ತೆ ಆಗಿತ್ತು.

ಶಾಸಕ ವೀರೇಂದ್ರ ಪಪ್ಪಿ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವೀರೇಂದ್ರ ಪಪ್ಪಿಯನ್ನ ಇಡಿ ಅಧಿಕಾರಿಗಳು ನ್ಯಾಯಾಧೀಶರ ನಿವಾಸಕ್ಕೆ ಹಾಜರು ಪಡಿಸಲಿದ್ದಾರೆ. ಆ ಬಳಿಕ ತಮ್ಮ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಆದ್ರೆ ಪಪ್ಪಿ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಆನೈನ್ ಗೇಮಿಂಗ್ ಆಪ್ ಗಳಿಗೆ ವೀರೇಂದ್ರ ಪಪ್ಪಿ ಒಡೆತನದ ಕಂಪನಿಗಳಿಂದ ಅಕ್ರಮ ಹಣ ವರ್ಗಾವಣೆ ಆರೋಪದಡಿ ಬೆಂಗಳೂರಲ್ಲಿ ಇಡಿ ECIR ದಾಖಲಿಸಿತ್ತು.