• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸರ್ವಪಕ್ಷ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 9, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ

Share on WhatsAppShare on FacebookShare on Telegram

ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಇನ್ನೂ ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಶನಿವಾರ (ಸೆಪ್ಟೆಂಬರ್‌ 9) ಕಾರ್ಯಕ್ರಮವೊಂದರ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ :

ಜೆಡಿಎಸ್ , ಬಿಜೆಪಿಯ ಬಿ ಟೀಂ ಎಂಬುದು ಸತ್ಯವಾಗುತ್ತಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ನಾನು ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಹೇಳಿದಾಗ ಅವರು ನನ್ನ ಮೇಲೆ ಸಿಟ್ಟಾಗಿದ್ದರು. ಜನತಾ ದಳ ಜಾತ್ಯಾತೀತ ಎಂದು ಹೆಸರಿಟ್ಟುಕೊಂಡಿರುವ ಪಕ್ಷ ಕೋಮುವಾದಿಗಳ ಜೊತೆ ಒಂದಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಯಾವ ಕಾರಣಕ್ಕೂ ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆ ಸೇರಿಕೊಳ್ಳುತ್ತಿರುವುದಾಗಿ ಶಾಸಕ ಜಿ.ಟಿ.ದೇವೇಗೌಡರು ಹೇಳಿರುವುದು, ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ ಎಂದು ತೋರಿಸುತ್ತದೆ. ಅಧಿಕಾರಕ್ಕಾಗಿ ಯಾವುದೇ ಕ್ರಮಕ್ಕೆ ಸಿದ್ಧ ಎಂಬುದನ್ನು ಅವರು ತೋರಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರೈತರ ತೊಂದರೆಯನ್ನು ನೀಗಿಸಲು ವಿದ್ಯುತ್ ಸರಬರಾಜಿಗೆ ಕ್ರಮ

ರೈತರು ವಿದ್ಯುತ್ ಸರಬರಾಜಿನ ವ್ಯತ್ಯಯಕ್ಕಾಗಿ ಹೋರಾಟ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆಗಸ್ಟ್ ತಿಂಗಳಲ್ಲಿ ಸರಿಯಾಗಿ ಮಳೆಯಾಗಿಲ್ಲ, ಬೇಸಿಗೆಯಲ್ಲಿ ಪಂಪಸೆಟ್ ಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು. ಇದರಿಂದ ವಿದ್ಯುತ್ ನ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗಿದೆ. ರೈತರ ತೊಂದರೆಯನ್ನು ನೀಗಿಸಲು, ವಿದ್ಯುತ್ ನ್ನು ಹೊರಗಿನಿಂದ ಖರೀದಿಸಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಜಿ20 ಸಭೆಗೆ ವಿರೋಧಪಕ್ಷದ ನಾಯಕರನ್ನು ಆಹ್ವಾನಿಸದಿರುವುದು ತಪ್ಪು

ನವದೆಹಲಿಯಲ್ಲಿ ನಡೆಯುತ್ತಿರುವ ಜಿ 20 ಸಭೆಗೆ ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವ ಬಗ್ಗೆ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆಯವರು ಅಧಿಕೃತವಾಗಿ ರಾಜ್ಯಸಭೆಯ ವಿರೋಧಪಕ್ಷದ ನಾಯಕರಾಗಿದ್ದು, ಅವರನ್ನು ಜಿ 20 ಸಭೆ ಆಹ್ವಾನಿಸದಿರುವುದು ತಪ್ಪು ಎಂದು ತಿಳಿಸಿದರು.

ಪರಿಹಾರ ಮಾರ್ಗಸೂಚಿ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ :

ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಇದುವರೆಗೆ ಯಾವುದೇ ಉತ್ತರ ಬಂದಿರುವುದಿಲ್ಲ. ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದಲೂ ಸಕಾಲದಲ್ಲಿ ನೆರವು ಬರಬೇಕಿದೆ ಎಂದರು.

ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿಗಳಾಗಬೇಕೆಂದು ಪಕ್ಷದ ಅಭಿಮಾನಿಗಳು ಆಶಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪ್ರಧಾನಿಗಳಾಗಬಹುದು. ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ . ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಿಂದ ನೇರವಾಗಿ ಪ್ರಧಾನಮಂತ್ರಿಗಳಾದರು. ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯಿಲ್ಲ ಎಂದು ತಿಳಿಸಿದರು.

ಕಳಪೆ ಸಮವಸ್ತ್ರ ನೀಡಿದ ವಿರುದ್ಧ ಕ್ರಮ ಕೈಗೊಳ್ಳಲು ತೀರ್ಮಾನ :

ಚುನಾವಣೇ ಸಂದರ್ಭದಲ್ಲಿ ಹಿಜಾಬ್, ಹಲಾಲ್ ಪ್ರಕರಣಗಳು, ಹಿಂದುತ್ವ, ಸನಾತನ ಧರ್ಮದ ಕುರಿತು ಚರ್ಚೆ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಜಾಬ್ ಹಲಾಲ್ ಪ್ರಕರಣಗಳು ನ್ಯಾಯಾಲಯದಲ್ಲಿದೆ., ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.

Tags: All Party DeligationCM SiddaramaiahPM Narendra Modiಪ್ರಧಾನಿ ನರೇಂದ್ರ ಮೋದಿಮುಖ್ಯಮಂತ್ರಿ ಸಿದ್ದರಾಮಯ್ಯಸರ್ವಪಕ್ಷ ನಿಯೋಗ
Previous Post

ಇಂಡಿಯಾ ಮೈತ್ರಿಕೂಟ ಪ್ರಬಲ: ಅರವಿಂದ್‌ ಕೇಜ್ರಿವಾಲ್

Next Post

ಬೆಳಗಾವಿ | ಟೆಲಿಗ್ರಾಂ ಆ್ಯಪ್ ಮೂಲಕ ಮಹಿಳೆಯರಿಗೆ ವಂಚನೆ; 46 ಲಕ್ಷ ಮರಳಿಸಿದ ಪೊಲೀಸರು

Related Posts

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
0

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...

Read moreDetails

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
Next Post
ಬೆಳಗಾವಿ

ಬೆಳಗಾವಿ | ಟೆಲಿಗ್ರಾಂ ಆ್ಯಪ್ ಮೂಲಕ ಮಹಿಳೆಯರಿಗೆ ವಂಚನೆ; 46 ಲಕ್ಷ ಮರಳಿಸಿದ ಪೊಲೀಸರು

Please login to join discussion

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada