ಬಳ್ಳಾರಿ: ನಗರದಲ್ಲಿ ನಡೆದಿದ್ದ ಬ್ಯಾನರ್ ಗಲಾಟೆ ಕಿಚ್ಚು ಆರುವ ಮುನ್ನವೇ ಮತ್ತೊಂದು ಕಿಚ್ಚು ಹೊತ್ತುಕೊಂಡಿದೆ. ಶಾಸಕ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ಸೇರಿದ ಜಿ ಸ್ಕೈರ್ ಲೇಔಟ್ನಲ್ಲಿರುವ ಮಾಡೆಲ್ ಹೌಸ್ನಲ್ಲಿ ನಿನ್ನೆ ಸಂಜೆ ಬೆಂಕಿ ಅವಘಡ ಸಂಭವಿಸಿದ್ದು,, ಕಾಂಗ್ರೆಸ್ನವರೇ ಬೆಂಕಿ ಹಚ್ಚಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದು ಬಳ್ಳಾರಿ ರಾಜಕೀಯ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಿದೆ.
ನಿನ್ನೆ ಸಂಜೆ ಬಳ್ಳಾರಿಯ ಕಂಟೋನ್ಮೆಂಟ್ ಬಳಿ ಇರುವ ಜನಾರ್ದನ್ ರೆಡ್ಡಿ ಒಡೆತನದ ಜಿ ಸ್ಕೈರ್ ಲೇಔಟ್ನ ಮಾಡೆಲ್ ಹೌಸ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ . ಮಾಡೆಲ್ ಹೌಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದು, ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಿ ಸ್ಕೈರ್ ಲೇಔಟ್‌ನಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ದೊಡ್ಡ ವಸತಿ ವಿನ್ಯಾಸ ಮಾಡಲಾಗಿತ್ತು. ಮಾಡೆಲ್ ಹೌಸ್ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಇಬ್ಬರ ಹೆಸರಿನಲ್ಲಿದ್ದು, 13-14 ವರ್ಷಗಳ ಹಿಂದೆ ಕಟ್ಟಿಸಲಾಗಿತ್ತು. ಇಲ್ಲಿ ನಿವೇಶನ ಖರೀದಿಸಲು ಬರುವವರಿಗೆ ಮಾದರಿಯಾಗಿ ತೋರಿಸಲು ಸುಸಜ್ಜಿತವಾದ ‘ಮಾಡೆಲ್ ಹೌಸ್’ ನಿರ್ಮಿಸಲಾಗಿತ್ತು. ಇಂದು ಸಂಜೆ ಸುಮಾರು 6:30ರ ಸುಮಾರಿಗೆ ಈ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಂಡ ತಕ್ಷಣವೇ ಮನೆಯ ಬಹುಪಾಲು ಸುಟ್ಟು ಭಸ್ಮವಾಗಿದೆ. ಈ ಅಗ್ನಿ ಅವಘಡದಿಂದಾಗಿ ಆಸ್ತಿಪಾಸ್ತಿಗೆ ದೊಡ್ಡ ನಷ್ಟ ಸಂಭವಿಸಿದೆ.
ಈ ಘಟನೆ ಬಗ್ಗೆ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಇದು ಆಕಸ್ಮಿಕವಾಗಿ ನಡೆದ ಘಟನೆಯಲ್ಲ. ಕಾಂಗ್ರೆಸ್‌ನವರು ಉದ್ದೇಶಪೂರ್ವಕವಾಗಿ ಮಾಡಿದ ಕೃತ್ಯ’ ಎಂದು ಅವರು ಹೇಳಿದ್ದಾರೆ. ಮೊನ್ನೆ ಬ್ಯಾನರ್ ಗಲಾಟೆ ನಡೆದ ಸಂದರ್ಭದಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದರು. ಅದರ ಮುಂದುವರಿದ ಭಾಗವೇ ಈ ಘಟನೆ ಎಂದು ಅವರು ಆರೋಪಿಸಿದ್ದಾರೆ.
ಇನ್ನು ಈ ಅಗ್ನಿ ಅವಘಡದ ಬಗ್ಗೆ ಶಾಸಕ ಗಾಲಿ ಜನಾರ್ದನರೆಡ್ಡಿ ಪ್ರತಿಕ್ರಿಯಿಸಿದ್ದು, ಬ್ಯಾನರ್ ಗಲಾಟೆಯಾಗಿ ಇನ್ನೂ 15 ದಿನಗಳು ಸಹ ಆಗಿಲ್ಲ. ಆಗಲೇ ಇಂತಹ ಘಟನೆ ನಡೆದಿದೆ ಎಂದು ಕಿಡಿಕಾರಿದ್ದಾರೆ






