ಬೆಂಗಳೂರುಸೆ.21: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಕರ್ನಾಟಕದ ಪ್ರಮುಖ ಜಲಾಶಯಗಳು ಬತ್ತಿ ಹೋಗಿವೆ. ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿ ವೇಳೆಗೆ ಹಗುರ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತುು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.