ನವದೆಹಲಿ : ಲೈಂಗಿಕ ದೌರ್ಜನ್ಯ (sexual assault) ಎಸಗಿದ ಗೂಂಡಾ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ( Brij Bhushan) ಅವರು ಇಂದು ನೂತನ ಸಂಸತ್ತಿನಲ್ಲಿ (Parliament House) ಕುಳಿತಿದ್ದಾರೆ, ಆದ್ರೆ ದೇಶಕ್ಕೆ ಒಲಿಂಪಿಕ್ ಪದಕ (Olympic medals) ತಂದುಕೊಟ್ಟ ಕ್ರೀಡಾ ಪಟುಗಳು (sportsmen) ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಕ್ಷಿ ಮಲಿಕ್ ಅವರು, ಭಾರತೀಯ ಕ್ರೀಡಾ ಇತಿಹಾಸದಲ್ಲಿ ಇದು ‘ದುಃಖದ ದಿನ’ ಎಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.
ಲೈಂಗಿಕ ದೌರ್ಜನ್ಯ (sexual assault) ಎಸಗಿದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಅವರು ( Brij Bhushan) ಇಂದು ಹೊಸ ಸಂಸತ್ತಿನಲ್ಲಿ ಕುಳಿತಿದ್ದಾರೆ. ಆದ್ರೆ ನ್ಯಾಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದ ನಮ್ಮನ್ನು ರಸ್ತೆಯಲ್ಲಿ ಎಳೆದೊಯ್ಯಲಾಗುತ್ತಿದೆ. ಭಾರತೀಯ ಕ್ರೀಡೆಗಳಿಗೆ ಇದು ಅತ್ಯಂತ ದುಃಖದ ದಿನ” ಎಂದು ಸಾಕ್ಷಿ ಮಲಿಕ್ (Sakshi Malik) ಭಾವುಕ ಮಾತುಗಳನ್ನ ಹೇಳಿದ್ದಾರೆ.
ಬಲವಂತವಾಗಿ ಕುಸ್ತಿಪಟುಗಳ ಬಂಧನ
ಮಹಿಳಾ ‘ಮಹಾಪಂಚಾಯತ್’ಗಾಗಿ ಹೊಸ ಸಂಸತ್ ಭವನದ ಕಡೆಗೆ ತೆರಳಲು ಪ್ರಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ತಡೆದ ನಿಲ್ಲಿಸಿದ ಪೊಲೀಸರು ಬಂಧಿಸಿದ್ದಾರೆ. ವಿನೇಶ್ ಫೋಗಟ್ (Vinesh Phogat), ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ (Bajrang Punia) ಅವರನ್ನು ವಶಕ್ಕೆ ಪಡೆದು, ಬಸ್‌ಗಳಲ್ಲಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಯಿತು.