ಬಾಂಗ್ಲಾದೇಶದಲ್ಲಿ (Bangladesh) ಹಿಂದೂಗಳ ಮೇಲಿನ ದೌರ್ಜನ್ಯ ವಿಪರೀತಗೊಂಡಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra modi) ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ (S jaishankar) ನಡುವೆ ಮಹತ್ವದ ಸಭೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಾಂಗ್ಲಾದೇಶದಲ್ಲಿ ಸದ್ಯ ಉದ್ಭವವಾಗಿರುವ ಪ್ರಸ್ತುತ ಪರಿಸ್ಥಿತಿಗೆ ಸಂಬಂಧಿಸಿದಂತೆ ಉಭಯ ನಾಯಕರ ನಡುವೆ ಚರ್ಚೆ ನಡೆದಿದೆ ಎನ್ನಲಾಗಿದ್ದು,ಸಂಸತ್ತಿನಲ್ಲಿ (Session)ಬಾಂಗ್ಲಾದೇಶದ ಬಗ್ಗೆ ಸರ್ಕಾರ ಹೇಳಿಕೆ ನೀಡಬಹುದು ಎಂಬ ನಿರೀಕ್ಷೆಗಳಿದೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ, ಚಿನ್ಮಯ್ ಕೃಷ್ಣ ದಾಸ್ ಪ್ರಭು (Chinami krishna das prabhu) ಬಂಧನದ ನಂತರ ಭಾರತ ಮತ್ತು ಬಾಂಗ್ಲಾದೇಶದ ನಡುವೆ ಪರಿಸ್ಥಿತಿ ಬಿಗಡಾಯಿಸಿದ್ದು, ಭಾರತ ಹಿಂದೂಗಳ ರಕ್ಷಣೆಗೆ ದಿಟ್ಟ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ಕೇಳಿಬಂದಿದೆ.









