ಅಯೋಧ್ಯೆಯಲ್ಲಿ ಶ್ರೀರಾಮಮಂದಿರ (ShriRam Temple) ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಭಕ್ತರೊಬ್ಬರು ತನ್ನ ಭಕ್ತಿ ಪ್ರದರ್ಶಿಸಲು ಪ್ರಧಾನಿ ಮೋದಿಯವರ ದೇವಸ್ಥಾನ ಕಟ್ಟಿಸಿದ್ದಾರೆ. ಪುಣೆಯ ಔಂಧ್ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪ್ರಧಾನಿ ಮೋದಿ ದೇವಾಲಯವನ್ನು ಆಗಸ್ಟ್ 15ರ ಸ್ವಾತಂತ್ರ್ಯೋತ್ಸವದಂದು ಉದ್ಘಾಟಿಸಲಾಗಿದೆ.
‘ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುತ್ತಿರುವ ಪ್ರಧಾನಿ ಮೋದಿಯವರಿಗೆ ಗೌರವ ಸಲ್ಲಿಸಲು ದೇವಸ್ಥಾನ ನಿರ್ಮಿಸಿರುವುದಾಗಿ ಬಿಜೆಪಿ ಕಾರ್ಯಕರ್ತನೂ ಆಗಿರುವ ಮಯೂರ್ ಮುಂಡೆ ಹೇಳಿದ್ದಾರೆ.
6×2.5 x7.5 ಅಡಿ ಅಳತೆಯ ಪ್ರಧಾನಿ ಮೋದಿ ದೇವಸ್ಥಾನವು ಪುಣೆಯ ಔಂದ್ ಪ್ರದೇಶದ ರಸ್ತೆಬದಿ ನಿರ್ಮಿಸಲಾಗಿದೆ. ಈ ದೇವಸ್ಥಾನದ ಫೋಟೋಗಳನ್ನು ಪತ್ರಕರ್ತ ಅಲಿಶೇಖ್ ಎಂಬುವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಸೋಷಿಯಲ್ ಮೀಡಿಯಾ(Social Media)ದಲ್ಲಿ ಸಖತ್ ವೈರಲ್ ಆಗುತ್ತಿವೆ. ‘ಪುಣೆಯ ಬಿಜೆಪಿ ಕಾರ್ಯಕರ್ತ ಪತ್ರಕರ್ತ ಅಲಿ ಶೇಖ್ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ಮಯೂರ್ ಮುಂಡೆ ಔದ್ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಗುಲವನ್ನು ನಿರ್ಮಿಸಿದ್ದಾರೆ. ಪ್ರತಿಮೆ ಸ್ಥಾಪನೆಗೆ ಒಟ್ಟು 1.5 ಲಕ್ಷ ರೂಪಾಯಿ ಖರ್ಚಾಗಿದೆ. ಸಂಪೂರ್ಣ ಕೆಲಸ ಪೂರ್ಣಗೊಳ್ಳಲು 6 ತಿಂಗಳು ಬೇಕಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನ 370ನೇ ವಿಧಿ ರದ್ದತಿ ಸೇರಿದಂತೆ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದ ಪ್ರಧಾನಿ ಮೋದಿ ಅವರಿಗೆ ದೇಗುಲ ಇರಬೇಕು ಎಂದು ಭಾವಿಸಿದೆ. ದೇಗುಲವನ್ನು ನನ್ನ ಸ್ವಂತ ಜಾಗದಲ್ಲಿ ನಿರ್ಮಿಸಬೇಕು ಎಂಬ ಆಸೆ ಹೊಂದಿದ್ದೆ ಎಂದು ಉದ್ಯಮಿಯೂ ಆಗಿರುವ ಮಯೂರ್ ಮುಂಡೆ ಹೇಳಿದ್ದಾರೆ.
ವಿಶೇಷವಾಗಿ ಜೈಪುರದಿಂದ ಕೆಂಪು ಮಾರ್ಬಲ್ ತರಿಸಿ ಮೋದಿಯವರ ಪ್ರತಿಮೆ ನಿರ್ಮಿಸಲಾಗಿದೆ. ಒಟ್ಟು 1.6 ಲಕ್ಷ ರೂಪಾಯಿ ಖರ್ಚಾಗಿದೆ. ಪ್ರತಿಮೆ ಸ್ಥಾಪನೆಯ ಪಕ್ಕದಲ್ಲಿಯೇ ಮೋದಿಯವರ ಕುರಿತಾಗಿ ಕವಿತೆಯನ್ನು ಬರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.