• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ನಮ್ಮನ್ನು ಟೀಕೆ ಮಾಡದಿದ್ದರೆ ಕುಮಾರಸ್ವಾಮಿ ರಾಜಕೀಯವಾಗಿ ಬದುಕಲು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

ಪ್ರತಿಧ್ವನಿ by ಪ್ರತಿಧ್ವನಿ
May 15, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ
0
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ
Share on WhatsAppShare on FacebookShare on Telegram

ಬೆಂಗಳೂರು : ಕುಮಾರಸ್ವಾಮಿಗೆ ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್‌ ನೀಡಿದ್ದಾರೆ.

ADVERTISEMENT
Actor R Abhilash : ಆಕಾಶ ಕೆಳಗಾಗಲಿ, ಭೂಮಿ ಮೇಲಾಗಲಿ ಕಾರ್ಯಕ್ರಮ ಮಾಡೇ ಮಾಡ್ತೀವಿ.. #pratidhvani #belagavinews

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ಕುಮಾರಸ್ವಾಮಿ ಅವರು ಮಾಡಿದ ಯೋಜನೆಯನ್ನೇ ನಾವು ಮುಂದುವರೆಸುತ್ತಾ ಇರುವುದು. ನಾನು ರೈತರ ಬಳಿ ಮಾತನಾಡಲು ಸಮಯ, ದಿನಾಂಕ ನಿಗದಿ ಮಾಡಿಕೊಂಡು ಹೋಗುತ್ತೇನೆ. ರೈತರು ನನಗೆ ಎರಡೇಟು ಹೊಡೆಯಬಹುದು, ಅಷ್ಟೇ ತಾನೇ..? ಬಟ್ಟೆ ಹರಿಯಬಹುದು, ಕಲ್ಲೆಸೆಬಹುದು, ಧಿಕ್ಕಾರ ಹಾಕಬಹುದು. ಅದಕ್ಕೆಲ್ಲಾ ಹೆದರಿಕೊಳ್ಳಲು ಆಗುತ್ತದೆಯೇ? ಮುಂದೆ ಅವರ ಭವಿಷ್ಯ, ಮಕ್ಕಳ ಹಾಗೂ ಆಸ್ತಿಗಳ ಭವಿಷ್ಯ ಮುಖ್ಯ. ಇವತ್ತಲ್ಲ ಮುಂದಿನ 20 ವರ್ಷಗಳ ನಂತರ ಬಿಡದಿ, ಬೆಂಗಳೂರು ದಕ್ಷಿಣದ ಜನರು ನನ್ನನ್ನು ನೆನಪಿಸಿಕೊಳ್ಳುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಕುಮಾರಸ್ವಾಮಿ ಅವರೇ ಈ ಯೋಜನೆಯ ಭೂಮಿಯನ್ನು ಡಿನೊಟಿಫೈ ಮಾಡಬಹುದಿತ್ತಲ್ಲವೇ? ಯಾಕೆ ಮಾಡಲಿಲ್ಲ? ನಾನು ಡಿನೋಟಿಫೈ ಮಾಡಲು ತಯಾರಿಲ್ಲ. ಅವರು ಡಿನೋಟಿಫೈ ಮಾಡಿ ಎಷ್ಟು ಅನುಭವಿಸುತ್ತಿದ್ದಾರೆ ಎಂದು ಅವರಿಗೆ ಗೊತ್ತು‌. ಯಡಿಯೂರಪ್ಪ ಅವರಿಗೆ, ನನಗೂ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ಕೇಂದ್ರ ಸರ್ಕಾರ ದೇಶಾದ್ಯಂತ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಬೆಲೆ ಏರಿಕೆ ಮೋದಿ ಕೊಡುಗೆ. ಪ್ರಧಾನಿ ಬೇರೆ ರಾಷ್ಟ್ರಗಳ ಜೊತೆ ಉತ್ತಮ ಸಂಬಂಧ ಉಳಿಸಿಕೊಂಡು ಬಂದಿಲ್ಲ. ಅಂತರರಾಷ್ಟ್ರೀಯ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಮೋದಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅದಕ್ಕೆ ಅವರು ವಿದ್ಯುತ್ ಉಳಿಸಿ, ಪೆಟ್ರೋಲ್ ಬಳಸಬೇಡಿ ಎಂದು ಹೇಳುತ್ತಿದ್ದಾರೆ. ಇಂಧನಗಳನ್ನು ಬಳಸದೇ ದಿನನಿತ್ಯ ಜೀವನ ಮಾಡುವುದು ಹೇಗೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅನೇಕರು ತಮ್ಮ ಬೆಂಗಾವಲು ಪಡೆ ವಾಹನಗಳನ್ನು ಕಡಿತ ಮಾಡಿದ್ದಾರೆ. ಇದು ಆಗಬಹುದು. ಆದರೆ ಜನ ಸಾಮಾನ್ಯ ಓಡಾಟ ಮಾಡದೇ ಇರಲು ಹೇಗೆ ಸಾಧ್ಯ. ಬದುಕಿಗಾಗಿ ಪ್ರಯಾಣ ಮಾಡಬೇಕಲ್ಲವೇ? ಚಿನ್ನ‌ ಖರೀದಿ ಮಾಡಬೇಡಿ ಎಂದಿದ್ದಾರೆ ಇದು ಹೇಗೆ ಸಾಧ್ಯ. ವಿವಾಹಿತ ಮಹಿಳೆಯರಿಗೆ ಮಾಂಗಲ್ಯ ಸರ ಬೇಕು.‌ ಹೀಗಿದ್ದಾಗ ಚಿನ್ನ ಕೊಂಡುಕೊಳ್ಳಬೇಡಿ ಎಂಬುದು ಹೇಗೆ ಸಾಧ್ಯ? ದೇಶ ದೊಡ್ಡ ದುರಂತದ ಸ್ಥಿತಿಗೆ ಬಂದಿದೆ. ಅಡುಗೆ ಎಣ್ಣೆ ಬಳಸಬೇಡಿ ಎಂದರೆ ಎಲ್ಲಿ ಕಡಿಮೆ ಮಾಡೋಕೆ ಆಗುತ್ತದೆ. ಇದೆಲ್ಲಾ ಮಾಡೋಕೆ ಆಗಲ್ಲ. ಜನ ಸಂಪಾದನೆ ಮಾಡುತ್ತಾರೆ ಬದುಕುತ್ತಾರೆ. ಯಾರನ್ನೂ ನಿಯಂತ್ರಣ ಮಾಡೋಕೆ ಆಗಲ್ಲ ಎಂದು ಡಿಕೆ ಶಿವಕುಮಾರ್‌ ಕಿಡಿಕಾರಿದ್ದಾರೆ.

ಸತೀಶನ್‌ ಜನರ ಆಶೋತ್ತರಗಳಿಗೆ ಕೆಲಸ ಮಾಡುತ್ತಾರೆ..

ಕೇರಳಕ್ಕೆ ನೂತನ ಸಿಎಂ ಆಯ್ಕೆಗೆ ಪ್ರತಿಕ್ರಿಯಿಸಿ, ನಾನು ಶುಭಾಶಯ ಕೋರುತ್ತೇನೆ. ಪಕ್ಷದಲ್ಲಿ ಅರ್ಹತೆ ಇರುವ ಅನೇಕ ಹಿರಿಯ ನಾಯಕರು ಇದ್ದಾರೆ‌. ಪಕ್ಷದ ಹೈಕಮಾಂಡ್ ಸತೀಶನ್ ಅವರಿಗೆ ಅವಕಾಶ ನೀಡಿದೆ. ಅವರಿಗೆ ನಾನು ಮನಃಪೂರ್ವಕವಾಗಿ ಶುಭ ಕೋರುತ್ತೇನೆ. ಎಲ್ಲಾ ಮೈತ್ರಿ ಪಕ್ಷಗಳಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ಜನರ ಆಶೋತ್ತರಗಳಿಗೆ ಅನುಗುಣವಾಗಿ ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Dr G Parameshwar On Fuel Price : ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಸಿ ಕೇಂದ್ರ ಜನ ವಿರೋಧಿಯಾಗಿದೆ #pratidhvani

ಎಸ್ ಐ ಆರ್ ಕರ್ನಾಟಕಕ್ಕೆ ಕಾಲಿಡುತ್ತಿದೆ ನಮಗೂ ಇದರ ಬಗ್ಗೆ ಅರಿವಿದೆ. ಪಕ್ಷದ ನಾಯಕರಿಗೆ ಇದರ ಬಗ್ಗೆ ತಿಳುವಳಿಕೆ ಮೂಡಿಸಲಾಗಿದೆ. ಎಲ್ಲಾ ಪಕ್ಷಗಳು ಈ ಕೆಲಸ ಮಾಡುತ್ತಿವೆ. ಬಿಜೆಪಿ, ಜನತಾದಳ ಎಲ್ಲರೂ ಅವರವರ ಮತಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಜನಸಾಮಾನ್ಯರು ಸಂಪಾದಿಸಿದ ಆಸ್ತಿಗಳಿಗೆ ಸರಿಯಾದ ರೀತಿಯಲ್ಲಿ ದಾಖಲೆಗಳನ್ನು ಒದಗಿಸಿಕೊಡಬೇಕು ಎಂದು ನಾವು ಆರನೇ ಗ್ಯಾರಂಟಿಯಾಗಿ “ಭೂಮಿ ಗ್ಯಾರಂಟಿ”ಯನ್ನು ಜಾರಿಗೆ ತಂದಿದ್ದೇವೆ. ಜನರ ಮನೆ ಬಾಗಿಲಿಗೆ ಇ ಖಾತೆಗಳನ್ನು ತಲುಪಿಸುವ ವ್ಯವಸ್ಥೆ ಮಾಡಿದ್ದೇವೆ‌. ಬಿ ಯಿಂದ ಎ ಖಾತೆ ಬದಲಾವಣೆ ಮಾಡಿಕೊಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ನಾನೇ ಅನೇಕ ಬ್ಯಾನರ್ ಗಳನ್ನು ಹೇಳಿ ತೆಗಿಸಿದ್ದೇನೆ..

“ನಾನೇ ಬ್ಯಾನರ್ ಹಾಕಬೇಡಿ ಕೇಸ್ ಹಾಕಲಾಗುವುದು ಅಂತ ಹೇಳಿದ್ದೆ. ಆದರೂ ಅಭಿಮಾನದಿಂದ ಹಾಕಿಸಿದ್ದಾರೆ. ನಾನೇ ಹಲವರಿಗೆ ಹೇಳಿ ಬ್ಯಾನರ್ ಗಳನ್ನು ತೆಗಿಸಿದ್ದೇನೆ. 50 ರಷ್ಟು ಬ್ಯಾನರ್ ಗಳು ತೆರವುಗೊಳಿಸಲಾಗಿದೆ. ಹಾಕಿರೋದು ತಪ್ಪು. ಕಾರ್ಪೋರೇಷನ್ ಅವರಿಗೂ ಕೂಡಲೇ ತೆಗೆಯಬೇಕು ಎಂದು ಸೂಚಿಸಿದ್ದೇನೆ. ಬಿಜೆಪಿ ಲೀಡರ್ ಗಳು ಸಹ ಅವರ ನಾಯಕರುಗಳು ಬರುವುದನ್ನು ಬ್ಯಾನರ್ ಹಾಕಿದ್ದಾರೆ ಅವನ್ನು ಸಹ ತೆಗೆಯಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಎಷ್ಟೇ ಕಠಿಣ ನಿಯಮ ತಂದರೂ ಇದನ್ನು ತಡೆಯಲು ಆಗುತ್ತಿಲ್ಲ. ಇದು ಸರಿಯಲ್ಲ. ದಯವಿಟ್ಟು ಬೆಂಗಳೂರು ನಗರವನ್ನು ಸ್ವಚ್ಛವಾಗಿಡಬೇಕು.‌ ನಗರ ವ್ಯಾಪ್ತಿ ಬಿಟ್ಟು ಹಳ್ಳಿ ಭಾಗದಲ್ಲಿ ಹಾಕಿಕೊಂಡರೆ ಬೇಡ ಎನ್ನಲ್ಲ. ಆದರೆ ನಗರ ಭಾಗದಲ್ಲಿ ಬೇಡ. ನಾನು ಹುಟ್ಟುಹಬ್ಬದ ಸಂಭ್ರಮಾಚರಣೆ ಬೇಡ ಎಂದಿದ್ದೆ. ಕಳೆದ ರಾತ್ರಿ ಅಭಿಮಾನಿಗಳು, ಕಾರ್ಯಕರ್ತರು, ನಾಯಕರು ಹಾಗೂ ಸಚಿವರು ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಲು ಕಾಯುತ್ತಿದ್ದರು. ಅವರ ಪ್ರೀತಿ ವಿಶ್ವಾಸ, ಆಶೀರ್ವಾದ ಬೇಡ ಎನ್ನಲು ಆಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಬರ್ತ್‌ಡೇ ಆಚರಣೆಯ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ.

Tags: Birth Day Celebrationcongress karnatakaDCM DK Shivakumardiesel price hikeFuel price hikeGovernment of IndiaKarnataka GovernmentLand GuaranteeMiddle east Conflictspetrol price hikeSave Fuel
Previous Post

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada