ಮೋದಿಯನ್ನು ಅಧಿಕಾರದಿಂದ ತೆಗೆದುಹಾಕಬೇಕಾಗಿದೆ ಇದೇ ನನ್ನ ಗುರಿ: ಮಮತಾ ಬ್ಯಾನರ್ಜಿ

ತೃಣಮೂಲ ಕಾಂಗ್ರೆಸ್ ಅಧ್ಯಕ್ಷರು ರಾಷ್ಟ್ರೀಯ ರಾಜಕಾರಣದಲ್ಲಿ ಯಾವ ಪಾತ್ರವನ್ನು ವಹಿಸಬೇಕೆಂದು ಪತ್ರಕರ್ತರು ಪ್ರಶ್ನೆಗೆ ಉತ್ತರಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ “ತಮ್ಮ ಮುಂದಿನ ರಾಜಕೀಯ ನಡೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅಧಿಕಾರದಿಂದ ತೆಗೆದುಹಾಕುವುದು” ಎಂದು ಹೇಳಿದರು.

ತೃಣಮೂಲ ಕಾಂಗ್ರೆಸ್ ಬಿಜೆಪಿಯನ್ನು ಸೋಲಿಸಿ ಅಧಿಕಾರವನ್ನು ಉಳಿಸಿಕೊಂಡ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರ, ರಾಷ್ಟ್ರೀಯ ರಾಜಕಾರಣದಲ್ಲಿ ಅವರು ಯಾವ ಪಾತ್ರವನ್ನು ವಹಿಸಲಿದ್ದಾರೆ ಎಂಬ ಪ್ರಶ್ನೆಗಳು ಈ ಮಾತನ್ನು ಹೇಳಿದ್ದಾರೆ.

ಕೃಷಿ ಮುಖಂಡರ ಭೇಟಿ

ರೈತ ಮುಖಂಡ ರಾಕೇಶ್ ಸಿಂಗ್ ಟಿಕಾಯಿತ್ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಜೂನ್ 9 ರಂದು ಕೋಲ್ಕತ್ತಾದ ರಾಜ್ಯ ಸಚಿವಾಲಯದಲ್ಲಿ ಭೇಟಿಯಾಗಿ ರೈತ ವಿರೋಧಿ ಕಾನೂನುಗಳ ಮತ್ತು ಹೋರಾಟದ ಬಗ್ಗೆ ಚರ್ಚೆ ಮಾಡಿದ್ದಾರೆ

ರಾಕೇಶ್ ಟಿಕೈಟ್ ಸೇರಿದಂತೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮುಖಂಡರನ್ನು ರಾಜ್ಯ ಸಚಿವಾಲಯದಲ್ಲಿ ಮಮತ ಬ್ಯಾನರ್ಜಿ ಭೇಟಿಯಾದ್ದಾರೆ. ಮೂರು ಕೇಂದ್ರ ಕೃಷಿ ಮಸೂದೆಗಳ ವಿರುದ್ಧ ಪ್ರತಿಭಟಿಸಿದ ರೈತ ಸಂಘಕ್ಕೆ ಬೆಂಬಲ ನೀಡಿದ್ದು ಈ ಕುರಿತು ರೈತರನ್ನು ಬೆಂಬಲಿಸುವಂತೆ ವಿರೋಧ ಪಕ್ಷದ ಆಡಳಿತದ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ಬ್ಯಾನರ್ಜಿ, “ನಾವು ರೈತ ಪ್ರತಿಭಟನೆಯನ್ನು ಮತ್ತು ರೈತರಗೆ ಮೊದಲಿನಿಂದಲೂ ಬೆಂಬಲ ನೀಡುತ್ತಿದ್ದೇವೆ. ನಾವು ಮಸೂದೆಗಳ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿದ್ದೇವೆ ” ಮತ್ತು ಪಶ್ಚಿಮ ಬಂಗಾಳವನ್ನು ರೈತರಿಗೆ ಮಾದರಿ ರಾಜ್ಯವನ್ನಾಗಿ ಮಾಡಲು ಪ್ರಯತ್ನಿಸಬೇಕು ಎಂದು ಹೇಳಿದ್ದಾರೆ.

COVID-19 ಪರಿಸ್ಥಿತಿ ಸುಧಾರಿಸಿದ ನಂತರ ದೆಹಲಿಗೆ ಭೇಟಿ ನೀಡುವಂತೆ ಕೃಷಿ ಮುಖಂಡರು ಮನವಿ

ಈ ವಿಷಯದ ಬಗ್ಗೆ ವಿರೋಧ ಪಕ್ಷದ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲು ಅವರು ಈ ಉಪಕ್ರಮವನ್ನು ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಮಮತ ಹೇಳಿದ್ದಾರೆ. ಕಳೆದ ಏಳು ತಿಂಗಳಿಂದ ಪ್ರತಿಭಟನಾ ನಿರತ ರೈತರೊಂದಿಗೆ ಕೇಂದ್ರ ಏಕೆ ಮಾತುಕತೆ ನಡೆಸುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಸಾಂಪ್ರದಾಯಿಕ ಕೃಷಿಯನ್ನು ಕಾರ್ಪೊರೇಟ್‌ಗಳಿಗೆ ಹಸ್ತಾಂತರಿಸಲು ಕೇಂದ್ರವು ಪ್ರಯತ್ನಿಸುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ ಮುಖಂಡ ಯಶ್ವಂತ್ ಸಿನ್ಹಾ ಹೇಳಿದರು. “ಸಾಂಪ್ರದಾಯಿಕ ಕೃಷಿಯನ್ನು ಕಿತ್ತುಹಾಕಿದರೆ, ಭಾರತವು ಭಾರತವಾಗಿ ಉಳಿಯುವುದಿಲ್ಲ ಎಂದು ಹೇಳಿದ್ದಾರೆ.”

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...