2023ರ ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರ್ತಿದ್ದಂತೆ ರಾಜಕೀಯ ನಾಯಕರ ನಡುವೆ ವಾಕ್ ಸಮರ ಶುರುವಾಗಿದೆ. ಪ್ರತಿನಿತ್ಯ ಒಬ್ಬರಲ್ಲ ಒಬ್ಬರು ವಿರೋಧ ಪಕ್ಷಗಳ ನಾಯಕರ, ಮುಖಂಡರ ಮೇಲೆ ವಾಗ್ದಾಳಿ ನಡೆಸುತ್ತಿದ್ದಾರೆ. ಇದೀಗ ಎಐಸಿಸಿ ಅಧ್ಯಕ್ಷ ಪ್ರಧಾನಿ ನರೇಂದ್ರ ಮೋದಿ ಮೇಲೆ ಹರಿಹಾಯ್ದಿದ್ದಾರೆ. ʻಪ್ರಧಾನಿ ಮೋದಿ(Narendra Modi) ವಿಷ ಸರ್ಪ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಕಿಡಿಕಾರಿದ್ದಾರೆ. ʻಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ್ ಪರ ಮತಯಾಚನೆ ಮಾಡ್ತಿರೋ ವೇಳೆ ಮಲ್ಲಿಕಾರ್ಜುನ ಖರ್ಗೆ, ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಭಾಷಣ ಮಾಡಿದ್ರು.
ಈ ವೇಳೆ ಪ್ರಧಾನಿ ಮೋದಿಯನ್ನು ವಿಷದ ಸರ್ಪಕ್ಕೆ ಹೋಲಿಸಿದ್ದಾರೆ. ನಿಮ್ಮ ಮನೆಯಲ್ಲಿ ದೇಶಕ್ಕಾಗಿ ಒಂದೂ ನಾಯಿ ಕೂಡ ಸತ್ತಿಲ್ಲ. ದೇಶಕ್ಕೆ ಬಿಜೆಪಿಯವರ ಕೊಡಿಗೆ ಏನು ಅಂತಾ ಹೇಳಲಿ ಎಂದು ಖರ್ಗೆ ಪ್ರಶ್ನಿಸಿದ್ರು. ಉಚಿತ ಅಕ್ಕಿ ಕೊಡುವ ಕೆಲಸ ಮಾಡಿದ್ದು ಸೋನಿಯಾ ಗಾಂಧಿ. ನರೇಗಾ ಮಾಡಿದ್ದು ನಾವು. ರಾಜ್ಯದಲ್ಲಿ ಬಿಜೆಪಿ ಮಾಡಿದ ಸಾಧನೆ ಅಂದ್ರೆ 40% ಕಮಿಷನ್. ಇಂತಹವರನ್ನು ಮೋದಿ ತನ್ನ ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಒಬ್ಬ ಪ್ರಧಾನಿಯಾಗಿ ಹಳ್ಳಿ, ತಾಲೂಕಿಗೆ ಬಂದು ಓಡಾಡುತ್ತಿದ್ದಾರೆ. ಮೋದಿ ಮುಖ ನೋಡಿ ಮತ ಹಾಕಿ ಅಂತೀರಾ. ನೀವು ರಾಜ್ಯದ ಮುಖ್ಯಮಂತ್ರಿ ಆಗ್ತೀರಾ, ಮುನ್ಸಿಪಾಲ್ಟಿ, ಮೇಯರ್, ಸಿಎಂ, ಪ್ರಧಾನಿ ಎಲ್ಲವೂ ನೀವೇ ಆಗ್ತೀರಾ. ಆಸೆ ಬುರುಕ ಮೋದಿ ಅಂತ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ರು.