ಇತ್ತೀಚೆಗಷ್ಟೇ ಮೈಸೂರು (mysuru), ಮಂಗಳೂರಲ್ಲಿ (mangalore) ಕಹಳೆ ಮೊಳಗಿಸಿದ್ದ ಪ್ರಧಾನಿ ಮೋದಿ (Pm modi) ಮತ್ತೆ ರಾಜ್ಯಕ್ಕೆ ಆಗಮಿಸ್ತಿದ್ದಾರೆ. ಈ ಬಾರಿ ಬೆಂಗಳೂರಿನ ಕ್ಷೇತ್ರಗಳನ್ನೇ ಟಾರ್ಗೆಟ್ ಮಾಡಿರುವ ನಮೋ ಮತಬೇಟೆಗೆ ನಡೆಸಲಿದ್ದಾರೆ. ರಾಜಧಾನಿ ಜನರ ರೆಸ್ಪಾನ್ಸ್ ಹೇಗಿರಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಇಂದು ಮಧ್ಯಾಹ್ನದ ಬಳಿಕ ರಾಜ್ಯಕ್ಕೆ ಮೋದಿ ಆಗಮಿಸಲಿದ್ದಾರೆ. ಮೊದಲಿಗೆ ಚಿಕ್ಕಬಳ್ಳಾಪುರದಲ್ಲಿ (chikkaballapura) ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ (Dr.k.sudhakar) ಪರ ಪ್ರಚಾರ ಮಾಡಲಿದ್ದಾರೆ. ಮಧ್ಯಾಹ್ನ 3.45 ರಿಂದ 4.25ರವರೆಗೆ ಚಿಕ್ಕಬಳ್ಳಾಪುರದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಮೋದಿ (modi) ಭಾಗಿಯಾಗಲಿದ್ದಾರೆ.

ನಂತರ ಸಂಜೆ 5.30 ರಿಂದ 6.10 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ (palace ground) ಬೃಹತ್ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಬೆಂಗಳೂರು ಕೇಂದ್ರ (bangalore central), ಉತ್ತರ (north), ದಕ್ಷಿಣ (south) ಕ್ಷೇತ್ರಗಳನ್ನ ಗಮನದಲ್ಲಿಟ್ಟುಕೊಂಡು ಮತಬೇಟೆ ನಡೆಸಲಿದ್ದಾರೆ. ಶೋಭಾ ಕರಂದ್ಲಾಜೆ, ಪಿ.ಸಿ ಮೋಹನ್, ತೇಜಸ್ವಿ ಸೂರ್ಯ ಪರ ಮೋದಿ ಪ್ರಚಾರದ ಬ್ಯಾಟಿಂಗ್ ಮಾಡಲಿದ್ದಾರೆ.