“ತಾಯಿ ಮತ್ತು ಮಗನ ನಡುವಿನ ಪ್ರೀತಿ ಅನಂತ ಮತ್ತು ಅಮೂಲ್ಯವಾದುದು” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರ ತಾಯಿ ಹೀರಾ ಬೆನ್ ಅಹ್ಮಾದಾಬಾದ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿ, “ತಾಯಿ ಮತ್ತು ಮಗನ ನಡುವಿನ ಪ್ರೀತಿ ಅನಂತ ಮತ್ತು ಅಮೂಲ್ಯವಾದುದು. ಮೋದಿಜೀ, ಈ ಕಷ್ಟದ ಸಮಯದಲ್ಲಿ ನನ್ನ ಪ್ರೀತಿ ಮತ್ತು ಬೆಂಬಲ ನಿಮ್ಮೊಂದಿಗಿದೆ. ನಿಮ್ಮ ತಾಯಿ ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಹೀರಾ ಬೆನ್ ಅವರ ಆರೋಗ್ಯದ ಕುರಿತಂತೆ ಆಸ್ಪತ್ರೆಯು ಇತ್ತೀಚಿನ ವರದಿಯನ್ನು ಬಿಡುಗಡೆ ಮಾಡಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದೆ.




