ಬರ ವಿಷಯವಾಗಿ ಕೇಂದ್ರದ ನಾಯಕರನ್ನು ಭೇಟಿಯಾಗಿ ವಾಪಸ್ ಬೆಂಗಳೂರಿಗೆ ಸಚಿವ ಜಮೀರ್ ಖಾನ್ ಜೊತೆ ಐಷಾರಾಮಿ ಜೆಟ್‌ನಲ್ಲಿ ಪ್ರಯಾಣಿಸಿದ ಕುರಿತು ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಯಾವ ಫ್ಲೈಟ್ನಲ್ಲಿ ಓಡಾಡುತ್ತಾರೆ?. ಅವರದು ಐಷಾರಾಮಿ ಫ್ಲೈಟ್ ಅಲ್ಲವೇ?, ದೇಶದಲ್ಲಿ ಯಾವುದೇ ಪರಿಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂಥದ್ದು? ಎಂದು ಮೊದಲು ಬಿಜೆಪಿಯವರಿಗೆ ಕೇಳಿ ಎಂದರು.
ಇಂದಿನಿಂದ ಎರಡು ದಿನಗಳ ಮೈಸೂರು ಜಿಲ್ಲಾ ಪ್ರವಾಸಕ್ಕಾಗಿ ಆಗಮಿಸಿದ ಸಿಎಂ, ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ಇದೇ ವೇಳೆ ಕೋವಿಡ್ ನಿರ್ಬಂಧಗಳ ವಿಚಾರವಾಗಿ ಮಾತನಾಡಿದ ಸಿಎಂ, ಪ್ರಕರಣಗಳ ಹೆಚ್ಚಳದಿಂದ ರಾಜ್ಯದಲ್ಲಿ ಪ್ರವಾಸಿ ತಾಣಗಳನ್ನು ಬಂದ್ ಮಾಡುವ ಪರಿಸ್ಥಿತಿ ಸದ್ಯಕ್ಕಿಲ್ಲ. ಆದರೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಮೈಸೂರಿನಲ್ಲಿ ನಿನ್ನೆ ಆರು ಜನರಿಗೆ ಕೊವಿಡ್ ಪಾಸಿಟಿವ್ ಬಂದಿದೆ. ಅವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇರಲಿಲ್ಲ. ಅವರು ಬೇರೆ ಬೇರೆ ರೋಗಗಳ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಕಾಣಿಸಿಕೊಂಡಿದೆ. ಅದಕ್ಕೆ ಯಾವುದೇ ರೀತಿಯ ಭಯ ಬೇಡ. ಎಲ್ಲರೂ ಕೋವಿಡ್ ನಿಯಮಗಳನ್ನು ಪಾಲಿಸಿ, ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.