ಪ್ರಧಾನಿ ನರೇಂದ್ರ ಮೋದಿ (Pm narendra modi) ನಿನ್ನೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುರೊಂದಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹಮಾಸ್‌ನಿಂದ (Hamas) ಇಸ್ರೇಲಿ ಪ್ರಜೆಗಳನ್ನು ಅಪಹರಿಸುವುದರೊಂದಿಗೆ, ಪಶ್ಚಿಮ ಏಷ್ಯಾದಲ್ಲಿ ಪ್ರಾರಂಭವಾದ ಸಂಘರ್ಷ ಉಲ್ಬಣಗೊಳ್ಳುತ್ತಿದೆ.
ಹೀಗಾಗಿ ಪ್ರಧಾನಿ ಮೋದಿ, ಬೆಂಜಮಿನ್ ನೆತನ್ಯಾಹುರೊಂದಿಗೆ ಇತ್ತೀಚಿನ ಯುದ್ಧ ತೀವ್ರತೆಯ ಬಗ್ಗೆ ವಿಶ್ವದಲ್ಲಿ ಉಲ್ಬಣಿಸಿರುವ ಆತಂಕದ ಬಗ್ಗೆ ಮಾತನಾಡಿದ್ದಾರೆ.
ಇನ್ನು ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ (Terrorism) ಯಾವುದೇ ಸ್ಥಳವಿಲ್ಲ. ಪ್ರಾದೇಶಿಕ ಉಲ್ಬಣವನ್ನು ತಡೆಗಟ್ಟುವುದು ಮತ್ತು ಎಲ್ಲಾ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಯನ್ನು ಖಚಿತಪಡಿಸುವುದು ನಿರ್ಣಾಯಕವಾಗಿದೆ ಎಂದು ಮೋದಿ ಟ್ವಿಟ್ ಮಾಡಿದ್ದಾರೆ.