ದೆಹಲಿ : 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮೋದಿ ಉಪನಾಮದ ವಿರುದ್ಧ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ. ನಿನ್ನೆ ಸೂರತ್ನ ನ್ಯಾಯಾಲಯವು ಕೇರಳದ ವಯನಾಡ್ ಸಂಸದ ರಾಹುಲ್ ಗಾಂಧಿಯನ್ನು ಈ ಪ್ರಕರಣದಲ್ಲಿ ದೋಷಿ ಎಂದು ಪರಿಗಣಿಸಿ 2 ವರ್ಷಗಳ ಜೈಲು ಶಿಕ್ಷೆಯನ್ನು ನೀಡಿತ್ತು.

2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಕೋಲಾರದಲ್ಲಿ ರಾಹುಲ್ ಗಾಂಧಿ ಎಲ್ಲಾ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮವನ್ನೇ ಏಕೆ ಇಟ್ಟುಕೊಳ್ಳುತ್ತಾರೆ ಎಂದು ಪ್ರಶ್ನಿಸಿದ್ದರು. ಈ ಸಂಬಂಧ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಪೂರ್ಣೇಶ್ ಮೋದಿ ಎಂಬವರು ಮೊಕದ್ದಮೆ ದಾಖಲಿಸಿದ್ದರು .
ಈ ಪ್ರಕರಣ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಸೂರತ್ನ ನ್ಯಾಯಾಲಯವು ಭಾರತೀಯ ದಂಡ ಸಂಹಿತೆ 504ರ ಅಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದಾದ ಬಳಿಕ ಇದೀಗ ರಾಹುಲ್ ಗಾಂಧಿಯ ಲೋಕಸಭಾ ಸದಸ್ಯತ್ವವನ್ನೂ ಅನರ್ಹಗೊಳಿಸಿರೋದು ಕಾಂಗ್ರೆಸ್ಗೆ ಹಾಗೂ ರಾಹುಲ್ ಗಾಂಧಿಗೆ ಭಾರೀ ಮುಖಭಂಗವನ್ನುಂಟು ಮಾಡಿದೆ.