ಗುಜರಾತ್ : ಮೋದಿ ಉಪನಾಮ ಪ್ರಕರಣದಲ್ಲಿ ಸೂರತ್ ನ್ಯಾಯಾಲಯದಿಂದ ದೋಷಿ ಎನಿಸಿಕೊಂಡಿರುವ ರಾಹುಲ್ ಗಾಂಧಿಗೆ 2 ವರ್ಷಗಳ ಶಿಕ್ಷೆಯ ಜೊತೆ ಜಾಮೀನನ್ನೂ ನೀಡಲಾಗಿದೆ. ಆದರೆ ಈ ಪ್ರಕರಣದಲ್ಲಿ ಸೂರತ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಮೋದಿ ಉಪನಾಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವು 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ಇದು ಮಾತ್ರವಲ್ಲದೇ ರಾಹುಲ್ ಗಾಂಧಿ ಕೇರಳದ ವಯನಾಡ್ ಸಂಸದ ಸ್ಥಾನವನ್ನೂ ಲೋಕಸಭೆ ಅನರ್ಹಗೊಳಿಸಿತ್ತು. ಇದಾದ ಬಳಿಕ ರಾಹುಲ್ ಗಾಂಧಿ ತಮ್ಮ ಅಧಿಕೃತ ಸರ್ಕಾರಿ ಬಂಗಲೆಯನ್ನು ತೊರೆದಿದ್ದರು.