ಪ್ರಧಾನಿ ಮೋದಿಗೆ ಅಪಮಾನ ಆರೋಪ: ದೀದಿ ಬೆನ್ನಿಗೆ ನಿಂತ ಸಿದ್ದರಾಮಯ್ಯ

ಯಾಸ್‌ ಚಂಡಮಾರುತದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಮತಾ ಬ್ಯಾನರ್ಜಿ ನಡುವೆ ನಡೆದ ಸಭೆಯಲ್ಲಿ ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಅಗೌರವ ತೋರಿ ಧಾರ್ಷ್ಟ್ಯ ಪ್ರದರ್ಶಿಸಿದ್ದಾರೆ ಎಂದು ಕೇಂದ್ರ ಆರೋಪಿಸಿದಾಗ್ಯೂ, ಕರ್ನಾಟಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಗಾಳ ಮುಖ್ಯಮಂತ್ರಿಯ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಕರೆದಿದ್ದ ಸಭೆಯಿಂದ ಅರ್ಧಕ್ಕೆ ಹೊರನಡೆದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ನಿರ್ಧಾರ ಸರಿಯಾಗಿದೆ. ಆದರೆ, ಇದನ್ನೇ ದೊಡ್ಡದಾಗಿ ಬಂಬಿಸಿ ಬಿಜೆಪಿಯವರು ಮಮತಾ ಅವರನ್ನು ಟೀಕಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಆ ರಾಜ್ಯದ ವಿಧಾನಸಭೆಯ ಪ್ರತಿಪಕ್ಷ ನಾಯಕರನ್ನು ಪ್ರಧಾನಿಯವರ ಸಭೆಗೆ ಆಹ್ವಾನಿಸಲಾಗಿತ್ತು. ಹೀಗಾಗಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಮಮತಾ ಬ್ಯಾನರ್ಜಿಯವರು ಬೇಸರದಿಂದ ಹೊರ ನಡೆದಿದ್ದಾರೆ, ಅದರಲ್ಲಿ ತಪ್ಪೇನೂ ಇಲ್ಲ ಎಂದು ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಇಬ್ಬಂದಿತನಕ್ಕೆ ತೀಕ್ಷ್ಣವಾಗಿ ತಿವಿದ ಸಿದ್ದರಾಮಯ್ಯ, ಇಲ್ಲಿ (ಕರ್ನಾಟಕದಲ್ಲಿ) ವಿಪಕ್ಷ ನಾಯಕರು ಸಭೆ ನಡೆಸುವಂತಿಲ್ಲ ಎನ್ನುತ್ತಾರೆ. ಅಲ್ಲಿ, ಪ್ರಧಾನಿಯವರೇ ವಿರೋಧ ಪಕ್ಷದ ನಾಯಕರನ್ನು ಕರೆಯಿಸಿಕೊಂಡು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಆದರೆ, ಇದೇ ಪ್ರಧಾನಿಯವರು ಗುಜರಾತ್‍ಗೆ ಹೋದಾಗ ಮಾತ್ರ ಯಾವುದೇ ಸಭೆಗಳಿಗೆ ಪ್ರತಿಪಕ್ಷ ನಾಯಕರನ್ನು ಆಹ್ವಾನಿಸುವುದಿಲ್ಲ. ಏಕೆಂದರೆ ಅಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರು ಕಾಂಗ್ರೆಸ್ಸಿಗರು ಎಂದು ಹೇಳಿದ್ದಾರೆ.

ಝೂಮ್ ಸಭೆಯ ಜಿಲ್ಲಾಧಿಕಾರಿಗಳಿಂದ ಮೂಲಕ ಮಾಹಿತಿ ಸಂಗ್ರಹಿಸುವೆ ಎಂದರೆ ಇಲ್ಲ ಎನ್ನುತ್ತಾರೆ. ಮಾಹಿತಿ ಇಲ್ಲದೆ ರಾಜ್ಯದ ಜನರನ್ನು ರಕ್ಷಣೆ ಮಾಡುವುದಾದರೂ ಹೇಗೆ? ಸರ್ಕಾರ ಕೊಡುವ ಸುಳ್ಳು ಅಂಕಿ-ಅಂಶ ನೆಚ್ಚಿಕೊಂಡು ಕೂರಲು ಆಗುವುದೇ ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಮಮತಾ ಬ್ಯಾನರ್ಜಿ ಪ್ರಧಾನಮಂತ್ರಿ ಹಾಗೂ ರಾಜ್ಯಪಾಲರ ಹುದ್ದೆಗೂ ಗೌರವ ನೀಡದೆ ಸಭೆಯಿಂದ ತರಾತುರಿಯಲ್ಲಿ ನಿರ್ಗಮಿಸಿದ್ದಾರೆ. ಇದು ಅವರ ಅಹಂಕಾರಕ್ಕೆ ಸಾಕ್ಷಿ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ಬೆನ್ನಿಗೆ ಬಂಗಾಳದ ಮುಖ್ಯ ಕಾರ್ಯದರ್ಶೀಯನ್ನು ತರಾತುರಿಯಲ್ಲಿ ವಾಪಾಸ್‌ ಕರೆಸುವ ಮೂಲಕ ಕೇಂದ್ರ ಹಗೆ ಸಾಧಿಸಿತ್ತು.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...