ನವದೆಹಲಿ: ಜೂನ್ 9 ರ ಭಾನುವಾರ ಸಂಜೆ 6ಕ್ಕೆ ನರೇಂದ್ರ ಮೋದಿ (Narendra Modi) ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ಇಂದು ಎನ್ ಡಿಎ (NDA) ಸಂಸದರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಕುರಿತು ಚರ್ಚೆ ನಡೆಯಿತು. ಭಾನುವಾರ ಪ್ರಮಾಣ ವಚನ ನಡೆಯಲಿದೆ ಎನ್ನುವುದು ಅಧಿಕೃತವಾಗಿ ಪ್ರಕಟವಾಗಿದೆ. ಯಾರೆಲ್ಲ ಪ್ರಮಾಣ ವಚನ ನಡೆಸಲಿದ್ದಾರೆ ಎನ್ನುವುದು ಬಹಿರಂಗವಾಗಿಲ್ಲ.
ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ, ನಾನು ಈಗಾಗಲೇ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದರು.
ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ 293 ಸ್ಥಾನಗಳಲ್ಲಿ ಗೆಲುವು ಕಂಡಿದೆ. ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ನಿತೀಶ್ ಕುಮಾರ್ ಅವರ ಜೆಡಿಯು ಕ್ರಮವಾಗಿ 16 ಮತ್ತು 12 ಸ್ಥಾನಗಳನ್ನು ಗೆದ್ದು ಕೊಟ್ಟಿದ್ದಾರೆ. ಇನ್ನುಳಿದಂತೆ 10 ಜನ ಪಕ್ಷೇತರ ಅಭ್ಯರ್ಥಿಗಳು ಮೋದಿಗೆ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಎನ್ ಡಿಎ ಸಂಖ್ಯಾ ಬಲ 303ಕ್ಕೆ ಏರಿಕೆ ಕಂಡಿದೆ.