• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೋದಿಯ ಜನಪ್ರಿಯತೆ ಕುಸಿದಿದೆ, ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೇರಲಿದೆ – ಸಿದ್ದರಾಮಯ್ಯ

Any Mind by Any Mind
October 18, 2021
in ಕರ್ನಾಟಕ
0
ಮೋದಿಯ ಜನಪ್ರಿಯತೆ ಕುಸಿದಿದೆ, ಕಾಂಗ್ರೆಸ್‌  ಮತ್ತೆ ಅಧಿಕಾರಕ್ಕೇರಲಿದೆ – ಸಿದ್ದರಾಮಯ್ಯ
Share on WhatsAppShare on FacebookShare on Telegram

ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಯ ಕಾರ್ಯಕ್ಷಮತೆ ಅದು ಮುಂದಿನ ಚುನಾವಣೆಗಳಲ್ಲಿ ಸೋಲಲಿದೆ ಎನ್ನುವುದನ್ನು ಖಚಿತಪಡಿಸುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ದಿ.ಪ್ರಿಂಟ್‌ ಗೆ ನೀಡಿರುವ ಸಂದರ್ಶನದಲ್ಲಿ, “ನರೇಂದ್ರ ಮೋದಿ ಜನಪ್ರಿಯತೆ ಕುಸಿದಿದೆ. 2019ರಲ್ಲಿ ಅವರಿಗಿದ್ದ ಜನಪ್ರಿಯತೆಗೆ ಹೋಲಿಸುವುದಾದರೆ ಈಗ ಅವರ ಜನಪ್ರಿಯತೆಗೆ ಪೆಟ್ಟು ಬಿದ್ದಿದೆ. ಹಣದುಬ್ಬರ, ಹೆಚ್ಚುತ್ತಿರುವ ನಿರುದ್ಯೋಗ ಪ್ರಮಾಣ ಹಾಗೂ ಅಸಮರ್ಪಕ ಕೋವಿಡ್‌ ನಿರ್ವಹಣೆಯಿಂದಾಗಿ ನಾಗರಿಕರು ಅಸಮಾಧನಗೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಸುಳ್ಳುಗಳನ್ನು ಜನರು ಅರಿತುಕೊಳ್ಳಲು ಆರಂಭಿಸಿದ್ದಾರೆ. ನರೇಂದ್ರ ಮೋದಿ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳ ಸಹಾಯದಿಂದ ದೇಶದಲ್ಲಿ ಭವ್ಯತೆಯ ಭ್ರಮೆಯನ್ನು ಸೃಷ್ಟಿಸಿ ಕಾಂಗ್ರೆಸ್‌ಗೆ ಪರ್ಯಾಯವಾಗಿ ಬಿಜೆಪಿಯನ್ನು ಬಿಂಬಿಸಿದ್ದರು. ಮೋದಿಯಷ್ಟು ಯಾರೂ ಸುಳ್ಳು ಹೇಳುವುದಿಲ್ಲ ಎಂಬ ಸತ್ಯವನ್ನು ಜನರು ಈಗ ಅರಿತುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ವಿರುದ್ಧ ಕಾಂಗ್ರೆಸ್‌ನ ತಂತ್ರಗಾರಿಕೆ ಏನು ಎಂಬ ಪ್ರಶ್ನೆಗೆ, “ನಾವು ಮಾಡಬೇಕಾಗಿರುವುದು ಕೋವಿಡ್ -19 ನಿಂದ ಭ್ರಷ್ಟಾಚಾರದವರೆಗೆ ಈ ಸರ್ಕಾರ ಮಾಡಿರುವ  ವೈಫಲ್ಯಗಳನ್ನು ಪರಿಣಾಮಕಾರಿಯಾಗಿ ಎತ್ತಿ ತೋರಿಸುವುದು. ರೈತರು, ಯುವಕರು, ಮಹಿಳೆಯರು, ಕಾರ್ಮಿಕರು ಎಲ್ಲರೂ ಈ ಸರ್ಕಾರದಿಂದ ಬೇಸತ್ತಿದ್ದಾರೆ, ” ಎಂದು ಅವರು ಹೇಳಿದ್ದಾರೆ.

ದೇಶದಾದ್ಯಂತ ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್ ನೆಲಕಚ್ಚಿಕೊಳ್ಳುತ್ತಿದೆ ಏಕೆ ಎಂದು ಕೇಳಿದಾಗ, “ಅನೇಕ ರಾಜ್ಯಗಳಲ್ಲಿ, ನಮ್ಮ ಪಕ್ಷದ ನಾಯಕರು ಪ್ರಾದೇಶಿಕ ಪಕ್ಷಗಳನ್ನು ರಚಿಸಲು ಪಕ್ಷದಿಂದ ಹೊರಹೋದರು. ಆಂಧ್ರಪ್ರದೇಶದಲ್ಲಿ ವೈಎಸ್‌ಆರ್‌ಸಿಪಿ ಆಗಿರಲಿ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಆಗಿರಲಿ ಅಥವಾ ಮಹಾರಾಷ್ಟ್ರದಲ್ಲಿ ಎನ್‌ಸಿಪಿಯಾಗಿರಲಿ, ಅವರೆಲ್ಲರೂ ಕಾಂಗ್ರೆಸ್‌ನಲ್ಲಿದ್ದರು ಎಂದು ಅವರು ಹೇಳಿದ್ದಾರೆ. “ವಿವಿಧ ಕಾರಣಗಳಿಗಾಗಿ, ಅವರು ಬೇರೆ ಬೇರೆ ಮಾರ್ಗಗಳನ್ನು ಹೊಂದಿದ್ದಾರೆ ಆದರೆ ಅವರು ಇನ್ನೂ ಕಾಂಗ್ರೆಸ್‌ನ ಮೌಲ್ಯಗಳು ಮತ್ತು ಸಿದ್ಧಾಂತವನ್ನು ಎತ್ತಿಹಿಡಿಯುತ್ತಾರೆ.” ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಮ್ಮ ನಾಯಕರು ಒಡೆದು ಪ್ರಾದೇಶಿಕ ಪಕ್ಷಗಳನ್ನು ರಚಿಸಿದ್ದಾರೆ, ಹೌದು, ಅದರರ್ಥ ಕಾಂಗ್ರೆಸ್ ಎಲ್ಲೆಡೆ ದುರ್ಬಲವಾಗಿದೆ ಎಂದಲ್ಲ. ದೇಶದಾದ್ಯಂತ ನೆಲೆ ಹೊಂದಿರುವ ಏಕೈಕ ಪಕ್ಷ ಕಾಂಗ್ರೆಸ್. ನಾವು ಮರಳಿ ಅಧಿಕಾರಕ್ಕೆ ಬರುತ್ತೇವೆ. ಪ್ರಜಾಪ್ರಭುತ್ವದಲ್ಲಿ ಯಾವ ಪಕ್ಷವೂ ಶಾಶ್ವತವಾಗಿ ಅಧಿಕಾರದಲ್ಲಿ ಉಳಿಯುವುದಿಲ್ಲ. ಬದಲಾವಣೆ ನಡೆಯಲಿದೆ ಎಂದು ಅವರು ಹೇಳಿರುವುದಾಗಿ ಪ್ರಿಂಟ್‌ ವರದಿ ಮಾಡಿದೆ.
Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ದೇಶದ ಕಾನೂನು ವ್ಯವಸ್ಥೆ ʻಭಾರತೀಕರಣ’ ಆಗಬೇಕು ಎಂದ ಸಿಜೆಐ ರಮಣ; ಹೀಗೆಂದರೇನು? (ಭಾಗ 1)

Next Post

ಇಂಧನ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಲಾರಿ ಮುಷ್ಕರ ನಡೆಸಲು ಚಿಂತನೆ

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ಇಂಧನ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಲಾರಿ ಮುಷ್ಕರ ನಡೆಸಲು ಚಿಂತನೆ

ಇಂಧನ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಲಾರಿ ಮುಷ್ಕರ ನಡೆಸಲು ಚಿಂತನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada