ಆಲ್ಟ್ ನ್ಯೂಸ್ ಸಂಸ್ಥಾಪಕ ಮೊಹಮದ್ ಜುಬೇರ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದರೂ ಮತ್ತೊಂದು ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ಜೈಲಿನಲ್ಲೇ ಉಳಿಯಬೇಕಾಗಿದೆ.
ಉತ್ತರಪ್ರದೇಶ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಆದರೆ ದೆಹಲಿ ಪೊಲೀಸರು ಒಂದು ಸಮುದಾಯದ ಭಾವನೆಗೆ ನೋವುಂಟು ಮಾಡಿದ ಪ್ರಕರಣದಲ್ಲಿ ಜೈಲಿನಲ್ಲಿ ಉಳಿಯುವಂತಾಗಿದೆ.

ಹಿಂದೂ ಶ್ರೀಗಳ ವಿರುದ್ಧ ಟ್ವೀಟ್ ಮಾಡಿದ ಪ್ರಕರಣದಲ್ಲಿ ಜುಬೇರ್ ಗೆ ಉತ್ತರ ಪ್ರದೇಶ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿತ್ತು. ಆದರೆ ಜುಬೇರ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಜಾಮೀನು ಲಭಿಸಿದೆ.