ಅತ್ಯುನ್ನತ ಫಾರ್ಮ್ ನಲ್ಲಿರುವ ಟೀಂ ಇಂಡಿಯಾ ವೇಗಿ ಮಹಮ್ಮದ್ ಸಿರಾಜ್ ಅವರು ಏಕದಿನ ಅಂತಾರಾಷ್ಟ್ರೀಯ (ODI) ಬೌಲರ್‌ಗಳ ಐಸಿಸಿ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೆ ಏರಿದ್ದಾರೆ. ಆ ಮೂಲಕ ಇದೇ ಮೊದಲ ಬಾರಿಗೆ ಅವರು ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಇದೇ ಮೊದಲ ಬಾರಿಗೆ ನಂಬರ್ 01 ಸ್ಥಾನಕ್ಕೇರಿದ್ದಾರೆ.

ಇತ್ತೀಚಿನ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ಎದುರಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ಜೋಶ್ ಹೇಜಲ್‌ವುಡ್ ಅವರನ್ನು ಹಿಂದಿಕ್ಕಿ ಸಿರಾಜ್ ಮೊದಲ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಸಿರಾಜ್ ಐದು ವಿಕೆಟ್ ಪಡೆದರು. ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಸಿರಾಜ್, ಒಂಬತ್ತು ವಿಕೆಟ್‌ಗಳನ್ನು ಕಬಳಿಸಿ ಪ್ರಮುಖ ವಿಕೆಟ್ ಟೇಕರ್ ಆಗಿ ಮಿಂಚಿದ್ದರು.