ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಮೇ 2 ರಂದು ಪ್ರಕಟವಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಮಮತಾ ಮತ್ತೆ ಅಧಿಕಾರದ ಗದ್ದುಗೆಯೇರಲು ಸಿದ್ದರಾಗಿದ್ದಾರೆ. ಬಿಜೆಪಿ ಪಶ್ಚಿಮ ಬಂಗಾಳವನ್ನು ತನ್ನ ಕಪಿಮುಷ್ಟಿಗೆ ತೆಗೆದುಕೊಳ್ಳಲು ಹರಸಾಹಸ ಮಾಡಿದ್ರೂ ಕೂಡ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಭರ್ಜರಿ ಗೆಲುವು ದಾಖಲಿಸಿದೆ. ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳನ್ನು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ದುರಂಹಕಾರದ ವರ್ತನೆ, ತೋಳ್ಬಲ, ಹಣಬಲ, ಬಿಜೆಪಿಯ ವಿಭಜನೆಯ ಸಿದ್ಧಾಂತ ಹಾಗು ಶ್ರೀರಾಮನನ್ನು ರಾಜಕರಣಕ್ಕೆ ಬಳಸಿದ್ದರಿಂದ ಬಿಜೆಪಿ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಯಿತು ಎಂದಿದ್ದಾರೆ.
ಬ್ಯಾನರ್ಜಿ ನೇತೃತ್ವದ ಟಿಎಂಸಿ ಗೆಲುವಿಗೆ ಅಭಿನಂದನೆ ತಿಳಿಸಿದ ಅವರು ಚುನಾವಣಾ ಆಯೋಗದ ಬಳಕೆಯೂ ಬಿಜೆಪಿ ಸೋಲಿಗೆ ಕಾರಣವಾಗಿದೆ. ಮಮತಾ ಬ್ಯಾನರ್ಜಿ ಕಠಿಣ ಸವಾಲುಗಳನ್ನು ಮೆಟ್ಟಿನಿಂತು ಕೊನೆಗೂ ಬಿಜೆಪಿ ಪ್ರಭಾವಿ ನಾಯಕರ ವಿರುದ್ಧ ರಾಜ್ಯದಲ್ಲಿ ವಿಜಯ ಸಾಧಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.